ಕರ್ನಾಟಕದಲ್ಲಿ ಇಂದು 2023ರ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಎಲ್ಲರೂ ಮತಗಟ್ಟೆಗೆ ತೆರಳಿ, ತಮ್ಮ ತಮ್ಮ ಮತ ಚಲಾಯಿಸುತ್ತಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪುಂಡರ ಗುಂಪೊಂದು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಪಾಪಯ್ಯ ಗಾರ್ಡನ್ ಮತಗಟ್ಟೆ ಸಂಖ್ಯೆ 28, 29ರ ಎದುರೇ ಮಾರಾಮಾರಿ ನಡೆದಿದ್ದು, ಸುಮಾರು 30 ಯುವಕರ ಗುಂಪಿನಿಂದ ಮಹಿಳೆಯರು ಸೇರಿ ಹಲವರ ಮೇಲೆ ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗ್ತಿದ್ದು, ಮಾಜಿ ಕಾರ್ಪೊರೇಟರ್ ಲಕ್ಷ್ಮೀ ಪತಿಯಾಗಿರುವ ಕಬ್ಬಾಳ್ ಉಮೇಶ್ ಹುಡುಗರನ್ನು ಕರೆಸಿ ಹಲ್ಲೆ ಮಾಡಿರುವುದಾಗಿ ಆರೋಪ ಮಾಡಿದ್ದಾರೆ. ಸದ್ಯ ಪ್ರಕರಣ ಸಂಬಂಧ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...
Read moreDetails






