• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

DCM DK: ಮಹಾದಾಯಿ ವಿಚಾರವಾಗಿ ರಾಜ್ಯದ ಗೌರವ ಉಳಿಸಲು ಎಲ್ಲಾ ಸಂಸದರು ಒಟ್ಟಾಗಿ ಹೋರಾಡಬೇಕು..

ಪ್ರತಿಧ್ವನಿ by ಪ್ರತಿಧ್ವನಿ
July 24, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ
ಸ್ವಾಭಿಮಾನ ಉಳಿಸಲು ರಾಜ್ಯದ ಎಲ್ಲ ಸಂಸದರು ಒಟ್ಟಾಗಿ ಹೋರಾಡಬೇಕು

ADVERTISEMENT

“ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ ಸಿಎಂ ಪ್ರಮೋದ್ ಸಾವಂತ್ (Pramod Sawanth CM Of Goa) ಅವರ ಹೇಳಿಕೆ ಖಂಡನೀಯ. ಸುಪ್ರೀಂ ಕೋರ್ಟ್ ನಲ್ಲಿ ನಾವು ಸಲ್ಲಿಸಿರುವ ಅರ್ಜಿ ಹಿಂಪಡೆದು, ಶೀಘ್ರವೇ ಕಾಮಗಾರಿ ಆರಂಭಿಸುತ್ತೇವೆ. ಅವರು ಅದನ್ನು ತಡೆಯಲಿ, ನಾನೂ ನೋಡುತ್ತೇನೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ (DCM DK Shivakumar) ಅವರು ಗುಡುಗಿದ್ದಾರೆ.

ನೀರಾವರಿ ಸಚಿವರೂ ಆಗಿರುವ ಶಿವಕುಮಾರ್ (DK Shivakumar) ಅವರು ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.

ಕೇಂದ್ರ ಸರಕಾರ ಯಾವುದೇ ಕಾರಣಕ್ಕೂ ಮಹದಾಯಿ ಯೋಜನೆ ಆರಂಭಿಸಲು ಅನುಮತಿ ನೀಡುವುದಿಲ್ಲ ಎಂದು ಗೋವಾ ಸಿಎಂ ನೀಡಿರುವ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ ಡಿಸಿಎಂ ಅವರು ಹೀಗೆ ಪ್ರತಿಕ್ರಿಯಿಸಿದರು.

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡು ಈ ರೀತಿ ಮಾತನಾಡಿದ್ದಾರೆ. ಅವರಿಗೆ ದೇಶದ ಒಕ್ಕೂಟ ವ್ಯವಸ್ಥೆ ಮೇಲೆ ಗೌರವವಿಲ್ಲ. ಮಹದಾಯಿ ವಿಚಾರದಲ್ಲಿ ನ್ಯಾಯಾಧಿಕರಣದ ತೀರ್ಪು ಹೊರಬಿದ್ದಿದೆ. ಯೋಜನೆ ಜಾರಿಗೆ ಸಂಬಂಧಿಸಿದಂತೆ ಟೆಂಡರ್ ಕರೆಯಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು, ಸ್ಥಳೀಯ ಸಂಸದರು ಹಾಗೂ ಕೇಂದ್ರದ ಹಾಲಿ ಸಚಿವರಾದ ಪ್ರಹ್ಲಾದ್ ಜೋಷಿ (Prahlad Joshi) ಅವರು ಈ ಯೋಜನೆ ಜಾರಿಯಾಗಲಿದೆ ಎಂದು ಸಂಭ್ರಮಾಚರಣೆ ಮಾಡಿದ್ದರು” ಎಂದರು.

ರಾಜ್ಯದ ಗೌರವ ಉಳಿಸಲು ಎಲ್ಲಾ ಸಂಸದರು ಒಟ್ಟಾಗಿ ಹೋರಾಡಬೇಕು

“ಈ ವಿಚಾರವಾಗಿ ರಾಜ್ಯದ ಎಲ್ಲಾ ಸಂಸದರನ್ನು ಭೇಟಿ ಮಾಡುತ್ತೇನೆ. ಇದು ನಮ್ಮ ರಾಜ್ಯದ ಸ್ವಾಭಿಮಾನದ ಪ್ರಶ್ನೆ. ಈ ವಿಚಾರದಲ್ಲಿ ನಮ್ಮ ಸಂಸದರು ಬಾಯಿ ಮುಚ್ಚಿಕೊಂಡಿರುವುದೇ ದೊಡ್ಡ ತಪ್ಪು. ನಮ್ಮ ರಾಜ್ಯದ 28 ಲೋಕಸಭೆ ಸದಸ್ಯರು, 12 ರಾಜ್ಯಸಭೆ ಸದಸ್ಯರು ಒಗ್ಗಟ್ಟಿನಿಂದ ಹೋರಾಡಿ ರಾಜ್ಯದ ಗೌರವ ಕಾಪಾಡಬೇಕಾಗಿದೆ. ಗೋವಾದ ಕೇವಲ ಒಂದು ಸಂಸದರಿಗಾಗಿ ನಮ್ಮ ಕರ್ನಾಟಕವನ್ನು ಮಾರಿಕೊಳ್ಳಲು ಸಾಧ್ಯವಿಲ್ಲ. ಈ ವಿಚಾರವಾಗಿ ಬಿಜೆಪಿ ಸಂಸದರು, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸರಕಾರದ ಸಚಿವರು ಹಾಗೂ ಪ್ರಧಾನಮಂತ್ರಿಗಳ ಮೇಲೆ ಒತ್ತಡ ಹಾಕಬೇಕು. ನಾನು ಕೂಡ ಕೇಂದ್ರ ಜಲಶಕ್ತಿ ಸಚಿವರು ಹಾಗೂ ಪ್ರಧಾನಮಂತ್ರಿಗಳನ್ನು ಭೇಟಿ ಮಾಡಲು ಸಮಯಾವಕಾಶ ಕೇಳುತ್ತೇನೆ. ಎಲ್ಲಾ ಸಂಸದರ ನಿಯೋಗವನ್ನು ಕರೆದೊಯ್ಯುವ ಪ್ರಯತ್ನ ಮಾಡುತ್ತೇನೆ. ನಮ್ಮ ಜೊತೆ ಎಲ್ಲರೂ ಬರುವ ನಂಬಿಕೆ ಇದೆ. ಯಾರು ಬರುತ್ತಾರೋ ಬಿಡುತ್ತಾರೋ ನಮ್ಮ ಕೆಲಸ ನಾವು ಮಾಡುತ್ತೇವೆ” ಎಂದು ತಿಳಿಸಿದರು.

