• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಇಸ್ರೊ ಭೇಟಿಗೆ ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ | ಯಾವೆಲ್ಲ ಮಾರ್ಗಗಳು ಬದಲಾವಣೆ

ಪ್ರತಿಧ್ವನಿ by ಪ್ರತಿಧ್ವನಿ
August 25, 2023
in ಇದೀಗ, ಕರ್ನಾಟಕ, ದೇಶ
0
ಪ್ರಧಾನಿ ಮೋದಿ

ಪ್ರಧಾನಿ ಮೋದಿ

Share on WhatsAppShare on FacebookShare on Telegram

ಚಂದ್ರಯಾನ 3ರ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ವಿಜ್ಞಾನಿಗಳ ಸಾಧನೆ ಶ್ಲಾಘಿಸಲು ಶನಿವಾರ (ಆಗಸ್ಟ್‌ 25) ಪ್ರಧಾನಿ ಮೋದಿ ಬೆಂಗಳೂರಿನ ಇಸ್ರೊ ಕಚೇರಿಗೆ ಆಗಮಿಸುತ್ತಿದ್ಧಾರೆ.

ADVERTISEMENT

ಆಗಸ್ಟ್‌ 23ರಂದು ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಇಳಿಕೆಯಾದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ದಕ್ಷಿಣ ಆಫ್ರಿಕಾದಲ್ಲಿದ್ದರು.

ಅಲ್ಲಿಂದ ದೂರವಾಣಿ ಕರೆ ಮಾಡಿ ಇಸ್ರೊ ಅಧ್ಯಕ್ಷ ಎಸ್ ಸೋಮನಾಥ್ ಜೊತೆ ಮಾತನಾಡಿದ್ದ ಪ್ರಧಾನ ಮಂತ್ರಿಗಳು ನಾಳೆ ಖುದ್ದು ಬೆಂಗಳೂರಿನ ಇಸ್ರೋ ಕಚೇರಿಗೆ ಬಂದು ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ. ಪ್ರಧಾನಿ ಮೋದಿ ಶನಿವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ.

ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ನಲ್ಲಿ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗಿಯಾಗಿರುವ ಪ್ರಧಾನಿ ಮೋದಿ ಅಲ್ಲಿಂದ ನೇರವಾಗಿ ನಾಳೆ ಬೆಳಗ್ಗೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಹೀಗಾಗಿ ನಾಳೆ ನಗರದ ಕೆಲ ರಸ್ತೆಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

ಶನಿವಾರ ನಸುಕಿನ ಜಾವ 4:30 ರಿಂದ ಬೆಳಿಗ್ಗೆ 9:30 ರ ವರೆಗೆ ಕೆಳಕಂಡ ರಸ್ತೆ ಮಾರ್ಗ ಬದಲಾವಣೆ ಮಾಡಲಾಗಿದ್ದು, ಸಾರ್ವಜನಿಕರು ಈ ರಸ್ತೆಗಳ ಬದಲಾಗಿ ಪರ್ಯಾಯ ಮಾರ್ಗ ಬಳಕೆಗೆ ಬೆಂಗಳೂರು ಸಂಚಾರಿ ಪೋಲಿಸರು ಮನವಿ ಮಾಡಿದ್ದಾರೆ.

  • ಓಲ್ಡ್ ಏರ್ಪೋರ್ಟ್ ರಸ್ತೆ
  • ಓಲ್ಡ್ ಮದ್ರಾಸ್ ರಸ್ತೆ
  • ಎಂ.ಜಿ.ರಸ್ತೆ
  • ಕಬ್ಬನ್ ರಸ್ತೆ
  • ರಾಜಭವನ ರಸ್ತೆ
  • ಬಳ್ಳಾರಿ ರಸ್ತೆ (ಮೇಖ್ರಿ ಸರ್ಕಲ್)
  • ಸಿವಿ ರಾಮನ್ ರಸ್ತೆ
  • ಯಶವಂತಪುರ ಫ್ಲೈ ಓವರ್
  • ತುಮಕೂರು ರಸ್ತೆ (ಯಶವಂತಪುರದಿಂದ ನಾಗಸಂದ್ರದವರೆಗೆ)
  • ಮಾಗಡಿ ರಸ್ತೆ, ಹೊರವರ್ತುಲ ರಸ್ತೆ (ಗೊರಗುಂಟೆ ಪಾಳ್ಯ ಜಂಕ್ಷನ್ನಿಂದ ಸುಮನಹಳ್ಳಿ)
  • ಗುಬ್ಬಿ ತೋಟದಪ್ಪ ರಸ್ತೆ
  • ಜಾಲಹಳ್ಳಿ ಕ್ರಾಸ್ ರಸ್ತೆ

ನಾಳೆ ಬೆಳಗಿನ ಜಾವ 04.00 ಗಂಟೆಯಿಂದ ಬೆಳಗ್ಗೆ 11.00 ಗಂಟೆಯವರೆಗೆ ಭಾರೀ ಸರಕು ಸಾಗಾಣಿಕೆ ವಾಹನ (Heavy Goods Vehicles) ಸಂಚಾರ ನಿಷೇಧಿಸಲಾಗಿದೆ. ಈ ಬಗ್ಗೆ ಬೆಂಗಳೂರು ಸಂಚಾರಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Since @narendramodi is visiting #Bengaluru on August 26, to congratulate @isro team for #Chandrayaan3Success, @blrcitytraffic issues advisory of traffic restrictions. Keep it handy@NewIndianXpress @XpressBengaluru @KannadaPrabha @santwana99 @Cloudnirad @NammaBengaluroo pic.twitter.com/uUyarytqqb

— Bosky Khanna (@BoskyKhanna) August 24, 2023

ಪ್ರಧಾನಿ ಮೋದಿ ಕಾರ್ಯಕ್ರಮ ವೇಳಾಪಟ್ಟಿ

ಬೆಂಗಳೂರಿನ ಇಸ್ರೋ ಕೇಂದ್ರ ಕಚೇರಿಗೆ ಭೇಟಿ ನೀಡುವ ಮೋದಿ

ನಾಳೆ ಬೆಳಗ್ಗೆ 5.55ಕ್ಕೆ ಹೆಚ್ ಎಎಲ್ ಏರ್ಪೋರ್ಟ್ಗೆ ಮೋದಿ ಆಗಮನ

ಬೆಳಗ್ಗೆ 6.30ರವರೆಗೆ ಏರ್ಪೋರ್ಟ್ನಲ್ಲಿ ವಿಶ್ರಾಂತಿ

ಬೆಳಗ್ಗೆ 7 ಗಂಟೆಗೆ ಇಸ್ರೋ ಕೇಂದ್ರ ಕಚೇರಿಗೆ ಭೇಟಿ

ಬೆಳಗ್ಗೆ 8 ಗಂಟೆಯವರೆಗೆ ಇಸ್ರೋ ಕಚೇರಿಯಲ್ಲಿ ಪ್ರಧಾನಿ ಮೋದಿ ಸಭೆ

ಬೆಳಗ್ಗೆ 8.35ಕ್ಕೆ ಬೆಂಗಳೂರಿನಿಂದ ದೆಹಲಿಗೆ ನಿರ್ಗಮನ

ರೋಡ್ ಶೋ: ಮುಂದಿನ ಏಪ್ರಿಲ್ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಪ್ರಧಾನಿ ಆಗಮನವನ್ನು ಸದ್ವಿನಿಯೋಗ ಮಾಡಿಕೊಳ್ಳಲು ಬಿಜೆಪಿ ಯೋಜಿಸುತ್ತಿದೆ. ಅದ್ಧೂರಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಬಿಜೆಪಿ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಸ್ವಾಗತಕ್ಕೆ ಎಚ್ಎಎಲ್ ಏರ್ಪೋರ್ಟ್ನಲ್ಲಿ 5-6 ಸಾವಿರ ಜನರನ್ನು ಸೇರಿಸಲು ಉದ್ದೇಶಿಸಲಾಗಿದೆ. ಮೋದಿ ಅವರು ಏರ್ಪೋರ್ಟ್ನಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ.

ಪೀಣ್ಯದಲ್ಲಿ ಪ್ರಧಾನಿ ಮೋದಿ ಅವರು ಸುಮಾರು 1 ಕಿಲೋಮೀಟರ್ ರೋಡ್ಶೋ ನಡೆಸುವ ಸಾಧ್ಯತೆ ಹೆಚ್ಚಾಗಿದೆ. ಈ ಬಗ್ಗೆ ಸಿದ್ಧತೆ ಮಾಡಿಕೊಳ್ಳುವಂತೆ ಬೆಂಗಳೂರಿನ ಬಿಜೆಪಿ ಶಾಸಕರಿಗೆ ಕೂಡ ಸೂಚನೆ ನೀಡಲಾಗಿದೆ.

Tags: BangaloreChandrayaan 3ISROPM ModiPM Narendra Modiಇಸ್ರೊಚಂದ್ರಯಾನ 3ಪ್ರಧಾನಿ ನರೇಂದ್ರ ಮೋದಿಪ್ರಧಾನಿ ಮೋದಿಪ್ರಧಾನಿ ಮೋದಿ ರೋಡ್ ಶೋ
Previous Post

ಯುವ ನಟ ವಿಕ್ರಾಂತ್ ನಟನೆಯ ‘ಸ್ಪಾರ್ಕ್ ಲೈಫ್’ ಬಿಡುಗಡೆಗೆ ಮುಹೂರ್ತ ಫಿಕ್ಸ್

Next Post

ಸೆಟ್ಟೇರಿತು ಮಹಿರ ನಿರ್ದೇಶಕರ ವಿಭಿನ್ನ ಪ್ರಯತ್ನದ ‘ಬಿಳಿ ಚುಕ್ಕಿ ಹಳ್ಳಿ ಹಕ್ಕಿ’ ಸಿನಿಮಾ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಬಿಳಿ ಚುಕ್ಕಿ ಹಳ್ಳಿ ಹಕ್ಕಿ

ಸೆಟ್ಟೇರಿತು ಮಹಿರ ನಿರ್ದೇಶಕರ ವಿಭಿನ್ನ ಪ್ರಯತ್ನದ 'ಬಿಳಿ ಚುಕ್ಕಿ ಹಳ್ಳಿ ಹಕ್ಕಿ' ಸಿನಿಮಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada