• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ವಾರಾಣಸಿ | ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್‌ ಹೈಕೋರ್ಟ್ ಸಮ್ಮತಿ

ಪ್ರತಿಧ್ವನಿ by ಪ್ರತಿಧ್ವನಿ
August 3, 2023
in ಇದೀಗ, ದೇಶ
0
ಜ್ಞಾನವಾಪಿ ಮಸೀದಿ
Share on WhatsAppShare on FacebookShare on Telegram

ಉತ್ತರ ಪ್ರದೇಶದ ವಾರಾಣಸಿಯಲ್ಲಿರುವ ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆ ಮುಂದುವರಿಸಲು ಅಲಹಾಬಾದ್‌ ಹೈಕೋರ್ಟ್‌ ಗುರುವಾರ (ಆಗಸ್ಟ್‌ 3) ಸಮ್ಮತಿಸಿದೆ.

ADVERTISEMENT

ಈ ಮೂಲಕ ದೇವಸ್ಥಾನದ ಇದ್ದ ಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆಯೇ ಎಂಬುದನ್ನು ನಿರ್ಧರಿಸಲು ಸಮೀಕ್ಷೆ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್ಐ) ವಾರಾಣಸಿ ಜಿಲ್ಲಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಜ್ಞಾನವಾಪಿ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.

ಜುಲೈ 21ರಂದು ವಾರಾಣಸಿ ಜಿಲ್ಲಾ ನ್ಯಾಯಾಲಯ ಜ್ಞಾನವಾಪಿ ಮಸೀದಿಯ ಕುರಿತಂತೆ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ಹೈಕೋರ್ಟ್ ಮೊರೆ ಹೋಗಿತ್ತು.

#WATCH | Allahabad HC has said that ASI survey of Gyanvapi mosque complex to start. Sessions court order upheld by HC: Vishnu Shankar Jain, representing the Hindu side in Gyanvapi survey case pic.twitter.com/mnQJrTzS09

— ANI (@ANI) August 3, 2023

“ಜ್ಞಾನವಾಪಿ ಮಸೀದಿಯ ವೈಜಾನಿಕ ಸಮೀಕ್ಷೆ ಪ್ರಾರಂಭಿಸಲು ಅಲಹಾಬಾದ್‌ ಹೈಕೋರ್ಟ್‌ ಸೂಚಿಸಿದೆ. ಸಮೀಕ್ಷೆ ನಡೆಲು ಈಗಾಗಲೇ ಸೆಷನ್ಸ್‌ ನ್ಯಾಯಾಲಯ ನೀಡಿರುವ ತೀರ್ಪನ್ನು ಹೈಕೋರ್ಟ್‌ ಎತ್ತಿಹಿಡಿದಿದೆ””ಎಂದು ಜ್ಞಾನವಪಿ ಪ್ರಕರಣದಲ್ಲಿ ಹಿಂದೂಪರ ವಕೀಲ ಸುದ್ದಿಗಾರರಿಗೆ ತಿಳಿಸಿದರು.

ಉಭಯ ಪಕ್ಷಗಳ ವಕೀಲರ ವಾದವನ್ನು ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ಪ್ರಿಂಕ ದಿವಾಕರ್ ಅವರ ಪೀಠ ಆಗಸ್ಟ್‌ 3ಕ್ಕೆ ಆದೇಶವನ್ನು ಕಾಯ್ದಿರಿಸಿತ್ತು.

ಈ ಸುದ್ದಿ ಓದಿದ್ದೀರಾ? ಕುತೂಹಲ ಮೂಡಿಸಿದ ರಾಕೇಶ್‌ ಟಿಕಾಯತ್‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಕಾಶಿ ವಿಶ್ವನಾಥ ದೇವಾಲಯ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯ ಕುರಿತು ಎಎಸ್ಐಗೆ ಸಮೀಕ್ಷೆ ನಡೆಸುವಂತೆ ನಿರ್ದೇಶನ ಕೋರಿ ಜುಲೈ 21ರಂದು ನಾಲ್ವರು ಹಿಂದೂ ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ವಾರಾಣಸಿ ಜಿಲ್ಲಾ ನ್ಯಾಯಾಲಯ ಪುರಸ್ಕರಿಸಿತ್ತು. ಮಸೀದಿ ಸಂಕೀರ್ಣದಲ್ಲಿ ಎಎಸ್‌ಐ ಸಮೀಕ್ಷೆ ನಡೆಸಲು ವಾರಾಣಸಿ ಸೆಷನ್ಸ್‌ ನ್ಯಾಯಾಲಯ ಆದೇಶಿಸಿತ್ತು.

#WATCH | I welcome this verdict. I am confident that the truth will come out after the ASI survey and Gyanvapi issue will be resolved: UP Deputy CM Keshav Prasad Maurya on Allahabad HC allowing ASI survey of Gyanvapi mosque complex pic.twitter.com/g6MioucQtz

— ANI (@ANI) August 3, 2023

ಜುಲೈ 24 ರಂದು ಸಮೀಕ್ಷೆ ಆರಂಭವಾಗಿತ್ತು. ಆದರೆ ಕೆಲವು ಗಂಟೆಗಳಲ್ಲಿ ಮಸೀದಿ ಸಮಿತಿಯ ಮನವಿ ಮೇರೆಗೆ ಸುಪ್ರೀಂ ಕೋರ್ಟ್‌ ಸಮೀಕ್ಷೆಗೆ ತಡೆ ನೀಡಿತ್ತು.

