• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಾಗಡಿಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ:ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಪ್ರತಿಧ್ವನಿ by ಪ್ರತಿಧ್ವನಿ
September 13, 2024
in Top Story, ಇತರೆ / Others, ಕರ್ನಾಟಕ
0
ಮಾಗಡಿಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ:ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
Share on WhatsAppShare on FacebookShare on Telegram

ಮಾಗಡಿ:ಮಾಗಡಿ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಕಾರ ಬೆಂಬಲವನ್ನು ಕೊಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.ಅವರು ಇಂದು ಮಾಗಡಿ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ನೂತನವಾಗಿ ನಿರ್ಮಾಣಗೊಂಡಿರುವ ಬೆಂಗಳೂರು ಹಾಲು ಒಕ್ಕೂಟದ ಮಾಗಡಿ ನೂತನ ಶಿಬಿರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.

ADVERTISEMENT

ಬೆಂಗಳೂರಿನ ಹೊರವಲಯದಲ್ಲಿರುವ ಮಾಗಡಿ ಬಹಳ ಪ್ರಮುಖ ಪಟ್ಟಣ. ಕೆಂಪೇಗೌಡರ ರಾಜಧಾನಿಯಾಗಿದ್ದ ನಗರ. ಮಾಗಡಿ ಅಭಿವೃದ್ಧಿಯಾಗಬೇಕು ಎನ್ನುವ ವಾದದಲ್ಲಿ ನನ್ನ ಸಹಮತವೂ ಇದೆ ಎಂದರು. ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಆಚರಣೆಗೆ ತಂದು ಪ್ರಾಧಿಕಾರವನ್ನೂ ರಚನೆ ಮಾಡಲಾಯಿತು. ಇದರ ಉದ್ದೇಶ ಕೆಂಪೇಗೌಡರನ್ನು ಎಲ್ಲರೂ ಸ್ಮರಿಸಬೇಕು ಎನ್ನುವುದಾಗಿತ್ತು. ಒಕ್ಕಲಿಗರ ನಾಯಕರು ಎಂದು ಹೇಳಿಕೊಳ್ಳುವವರು ಇದನ್ನು ಮಾಡಲಿಲ್ಲ. ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದ್ದು, ಅವರ ಜಯಂತ್ಯೋತ್ಸವವನ್ನು ಆಚರಿಸುವುದು ಸರ್ಕಾರದ ಕರ್ತವ್ಯ ಎಂದು ಭಾವಿಸಿ 2016-17 ರಲ್ಲಿ ಆಚರಣೆಗೆ ತಂದಿದ್ದ ನಮ್ಮ ಸರ್ಕಾರ ಎಂದರು.

ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ:ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ ಮೇಲೆ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ ಎಂದು ವಿರೋಧ ಪಕ್ಷದವರು ಆರೋಪಿಸುತ್ತಿದ್ದಾರೆ. ಹಾಗಾದರೆ ಅಭಿವೃದ್ಧಿ ಕೆಲಸಗಳಿಗೆ 120 ಕೋಟಿ ರೂ.ಗಳನ್ನು ಅನುದಾನವನ್ನು ಏಕೆ ಮೀಸಲಿಡಲಾಗಿದೆ ಎಂದು ಪ್ರಶ್ನಿಸಿದರು. ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಾರೆ. ಹಾಲಿಗೆ ಬೆಲೆಏರಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದರು, ರೈತರಿಗೆ ಹಣ ಸೇರಬೇಡವೇ? ರೈತರಿಗೆ ಇದನ್ನು ಪ್ರಶ್ನಿಸಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದರು.ಹಾಲಿಗೆ 5.೦೦ ರೂ.ಗಳ ಪ್ರೋತ್ಸಾಹಧನ ಘೋಷಿಸಿದ್ದು ನಮ್ಮ ಸರ್ಕಾರ. ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ. ಏನೂ ಮಾಡದೇ ರೈತರ ಮಕ್ಕಳು ,ಮಣ್ಣಿನ ಮಕ್ಕಳು ಎನ್ನುತ್ತಾರೆ. ಅಭಿವೃದ್ಧಿಗಾಗಿ ಮೀಸಲಿಡಲಾಗಿದೆ ಎಂದರು.

ಮೋದಿಯವರ 10 ವರ್ಷದ ಅವಧಿಯಲ್ಲಿ ದೇಶದ ಸಾಲ 182 ಲಕ್ಷ ಕೋಟಿಗೆ ತಲುಪಿದೆ:ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ರಾಜ್ಯದ ಸುಮಾರು 1.20 ಲಕ್ಷ ಕುಟುಂಬಗಳಿಗೆ ವಾರ್ಷಿಕವಾಗಿ 50 ರಿಂದ 60 ಸಾವಿರ ರೂ.ಗಳ ಆರ್ಥಿಕ ಸಹಾಯವನ್ನು ಗ್ಯಾರಂಟಿಗಳ ಮೂಲಕ ಒದಗಿಸಲಾಗುತ್ತಿದೆ. ದೇಶದ ಸ್ವಾತಂತ್ರ್ಯಕ್ಕೆ ದುಡಿದ ನೆಹರೂ ರವರು ಹಾಗೂ ಇಂದಿರಾಗಾಂಧಿ ಸೇರಿದಂತೆ ಹಲವು ನಾಯಕರು ದೇಶಕ್ಕಾಗಿ ದುಡಿದಿದ್ದಾರೆ. ನರೇಂದ್ರ ಮೋದಿ ಸುಳ್ಳು ಹೇಳುತ್ತಾರೆ ಎಂದು ಈ ಬಾರಿ ಮೋದಿಯವರಿಗ ವೋಟು ನೀಡಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ. ಭಾರತದ ಮೇಲಿನ ಸಾಲ 182 ಲಕ್ಷ ಕೋಟಿಯನ್ನು ಮೀರುತ್ತಿದೆ. ಹಿಂದೆ ಸಾಲದ ಮೊತ್ತ 53.11 ಲಕ್ಷ ಕೋಟಿ ಇದ್ದ ಸಾಲದ ಮೊತ್ತ ಈಗ ಕಳೆದ 10 ವರ್ಷದಲ್ಲಿ 182 ಲಕ್ಷ ಕೋಟಿ ರೂ.ಗೆ ತಲುಪಿದೆ. ಗರೀಬಿ ಹಠಾವೋ, ಆಹಾರಸ್ವಾವಲಂಬನೆಯಂತ ಜನಪರ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಕ್ಷ ದೇಶಕ್ಕೆ ಕೊಟ್ಟಿದೆ ಎಂದರು.

ಎಸ್ ಸಿ ಎಸ್ ಪಿ / ಟಿಎಸ್ ಪಿ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ:ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ ಅನುದಾನವನ್ನು ಬೇರೆಯವರಿಗೆ ನೀಡಲಾಗಿದೆ ಎಂದು ಸುಳ್ಳು ನುಡಿದರು. ಆದರೆ 89.62 ಕೋಟಿ ಮೊತ್ತದ ಅವ್ಯವಹಾರವಾಗಿದ್ದು, ಅದರಲ್ಲಿ 56 ಕೋಟಿ ವಸೂಲು ಮಾಡಲಾಗಿದೆ. ಆದರೂ ಅಭಿವೃದ್ಧಿ ನಿಗಮಕ್ಕೆ ಈ ಮುಂಚೆ ನಿಗದಿಪಡಿಸಿರುವಂತೆ ಅನುದಾನವನ್ನು ನೀಡಿ, ಸಮುದಾಯದ ಅಭಿವೃದ್ಧಿಗೆ ಬಳಸಲಾಗುವುದು. ಎಸ್ ಸಿ ಎಸ್ ಪಿ / ಟಿಎಸ್ ಪಿ ಕಾನೂನನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ. ಈ ರೀತಿಯ ಜನಪರ ಕಾನೂನು ಬಿಜೆಪಿ ಆಡಳಿತದಲ್ಲಿರುವ ಯಾವುದೇ ರಾಜ್ಯದಲ್ಲಿ ಜಾರಿಯಾಗಿಲ್ಲ. ಬಿಜೆಪಿಯವರಿಗೆ ಕಾಂಗ್ರೆಸ್ ಸರ್ಕಾರವನ್ನು ಮೂದಲಿಸಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ ಜನಸಂಖ್ಯೆಗೆ ಅನುಗುಣವಾಗಿ ಅವರ ಅಭಿವೃದ್ಧೀಗೆ ಪ್ರತ್ಯೇಕ ಅನುದಾನ ನೀಡುವ ಕಾನೂನು ಕಾಂಗ್ರೆಸ್ ಸರ್ಕಾರ ಎಂದರು.

ಮೋದಿಯವರು ಬಂಡವಾಳಶಾಹಿಗಳ ಪರ:ಬಿಜೆಪಿಯವರ ಬಡವರ ಹಾಗೂ ರೈತರ ವಿರೋಧಿಗಳಾಗಿದ್ದಾರೆ. ಬಿಜೆಪಿಯವರು ಕೈಗಾರಿಕೋದ್ಯಮಿಗಳ 16 ಲಕ್ಷ ಕೋಟಿ ರೂ.ಗಳ ಸಾಲವನ್ನು ಮನ್ನಾ ಮಾಡಿದರು. ಮೋದಿಯವರು ಬಂಡವಾಳಶಾಹಿಗಳ ಪರವಾಗಿದ್ದಾರೆ. ರಾಜ್ಯದ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬಹಳಷ್ಟು ಹಗರಣಗಳು ನಡೆದಿವೆ. ಸುಳ್ಳು ಹೇಳುವ ಬಿಜೆಪಿ ಪಕ್ಷವನ್ನು ನಂಬಬೇಡಿ ಎಂದು ಜನರಿಗೆ ತಿಳಿಸಿದರು. ಕಾಂಗ್ರೆಸ್ ಸರ್ಕಾರ ಸದಾ ಬಡಜನರ ಪರವಾಗಿದೆ. ಶಕ್ತಿ ಯೋಜನೆಯಡಿ 3.50 ಕೋಟಿ ಜನ ಉಚಿತವಾಗಿ ಪ್ರಯಾಣಿಸಿದ್ದು, ಇದುವರೆಗೆ 287 ಕೋಟಿ ಮಹಿಳೆಯರು ಯೋಜನೆಯ ಲಾಭ ಪಡೆದಿದ್ದಾರೆ. ನಾನು ಬಡವರ ಏಳಿಗೆಗಾಗಿಯೇ ಅಧಿಕಾರದಲ್ಲಿರುವುದು ಎಂದು ತಿಳಿಸಿರುವುದು. ಸರ್ಕಾರ ಹಾಲು ಉತ್ಪಾದಕರ , ದಲಿತರ, ಅಲ್ಪಸಂಖ್ಯಾತರ, ಬಡವರ ಪರವಾಗಿರಲಿದೆ. ನನ್ನ ಜೀವನ ತೆರೆದ ಪುಸ್ತಕವಿದ್ದಂತೆ.ರಾಜ್ಯದ ಜನರ ಅಭಿವೃದ್ಧಿಯಲ್ಲಿ ಯಾವುದೇ ರಾಜಿ ಇಲ್ಲ ಎಂದು ತಿಳಿಸಿದರು.

Tags: Bangalore Milk Union.CM Siddaramaiah‌Congress Party
Previous Post

ಓ.ಎಫ್.ಸಿ ಕೇಬಲ್ ಹಾಕೋಕೆ ಲಕ್ಷ ಲಕ್ಷ ಡಿಮ್ಯಾಂಡ್ ಮಾಡಿದ ಅಧಿಕಾರಿ..

Next Post

ಕನ್ನಡದಲ್ಲೊಂದು ವಿಭಿನ್ನ ಕಿರುಚಿತ್ರ “ಜೋಕರ್ ಆಕ್ಟರ್”

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post

ಕನ್ನಡದಲ್ಲೊಂದು ವಿಭಿನ್ನ ಕಿರುಚಿತ್ರ "ಜೋಕರ್ ಆಕ್ಟರ್"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada