• Home
  • About Us
  • ಕರ್ನಾಟಕ
Friday, November 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮೀಸಲಾತಿ ವಿರುದ್ಧ ಮಾತಾಡುತ್ತಿದ್ದವರೆಲ್ಲಾ ಈಗ ಮೀಸಲಾತಿ ಪಡೆದಿದ್ದಾರೆ: ಸಿ.ಎಂ

ಪ್ರತಿಧ್ವನಿ by ಪ್ರತಿಧ್ವನಿ
April 5, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಈಗ ಎಲ್ಲರೂ ಮೀಸಲಾತಿ ಪರವಾಗಿದ್ದಾರೆ. ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ ಹಬ್ಬ ಬಂದಾಗ ಮಾತ್ರ ನನಗೆ ಅನ್ನ ಸಿಗುತಿತ್ತು, ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ: ಜಾರಿ ಮಾಡ್ತೀವಿ: ಸಿಎಂ: ಸಿ.ಎಂ.ಸಿದ್ದರಾಮಯ್ಯ..

ADVERTISEMENT

ಮೀಸಲಾತಿ ವಿರುದ್ಧ ಮಾತಾಡುತ್ತಿದ್ದವರೆಲ್ಲಾ ಈಗ ಮೀಸಲಾತಿ ಪಡೆದು ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಈಗ ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಡಾ.ಬಾಬು ಜಗಜೀವನ ರಾಮ್ ಅವರ 118 ನೇ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಬಾಬು ಜಗಜೀವನ್ ರಾಮ್ ಸ್ವಾತಂತ್ರ್ಯ ಪ್ರೇಮಿ, ಸಾಮಾಜಿಕ ನ್ಯಾಯದ ಪರವಾಗಿದ್ದವರು. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಇದೆ. ಜಾತಿ ಇರುವವರೆಗೂ ಮೀಸಲಾತಿ ಇರಬೇಕು ಎಂದು ಸ್ಪಷ್ಟವಾದ ನಿಲುವು ಹೊಂದಿದ್ದರು ಎಂದು ವಿವರಿಸಿದರು.

ನರೇಂದ್ರ ಮೋದಿಯವರು(Narendra Modi) EWS ಹೆಸರಲ್ಲಿ ಶೇ10 ಕಲ್ಪಿಸಿದ ಬಳಿಕ ಎಲ್ಲರೂ ಮೀಸಲಾತಿ ಫಲಾನುಭವಿಗಳೇ ಆಗಿಬಿಟ್ಟಿದ್ದಾರೆ ಎಂದು ವಿವರಿಸಿದರು.

ಸುಪ್ತ ಪ್ರತಿಭೆ ಹೊರಗೆ ತರುವ ಶಿಕ್ಷಣದಿಂದ ಯುವ ಸಮೂಹ ಸ್ವಾಭಿಮಾನಿಗಳಾಗಿ ಬೆಳೆಯಲು ಸಾಧ್ಯ ಎಂದರು.

ನಮ್ಮ ರಾಜ್ಯದಲ್ಲಿ ಮತ್ತು ತೆಲಂಗಾಣ, ಆಂಧ್ರದಲ್ಲಿ ಮಾತ್ರ SCP-TSP ಕಾಯ್ದೆ ಜಾರಿಯಲ್ಲಿದೆ. ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುವ ಬಿಜೆಪಿ ಅವರ ಆಡಳಿತದ ರಾಜ್ಯಗಳಲ್ಲಿಈ ಕಾಯ್ದೆ ತಂದೇ ಇಲ್ಲ ಏಕೆ ? ಬರೀ ಭಾಷಣ ಮಾಡಿದರೆ ಸಾಕಾ, ಅದು ಕ್ರಿಯೆಯಲ್ಲಿ ಕಾಣಬಾರದಾ ಎಂದು ಪ್ರಶ್ನಿಸಿದರು.

ನಾವು ಜಾರಿ ಮಾಡಿರುವ ಐದೂ ಗ್ಯಾರಂಟಿಗಳೂ ಜನರ ಕೈಯಲ್ಲಿ ಹಣ ಇರಬೇಕು, ಕೊಳ್ಳುವ ಶಕ್ತಿ ಹೆಚ್ಚಾಗಬೇಕು ಎನ್ನುವ ನಮ್ಮ ಉದ್ದೇಶವನ್ನು ಯಶಸ್ವಿಯಾಗಿ ಈಡೇರಿಸಿದೆ ಎಂದರು.

ಜಾತಿ ಸೃಷ್ಟಿಸಿದವರು ನಾವಲ್ಲ. ಆದರೆ ಈ ಜಾತಿಯ ಅಸಮಾನತೆಗೆ ಬಲಿ ಆಗಿರುವವರು ನಾವು. ಜಾತಿ ಇರುವ ವರೆಗೂ ಸಮಾನ ಅವಕಾಶಗಳು ಸಿಗುವುದಿಲ್ಲ. ಏಕೆಂದರೆ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ ಎಂದರು.

ಬಾಬು ಜಗಜೀವನ್ ರಾಮ್ ಅವರು ಕೇಂದ್ರ ಸಚಿವರಾಗಿ ಹಸಿರು ಕ್ರಾಂತಿ ಮಾಡಿ ಎಲ್ಲರಿಗೂ ಆಹಾರ ಸಿಗುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ನಮಗೆಲ್ಲಾ ಹಬ್ಬದ ದಿನ ಮಾತ್ರ ಅನ್ನ ಸಿಗುತ್ತಿತ್ತು. ಈ ಪರಿಸ್ಥಿತಿ ಯಾರಿಗೂ ಬರಬಾರದು, ಯಾರೂ ಹಸಿವಿನಿಂದ ಮಲಗಬಾರದು ಎನ್ನುವ ಉದ್ದೇಶದಿಂದ ಅನ್ನ ಭಾಗ್ಯ ಜಾರಿ ಮಾಡಿದೆ ಎಂದು ವಿವರಿಸಿದರು.

ಹೀಗಾಗಿ ಮಹಾನ್ ಚೇತನ ಬಾಬು ಜಗಜೀವನ್ ರಾಮ್ ಅವರ ಕಾಳಜಿಗಳನ್ನು ಸ್ಮರಿಸಬೇಕು. ಅವರು ಹಾಕಿಕೊಟ್ಟರುವ ಹೆಜ್ಜೆ ಗುರುತುಗಳನ್ನು ಪಾಲಿಸಬೇಕು ಎಂದರು.

ಜಗಜೀವನ್ ರಾಮ್ ಮತ್ತು ಅಂಬೇಡ್ಕರ್ ಇಬ್ಬರಿಗೂ ಸಮಾಜದ ಕಷ್ಟ ಗೊತ್ತಿತ್ತು. ಈ ಕಷ್ಟಗಳಿಗೆ ಪರಿಹಾರ ಕಂಡುಕೊಳ್ಳುವ ಮಾರ್ಗವಾಗಿ ಸಂವಿಧಾನ ಬಂತು, ನಮಗೆಲ್ಲಾ ಶಿಕ್ಷಣ ಸಿಕ್ಕಿತು ಎಂದರು.

ಮತ್ತೊಬ್ಬ ಅಂಬೇಡ್ಕರ್(Ambedkar), ಜಗ ಜೀವನ್ ರಾಮ್ ನಮಗೆ ಸಿಗುವುದಿಲ್ಲ. ಹೀಗಾಗಿ ಇವರು ಬಿಟ್ಟು ಹೋಗಿರುವ ಚಿಂತನೆ ಮತ್ತು ಕಾಳಜಿಗಳನ್ನು ಪಾಲಿಸಬೇಕು ಎಂದರು.

ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ. ಜಾರಿ ಮಾಡೇ ಮಾಡ್ತೀವಿ. ನೀವು ಬೇಡ ಅಂದರೂ ನಾವು ಜಾರಿ ಮಾಡ್ತೀವಿ. ಸುಪ್ರೀಂಕೋರ್ಟ್ ಆದೇಶವನ್ನು ನಾವು ಖಚಿತವಾಗಿ ಪಾಲಿಸುತ್ತೇವೆ. ನಾಗಮೋಹನ್ ದಾಸ್ (Nagamohan Das) ಅವರು ಎರಡು ತಿಂಗಳ ಕಾಲಾವಧಿ ಕೇಳಿದ್ದಾರೆ. ನಾವು ಕೊಟ್ಟಿದ್ದೇವೆ. ಬಳಿಕ ಯಾರಿಗೂ ಅನ್ಯಾಯ ಆಗದಂತೆ ಜಾರಿ ಮಾಡುತ್ತೇವೆ ಎಂದು ಸಿಎಂ ಭರವಸೆ ನೀಡಿದರು.

Tags: AmbedkarBabu Jaga Jeevan RamBJPCM SiddaramaiahCongress PartyDCM DK ShivakumarDK ShivakumarsiddaramaiahVidhanasouda
Previous Post

ಮಹಮ್ಮದ್ ಘೋರಿ, ಮಹಮ್ಮದ್ ಘಜ್ನಿ ಆಡಳಿತದಲ್ಲಿದ್ದಾರೆ – ಜನ ಸುಮ್ಮನಿದ್ರೆ ಬೆಡ್ ರೂಂಗೆ ಟ್ಯಾಕ್ಸ್ ಹಾಕ್ತಾರೆ : ಹೆಚ್.ಡಿ.ಕೆ 

Next Post

ಬೆಲೆ ಏರಿಕೆ ಪ್ರಾರಂಭ ಮಾಡಿದ್ದೇ ಬಿಜೆಪಿ: ಡಿಸಿಎಂ ಡಿ.ಕೆ.ಶಿವಕುಮಾರ್

Related Posts

ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ- ಯುವಜನರಿಗೆ ಸಿಎಂ ಕರೆ..!!
Top Story

ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ- ಯುವಜನರಿಗೆ ಸಿಎಂ ಕರೆ..!!

by ಪ್ರತಿಧ್ವನಿ
November 14, 2025
0

ಬಿ.ಎಸ್.ವಿಶ್ವನಾಥ್ ಅವರ ಆದರ್ಶಗಳನ್ನು ಪಾಲಿಸುವಂತೆ ಹಾಗೂ ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಯುವಜನತೆಗೆ ಕರೆ ನೀಡಿದರು. ಅವರು ಇಂದು...

Read moreDetails
ʼಬಾಯಿ ಮುಚ್ಚಿಕೊಂಡು ವಿಡಿಯೋ ಮಾಡಿʼ-ಜಯಾ ಬಚ್ಚನ್ ಫುಲ್‌ ಗರಂ

ʼಬಾಯಿ ಮುಚ್ಚಿಕೊಂಡು ವಿಡಿಯೋ ಮಾಡಿʼ-ಜಯಾ ಬಚ್ಚನ್ ಫುಲ್‌ ಗರಂ

November 14, 2025
ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ

ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ

November 14, 2025
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

November 14, 2025
ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

November 14, 2025
Next Post

ಬೆಲೆ ಏರಿಕೆ ಪ್ರಾರಂಭ ಮಾಡಿದ್ದೇ ಬಿಜೆಪಿ: ಡಿಸಿಎಂ ಡಿ.ಕೆ.ಶಿವಕುಮಾರ್

Please login to join discussion

Recent News

ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ- ಯುವಜನರಿಗೆ ಸಿಎಂ ಕರೆ..!!
Top Story

ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ- ಯುವಜನರಿಗೆ ಸಿಎಂ ಕರೆ..!!

by ಪ್ರತಿಧ್ವನಿ
November 14, 2025
ʼಬಾಯಿ ಮುಚ್ಚಿಕೊಂಡು ವಿಡಿಯೋ ಮಾಡಿʼ-ಜಯಾ ಬಚ್ಚನ್ ಫುಲ್‌ ಗರಂ
Top Story

ʼಬಾಯಿ ಮುಚ್ಚಿಕೊಂಡು ವಿಡಿಯೋ ಮಾಡಿʼ-ಜಯಾ ಬಚ್ಚನ್ ಫುಲ್‌ ಗರಂ

by ಪ್ರತಿಧ್ವನಿ
November 14, 2025
ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ
Top Story

ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ

by ಪ್ರತಿಧ್ವನಿ
November 14, 2025
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ
Top Story

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

by ಪ್ರತಿಧ್ವನಿ
November 14, 2025
ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌
Top Story

ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

by ಪ್ರತಿಧ್ವನಿ
November 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ- ಯುವಜನರಿಗೆ ಸಿಎಂ ಕರೆ..!!

ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ- ಯುವಜನರಿಗೆ ಸಿಎಂ ಕರೆ..!!

November 14, 2025
ʼಬಾಯಿ ಮುಚ್ಚಿಕೊಂಡು ವಿಡಿಯೋ ಮಾಡಿʼ-ಜಯಾ ಬಚ್ಚನ್ ಫುಲ್‌ ಗರಂ

ʼಬಾಯಿ ಮುಚ್ಚಿಕೊಂಡು ವಿಡಿಯೋ ಮಾಡಿʼ-ಜಯಾ ಬಚ್ಚನ್ ಫುಲ್‌ ಗರಂ

November 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!