Tags: Allahabad High CourtArchaeological Survey of IndiaGyanvapi MosqueGyanvapi Mosque SurveyUttar Pradeshಅಲಹಾಬಾದ್‌ ಹೈಕೋರ್ಟ್‌ಜ್ಞಾನವಾಪಿ ಮಸೀದಿಜ್ಞಾನವಾಪಿ ಮಸೀದಿ ಸಮೀಕ್ಷೆ
Previous Post

ದೆಹಲಿ | ರಾಜ್ಯ ಕಾಂಗ್ರೆಸ್‌ ನಾಯಕರ ಜತೆ ವರಿಷ್ಠರ ಸಭೆ ; 20 ಲೋಕಸಭಾ ಕ್ಷೇತ್ರಗಳ ಗೆಲ್ಲಲು ತಂತ್ರ

Next Post

ಪ್ರಧಾನಿ ಮೋದಿ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಜೈವಿಕ ತಂತ್ರಜ್ಞಾನ, ಕೈಗಾರಿಕೆ – ಶೈಕ್ಷಣಿಕ ಕ್ಷೇತ್ರದ ಬಲವರ್ಧನೆಗಾಗಿ 27 ಕೋಟಿಗೂ ಅಧಿಕ ಅನುದಾನ : ಪ್ರಿಯಾಂಕ್‌ ಖರ್ಗೆ
Top Story

ಜೈವಿಕ ತಂತ್ರಜ್ಞಾನ, ಕೈಗಾರಿಕೆ – ಶೈಕ್ಷಣಿಕ ಕ್ಷೇತ್ರದ ಬಲವರ್ಧನೆಗಾಗಿ 27 ಕೋಟಿಗೂ ಅಧಿಕ ಅನುದಾನ : ಪ್ರಿಯಾಂಕ್‌ ಖರ್ಗೆ

by ಪ್ರತಿಧ್ವನಿ
June 13, 2026
0

ಬೆಂಗಳೂರು : ಕರ್ನಾಟಕ ಸರ್ಕಾರವು 27 ಕೋಟಿಗೂ ಹೆಚ್ಚು ಮೌಲ್ಯದ ಪ್ರಮುಖ ನಾವೀನ್ಯತೆ, ಜೈವಿಕ ತಂತ್ರಜ್ಞಾನ ಮತ್ತು ಕೈಗಾರಿಕೆ - ಶೈಕ್ಷಣಿಕ ಉಪಕ್ರಮಗಳನ್ನು ಅನುಮೋದಿಸಿದೆ ಎಂದ ಗೃಹ,...

Read moreDetails
ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

ಇದು ಸಾಮಾನ್ಯ ಮನುಷ್ಯನ ಬಜೆಟ್ ಉಳಿವಿನ ಹೋರಾಟ: ಬಿಜೆಪಿ ವಿರುದ್ಧ ಸುರ್ಜೆವಾಲ ಕಿಡಿ

June 13, 2026
ಭಾಷಾ ಸೌಜನ್ಯ-ಅಧಿಕಾರ ದರ್ಪ ಮತ್ತು ಉತ್ತರದಾಯಿತ್ವ..!

ಭಾಷಾ ಸೌಜನ್ಯ-ಅಧಿಕಾರ ದರ್ಪ ಮತ್ತು ಉತ್ತರದಾಯಿತ್ವ..!

June 13, 2026
“ಕಾಗದದಲ್ಲಿ ಮಾತ್ರ ಗೊಬ್ಬರ ತೋರಿಸುವ ಈ ಮೋಸದ ಆಡಳಿತವನ್ನು ಕರ್ನಾಟಕದ ರೈತರು ಎಂದಿಗೂ ಕ್ಷಮಿಸುವುದಿಲ್ಲ”

“ಕಾಗದದಲ್ಲಿ ಮಾತ್ರ ಗೊಬ್ಬರ ತೋರಿಸುವ ಈ ಮೋಸದ ಆಡಳಿತವನ್ನು ಕರ್ನಾಟಕದ ರೈತರು ಎಂದಿಗೂ ಕ್ಷಮಿಸುವುದಿಲ್ಲ”

June 13, 2026
ಕರ್ನಾಟಕ ರಾಜ್ಯ ಪೊಲೀಸ್‌ಗೆ ‘ಪ್ರೆಸಿಡೆಂಟ್ಸ್ ಕಲರ್’ ಪ್ರಶಸ್ತಿ: ಗೃಹ ಸಚಿವರಿಗೆ ಸಿಎಂ ಡಿ.ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯ ಪೊಲೀಸ್‌ಗೆ ‘ಪ್ರೆಸಿಡೆಂಟ್ಸ್ ಕಲರ್’ ಪ್ರಶಸ್ತಿ: ಗೃಹ ಸಚಿವರಿಗೆ ಸಿಎಂ ಡಿ.ಕೆ ಶಿವಕುಮಾರ್ ಮನವಿ

June 13, 2026
Next Post
ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಧಾನಿ ಮೋದಿ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada