• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಈದ್ಗಾ ಮಸೀದಿ ತೆರವು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮಾನ್ಯ ಮಾಡಿದ ಅಲಹಾಬಾದ್ ಹೈಕೋರ್ಟ್

Any Mind by Any Mind
March 15, 2022
in ದೇಶ
0
ಈದ್ಗಾ ಮಸೀದಿ ತೆರವು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮಾನ್ಯ ಮಾಡಿದ ಅಲಹಾಬಾದ್ ಹೈಕೋರ್ಟ್
Share on WhatsAppShare on FacebookShare on Telegram

ಉತ್ತರ ಪ್ರದೇಶದ ಮಥುರಾ ನಗರದಲ್ಲಿ ಕೃಷ್ಣ ದೇಗುಲದ ಪಕ್ಕದಲ್ಲಿರುವ ಮಥುರಾದ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಿಚಾರಣೆಗೆ ಮಾನ್ಯ ಮಾಡಿದೆ.

ADVERTISEMENT

ವಕೀಲರ ಮೂಲಕ ಹಾಜರಾಗದೆ, ಅರ್ಜಿದಾರರು ವ್ಯಕ್ತಿಗತವಾಗಿ ನ್ಯಾಯಾಲಯದಲ್ಲಿ ಹಾಜರಾಗಿದ್ದರಿಂದ ಅರ್ಜಿಯನ್ನು 2021 ಜ.19ರಂದು ವಜಾಗೊಳಿಸಲಾಗಿತ್ತು.

ಕತ್ರಾ ಕೇಶವ್ ದೇವ್ ದೇವಸ್ಥಾನದ 13.37 ಎಕರೆ ಆವರಣದೊಳಗೆ ಭಗವಾನ್ ಕೃಷ್ಣನ ಜನ್ಮಸ್ಥಳದಲ್ಲಿ1669ರಲ್ಲಿ ಮುಘಲ್ ಚಕ್ರವರ್ತಿ ಔರಂಗಝೇಬ್ ದೇವಸ್ಥಾನ ನೆಲಸಮಗೊಳಿಸಿ ಮಸೀದಿಯನ್ನು ನಿರ್ಮಿಸಿದ್ದು, ಮಸೀದಿಯ ಗೋಡೆಗಳಲ್ಲಿ ಈಗಲೂ ಹಿಂದು ಧಾರ್ಮಿಕ ಚಿಹ್ನೆಗಳಿವೆ ಎಂಬ ವಾದದೊಂದಿಗೆ ಮಥುರಾ ನ್ಯಾಯಾಲಯದ ಮೊರೆ ಹೋಗಲಾಗಿದೆ.

ಲಕ್ನೋ ನಿವಾಸಿ ರಂಜನಾ ಅಗ್ನಿಹೋತ್ರಿ ಸೇರಿದಂತೆ ಐವರು ಶಾಹಿ ಈದ್ಗಾ ಮಸೀದಿ ಹಾಗೂ ಒಟ್ಟು 13.7 ಏಕರೆ ಸ್ಥಳವನ್ನು ಹಿಂದೂಗಳಿಗೆ ನೀಡಬೇಕು ಎಂದು ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಹಾಗೂ, 1968ರಲ್ಲಿ ದೇವಾಲಯ ಆಡಳಿತ ಮಂಡಳಿ ಹಾಗೂ ಮಸೀದಿ ಸಮಿತಿ ನಡುವಿನ ರಾಜಿ ತೀರ್ಪನ್ನು ರದ್ದುಗೊಳಿಸುವಂತೆ ಕೂಡಾ ಕೋರಲಾಗಿದೆ.

ಅರ್ಜಿಯಲ್ಲಿ ಶ್ರೀಕೃಷ್ಣ ಜನ್ಮಸ್ಥಾನದ ಭಾಗವಾಗಿ ದೇವಸ್ಥಾನವನ್ನು ನಿರ್ಮಿಸಲು ಮಸೀದಿಯನ್ನು ಹಿಂದುಗಳಿಗೆ ಹಸ್ತಾಂತರ ಮಾಡಲು ನ್ಯಾಯಾಲಯದಿಂದ ನಿರ್ದೇಶನಗಳನ್ನು ಕೋರಲಾಗಿದೆ.

ಉತ್ತರ ಪ್ರದೇಶದ ಸುನ್ನಿ ಸೆಂಟ್ರಲ್‌ ವಕ್ಫ್‌ ಮಂಡಳಿ, ಶಾಹಿ ಮಸೀದಿ ಈದ್ಗಾ ಟ್ರಸ್ಟ್, ಶ್ರೀಕೃಷ್ಣ ಜನ್ಮಭೂಮಿ ಟ್ರಸ್ಟ್, ಶ್ರೀಕೃಷ್ಣ ಜನ್ಮಸ್ಥಳ ಸೇವಾ ಸಂಸ್ಥಾನ ಅವರನ್ನು ಪ್ರತಿವಾದಿಗಳಾಗಿ ಅರ್ಜಿಯಲ್ಲಿ ಹೆಸರಿಸಲಾಗಿದೆ. ಮಾತ್ರವಲ್ಲ, ಪ್ರತಿವಾದಿಗಳು, ಅವರ ಕೆಲಸಗಾರರು, ಬೆಂಬಲಿಗರು, ಅದರ ವಕೀಲರು ಮತ್ತು ಅವರ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬ ವ್ಯಕ್ತಿಯನ್ನು ಆವರಣಕ್ಕೆ ಪ್ರವೇಶಿಸದಂತೆ ನಿರ್ಬಂಧಿಸುವ ನಿಷೇಧಾಜ್ಞೆಗಳನ್ನು ನೀಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಅಲಹಾಬಾದ್ ಹೈಕೋರ್ಟ್‌ ನ ಮುಖ್ಯ ನ್ಯಾಯಮೂರ್ತಿ ರಾಜೇಶ ಬಿಂದಾಲ್ ಮತ್ತು ನ್ಯಾ.ಪ್ರಕಾಶ ಪಾಡಿಯಾ ಅವರ ಪೀಠವು ಮೂಲ ಅರ್ಜಿಯನ್ನು ಈಗ ಮರುಸ್ಥಾಪಿಸಿದ್ದು,ಜು.25ರಂದು ಮುಂದಿನ ವಿಚಾರಣೆ ನಡೆಯಲಿದೆ.

Tags: BJPCongress PartyCovid 19ಅಲಹಾಬಾದ್ ಹೈಕೋರ್ಟ್ಈದ್ಗಾ ಮಸೀದಿಕರೋನಾಕೋವಿಡ್-19ನರೇಂದ್ರ ಮೋದಿ
Previous Post

ʻದೇವೇಗೌಡರ ನೀಲಿಗಣ್ಣಿನ ಹುಡುಗʼ ಸಿಎಂ ಇಬ್ರಾಹಿಂ ಕೈಗೆ ಖಳನಾಯಕರಾಗಬಲ್ಲರೇ?

Next Post

ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ : ಸರ್ಕಾರದ ವಸ್ತ್ರ ಸಂಹಿತೆ ಆದೇಶವನ್ನು ಎತ್ತಿಹಿಡಿದ ಹೈಕೋರ್ಟ್ ತೀರ್ಪು

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
`ಧರ್ಮದ ಅತ್ಯಗತ್ಯ ಆಚರಣೆಗಳು’ಮತ್ತು ಕೋರ್ಟ್ ತೀರ್ಪುಗಳು

ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ : ಸರ್ಕಾರದ ವಸ್ತ್ರ ಸಂಹಿತೆ ಆದೇಶವನ್ನು ಎತ್ತಿಹಿಡಿದ ಹೈಕೋರ್ಟ್ ತೀರ್ಪು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada