2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು, ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ. ಈ ಮಧ್ಯೆ ಬಜರಂಗದಳವನ್ನ ಪಿಎಫ್‌ಐ ಸಂಘಟನೆಗೆ ಹೋಲಿಕೆ ಮಾಡಿರೋ ಆರೋಪದಡಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್ ಸಮನ್ಸ್ ನೀಡಿದೆ. ಬಜರಂಗದಳ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆ ಸಂಬಂಧ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ರಿಗೆ ಪಂಜಾಬಿನ ಸಂಗ್ರೂರ್ ನ್ಯಾಯಾಲ ಸಮನ್ಸ್ ಜಾರಿ ಮಾಡಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಹಿಂದೆ ಭಜರಂಗದಳ ಸಂಘಟನೆಯನ್ನ ಪಿಎಫ್‌ಐ ಜೊತೆ ಹೋಲಿಕೆ ಮಾಡಿದ್ದರು. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಿಶ್ವ ಹಿಂದೂ ಪರಿಷತ್ ಚಂಡೀಗಡ ಘಟಕವು 100 ಕೋಟಿ ರೂಪಾಯಿ ಮಾನಹಾನಿ ಪರಿಹಾರ ಕೋರಿ ನೋಟಿಸ್ ಜಾರಿ ಮಾಡಿತ್ತು.