ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸರ್ವಪಕ್ಷ ಸಭೆ ನಡೆಯಲಿದೆ. ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತ ಇಂದು ಮಹತ್ವದ ಸರ್ವಪಕ್ಷ ಸಭೆ ನಡೆಯಲಿದೆ. ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ಕರೆದಿದ್ದಾರೆ ಸಿಎಂ ಸಿದ್ದರಾಮಯ್ಯ.. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಸರ್ವೋದಯ ಪಕ್ಷ ಸೇರಿದಂತೆ ರಾಜ್ಯದ ಕೇಂದ್ರ ಸಚಿವರು, ಕಾವೇರಿ ಕಣಿವೆಯ ಸಂಸದರು, ಸಚಿವರು ಹಾಗೂ ಶಾಸಕರು ಭಾಗಿಯಾಗಲಿದ್ದಾರೆ..
ಕಾವೇರಿ ನೀರಾವರಿ ನಿಯಂತ್ರಣ ಸಮಿತಿಯು ಪ್ರತಿದಿನ 1 TMC ನೀರು ಬಿಡುಗಡೆಗೆ ಆದೇಶ ಮಾಡಿದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ನೀರು ಬಿಡಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ.. ಸದ್ಯಕ್ಕೆ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಜೂನ್ – ಜುಲೈ ತಿಂಗಳಲ್ಲಿ ಆಗಬೇಕಿದ್ದ ಮಳೆ ಸರಿಯಾಗಿ ಆಗಿಲ್ಲ. ಹೀಗಾಗಿ ಶೇಕಡ 28 ರಷ್ಟು ಮಳೆ ಕೊರತೆ ಎದರಾದ ಕಾರಣ ನೀರು ಬಿಡಲು ಆಗಲ್ಲ ಎಂಬ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂದಿದೆ. ಜೊತೆಗೆ ಕಾವೇರಿ ನೀರಾವರಿ ನಿಯಂತ್ರಣ ಸಮಿತಿಯ ಶಿಫಾರಸ್ಸು ವಿರುದ್ಧ ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರದ ತೀರ್ಮಾನಿಸಿದೆ.
ಕಾವೇರಿ Cauvery ವಿಚಾರದಲ್ಲಿ ರಾಜ್ಯ ಸರ್ಕಾರ ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಲುಕಿದ್ದು, ರಾಜ್ಯ ಸರ್ಕಾರದ ಜೊತೆ ಕೈ ಜೊಡಿಸಿ ಎಂದು ವಿಪಕ್ಷಗಳಲ್ಲಿ ಮನವಿ ಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ. ದೆಹಲಿಯಲ್ಲಿ ನಡೆದಿದ್ದ ನೂತನ ಸಂಸದರ ಸಭೆಯಲ್ಲಿ ಕರ್ನಾಟಕಕ್ಕೆ ಕಷ್ಟದ ಸಮಯದಲ್ಲಿ ರಾಜ್ಯದ ಹಿತ ಕಾಪಾಡಲು ಮನವಿ ಮಾಡಿಕೊಂಡಿದ್ದರು. ಸಿಎಂ ಸಿದ್ದರಾಮಯ್ಯ ಮನವಿಗೆ ಕೇಂದ್ರ ಸಚಿವರಾದ ಕುಮಾರಸ್ವಾಮಿ ಹಾಗು ಪ್ರಹ್ಲಾದ್ ಜೋಷಿ ಬೆಂಬಲಿಸಿದ್ದರು. ಸಚಿವರಾದ ಸೋಮಣ್ಣ, ಶೋಭಾ ಕರಂದ್ಲಾಜೆ ಕೂಡ ರಾಜ್ಯದ ವಿಚಾರದಲ್ಲಿ ಬೆಂಬಲಿಸುವ ಮಾತನಾಡಿದ್ದಾರು. ಇದೀಗ ಕೇಂದ್ರ ಸಚಿವರ ಬೆಂಬಲ ಕೋರಲು ಸಿಎಂ ಮುಂದಾಗಿದ್ದಾರೆ.
ಮುಂಗಾರು ಆರಂಭದಲ್ಲಿ ನೀರಿಕ್ಷಿತ ಪ್ರಮಾಣದಲ್ಲಿ ರಾಜ್ಯಕ್ಕೆ ಮಳೆಯಾಗಿಲ್ಲ. ಮುಂದೆ ಇದೇ ರೀತಿ ಮಳೆ ಕೈ ಕೊಟ್ಟರೆ ಸಮಸ್ಯೆ ಆಗಬಹುದು. ಈಗಿನ ಪರಿಸ್ಥಿತಿಯಲ್ಲಿ ನಿರಂತರವಾಗಿ ತಮಿಳುನಾಡಿಗೆ ನೀರು ಬಿಟ್ಟರೆ ಮುಂದೆ ಸಮಸ್ಯೆ ಆಗಲಿದೆ. ಹೀಗಾಗಿ ನಾವು ನೀರು ಬಿಡಲು ಸಾಧ್ಯವಿಲ್ಲ ಎಂಬ ನಿರ್ಣಯವನ್ನು ಸರ್ಕಾರ
ತೆಗೆದುಕೊಂಡಿದೆ. ನೀವು ವಿಪಕ್ಷಗಳೆಲ್ಲ ಸರ್ಕಾರದ ಪರವಾಗಿ ನಿಲ್ಲಬೇಕು. ನಿಮ್ಮ ಅಗತ್ಯ ಸಲಹೆ ಸೂಚನೆಗಳಿದ್ದರೆ ನೀಡಬಹುದು ಎಂದು ವಿಪಕ್ಷಗಳ ಸಲಹೆ ಕೇಳಲಿದ್ದಾರೆ ಸಿಎಂ ಸಿದ್ದರಾಮಯ್ಯ. ಕೇಂದ್ರಕ್ಕೆ ನಿಯೋಗ ಕೊಂಡೊಯುವ ಬಗ್ಗೆಯೂ ವಿಪಕ್ಷಗಳು ಸಲಹೆ ಕೇಳಲಿದ್ದಾರೆ ಸಿಎಂ. ತಮಿಳುನಾಡಿಗೆ ನೀರು ಬೀಡಲು ಸದ್ಯಕ್ಕೆ ಸಾಧ್ಯವಿಲ್ಲ, ಇದ್ರ ಬಗ್ಗೆ ಮೇಲ್ಮನವಿ ಹಾಗು ಕೇಂದ್ರ ನೀರಾವರಿ ಸಚಿವರಿಗೂ ನಿಯೋಗದ ಮೂಲಕ ಮನವಿ ಕೊಡಲು ನಿರ್ಧಾರ ಮಾಡಲಾಗಿದೆ. ಇಂದಿನ ಸಭೆಗೆ ಯಾರೆಲ್ಲಾ ಬರ್ತಾರೆ..? ಮಂಡ್ಯ ಸಂಸದರೂ ಕೇಂದ್ರ ಸಚಿವರೂ ಆಗಿರುವ ಕುಮಾರಸ್ವಾಮಿ ಬರ್ತಾರಾ..? ಅನ್ನೋದನ್ನು ಕಾದು ನೋಡ್ಬೇಕು.
ಕೃಷ್ಣಮಣಿ