ಸರ್ವಪಕ್ಷ ಸಭೆ ಕರೆಯುತ್ತೀರಾ ಎಂದು ಕೇಳಿದಾಗ, “ಎಲ್ಲಾ ಪಕ್ಷಗಳ ಸಂಸದರ ಸಭೆ ಕರೆಯುವುದಾಗಿ ಹೇಳಿದ್ದೇನೆ” ಎಂದರು.

ಮಹದಾಯಿ ಯೋಜನೆ ವಿಚಾರದಲ್ಲಿ ಕೇಂದ್ರ ಸಚಿವರು ದಾರಿ ತಪ್ಪಿಸುತ್ತಿದ್ದಾರಾ ಎಂದು ಕೇಳಿದಾಗ, “ಕೇಂದ್ರ ಜಲಶಕ್ತಿ ಸಚಿವರು ಈ ವಿಚಾರದಲ್ಲಿ ನಿಷ್ಪಕ್ಷಪಾತವಾಗಿದ್ದಾರೆ. ಅವರು ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ನಾನು ಅವರನ್ನು ಐದಾರು ಬಾರಿ ಈ ವಿಚಾರಕ್ಕಾಗಿ ಭೇಟಿ ಮಾಡಿದ್ದೇನೆ. ಕೇಂದ್ರ ಅರಣ್ಯ ಸಚಿವರು ಕೂಡ ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ಅಭಿವೃದ್ಧಿ ಕೆಲಸಕ್ಕೆ ಬೆಂಬಲವಾಗಿದ್ದಾರೆ. ಎಲ್ಲಾ ಸಮಸ್ಯೆ ಇರುವುದು ಗೋವಾದಲ್ಲಿ” ಎಂದು ಕಿಡಿಕಾರಿದರು.

ರಾಹುಲ್ ಗಾಂಧಿ (Rahul Gandhi) ಅವರ ಆರೋಪ ನಿಜ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮತದಾನದಲ್ಲೂ ಗೋಲ್ಮಾಲ್ ನಡೆದಿದೆ:

ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಮತಗಳ್ಳತನವಾಗಿದೆ ಎಂಬ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಒಪ್ಪುತ್ತೇನೆ. ನಾನು ಕೂಡ ಈ ವಿಚಾರವಾಗಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ತನಿಖೆ ನಡೆಸಿದ್ದೇನೆ. ಇಲ್ಲಿ ಅನೇಕ ಗೋಲ್ಮಾಲ್ ಗಳು ನಡೆದಿವೆ. ಈ ವಿಚಾರವಾಗಿ ಸಧ್ಯಕ್ಕೆ ನಾನು ಹೆಚ್ಚು ವಿಚಾರ ಪ್ರಸ್ತಾಪ ಮಾಡುವುದಿಲ್ಲ. ಮುಂದೆ ಈ ವಿಚಾರವಾಗಿ ಮಾತನಾಡುತ್ತೇನೆ” ಎಂದರು.

Tags: congress dk shivakumarDCM DK ShivakumarDK Shivakumardk shivakumar 2025dk shivakumar bengalurudk shivakumar cmdk shivakumar congressdk shivakumar dcmdk shivakumar falldk shivakumar interviewdk shivakumar latest newsdk shivakumar livedk shivakumar memesdk shivakumar newsdk shivakumar next cmdk shivakumar rallydk shivakumar sondk shivakumar speechdk shivakumar supportdk shivakumar today newsdk shivakumar todays newsdk shivakumar updatesdk shivakumar videos
Previous Post

ವೀರಶೈವ ಲಿಂಗಾಯತ ಸಮುದಾಯ ಒಟ್ಟಾಗದಿದ್ದರೆ ಭವಿಷ್ಯದಲ್ಲಿ ಆಪತ್ತು ಖಚಿತ

Next Post

KJ George: ದೇಶದ ಚುನಾವಣೆಗಳಲ್ಲಿ ಅಕ್ರಮಗಳು ನಡೆಯುತ್ತಿವೆ: ಕೆ.ಜೆ.ಜಾರ್ಜ್

Related Posts

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ
ಕ್ರೀಡೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

by ಪ್ರತಿಧ್ವನಿ
January 18, 2026
0

ಬೆಂಗಳೂರು : ಇಂದು ನಡೆದ ಮೂರನೇ ಮತ್ತು ಕೊನೆಯ ಏಕದಿನ (one-day cricket) ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡದ ನಾಯಕ ಶುಭಮನ್ ಗಿಲ್ ( Shubman Gill)...

Read moreDetails
BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
Next Post

KJ George: ದೇಶದ ಚುನಾವಣೆಗಳಲ್ಲಿ ಅಕ್ರಮಗಳು ನಡೆಯುತ್ತಿವೆ: ಕೆ.ಜೆ.ಜಾರ್ಜ್

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

January 18, 2026
BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada