• Home
  • About Us
  • ಕರ್ನಾಟಕ
Tuesday, July 15, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಸೀದಿ ಆವರಣದಲ್ಲಿ ಜೈ ಶ್ರೀರಾಮ್‌ ಘೋಷಣೆ ಆರೋಪ ;ಪ್ರಕರಣ ರದ್ದುಪಡಿಸಿದ ಹೈ ಕೋರ್ಟ್‌

ಪ್ರತಿಧ್ವನಿ by ಪ್ರತಿಧ್ವನಿ
October 16, 2024
in Top Story, ಇತರೆ / Others
0
Share on WhatsAppShare on FacebookShare on Telegram

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದ ಮೇಲೆ ಬಂಧನಕ್ಕೊಳಗಾದ ಇಬ್ಬರು ವ್ಯಕ್ತಿಗಳ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ADVERTISEMENT

ಪುತ್ತೂರು ತಾಲ್ಲೂಕಿನ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಎರಡನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿನ ಎಲ್ಲ ನ್ಯಾಯಿಕ ಪ್ರಕ್ರಿಯೆ ರದ್ದುಗೊಳಿಸುವಂತೆ ಕೋರಿ ಪುತ್ತೂರಿನ ಬಿಳಿನೆಲೆ ಗ್ರಾಮದ ಕೀರ್ತನ್ ಮತ್ತು ಮಂಗಳೂರಿನ ಕೈಕಂಬದ ಸಚಿನ್ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.

“ದೂರುದಾರರು ಖುದ್ದು ಹೇಳಿರುವಂತೆ ಆ ಭಾಗದಲ್ಲಿ ಹಿಂದೂಗಳು ಮತ್ತು ಮುಸಲ್ಮಾನರು ಒಟ್ಟಾಗಿ ಸೌರ್ಹಾದತೆಯಿಂದ ಜೀವಿಸುತ್ತಿದ್ದಾರೆ. ಆದರೆ ಅರ್ಜಿದಾರರ ವಿರುದ್ಧ ಐಪಿಸಿ ಸೆಕ್ಷನ್ 295 ಎ ( ಧರ್ಮ, ಧಾರ್ಮಿಕ ಭಾವನೆ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವುದು) ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಜೈ ಶ್ರೀರಾಮ್ ಎಂದು ಘೋಷಣೆ ಕೂಗುವುದು ಧಾರ್ಮಿಕ ಭಾವನೆಗೆ ಹೇಗೆ ಧಕ್ಕೆಯಾಗುತ್ತದೆ ಎಂದು ಅರ್ಥವಾಗುತ್ತಿಲ್ಲ. ಜೊತೆಗೆ ಪ್ರಕರಣದಲ್ಲಿ ಯಾವುದೇ ಅಪರಾಧ ಕಂಡು ಬರುತ್ತಿಲ್ಲ. ಹೀಗಿರುವಾಗ ಅರ್ಜಿದಾರರ ವಿರುದ್ಧ ಮುಂದಿನ ಪ್ರಕ್ರಿಯೆಗಳಿಗೆ ಅನುಮತಿ ನೀಡುವುದು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗುತ್ತದೆ” ಎಂದು ಪೀಠ ಅಭಿಪ್ರಾಯಪಟ್ಟಿದೆ.

ಮುಂದುವರಿದು, ಮಹೇಂದ್ರ ಸಿಂಗ್ ಧೋನಿ ವರ್ಸಸ್ ಯರ್ರಗುಂಟ್ಲ ಶ್ಯಾಮಸುಂದರ್ (2017) ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿರುವ ಪೀಠವು ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರದ ಹೋರತಾಗಿ ಯಾವುದೇ ಪ್ರಕರಣವು ಭಾರತೀಯ ದಂಡ ಸಂಹಿತೆ ಸೆಕ್ಷನ್ 295 ಎ ಅಡಿಯಲ್ಲಿ ಅಪರಾಧವಾಗುವುದಿಲ್ಲ ಎಂದು ಪ್ರಕರಣ ರದ್ದುಗೊಳಿಸಿದೆ.

ಅರ್ಜಿದಾರರ ಪರ ವಕೀಲ ಬಿ ಎಸ್‌ ಸಚಿನ್‌ ಅವರು “ಅರ್ಜಿದಾರರ ವಿರುದ್ಧದ ಆರೋಪಗಳೆಲ್ಲವೂ ಸತ್ಯಕ್ಕೆ ದೂರವಾದದ್ದು, ಮಸೀದಿಯೂ ಸಾರ್ವಜನಿಕ ಸ್ಥಳವಾಗಿದ್ದು ಅದನ್ನು ಪ್ರವೇಶಿಸಿದ ಮಾತ್ರಕ್ಕೆ ಅತಿಕ್ರಮಣ ಮಾಡಿದ್ದಾರೆ ಎಂದು ಆಪಾದನೆ ಮಾಡುವುದು ಒಪ್ಪುವಂತದಲ್ಲ. ಹೀಗಾಗಿ ಪ್ರಕರಣ ರದ್ದುಗೊಳಿಸಬೇಕು” ಎಂದು ಮನವಿ ಮಾಡಿದರು.

ಸರ್ಕಾರದ ಪರ ವಾದಿಸಿದ ವಕೀಲೆ ಸೌಮ್ಯಾ ಅವರು “ಪ್ರಕರಣದಲ್ಲಿ ತನಿಖೆಯ ಅಗತ್ಯವಿದೆ.ಹಾಗಾಗಿ ಆರೋಪಿಗಳ ಮನವಿಯನ್ನು ತಿರಸ್ಕರಿಸಬೇಕು” ಎಂದು ಮನವಿ ಮಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕು ಐತ್ತೂರು ಗ್ರಾಮದ ಮರ್ಧಾಳ ಎಂಬಲ್ಲಿರುವ ಬದ್ರಿಯಾ ಜುಮ್ಮಾ ಮಸೀದಿಯ ಆವರಣಕ್ಕೆ ಸೆಪ್ಟೆಂಬರ್‌ 24 ರಂದು ರಾತ್ರಿ ಸುಮಾರು 10.50 ರ ಸಮಯಕ್ಕೆ ಆರೋಪಿಗಳು ಅಕ್ರಮವಾಗಿ ಪ್ರವೇಶಿಸಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದು, ಬ್ಯಾರಿಗಳನ್ನು ಬದುಕಲು ಬಿಡುವುದಿಲ್ಲ ಎಂದು ಬೊಬ್ಬೆ ಹಾಕಿದ್ದಾರೆ ಎಂದು ಆರೋಪಿಸಿ ಮಸೀದಿ ಸಿಬ್ಬಂದಿಗಳು ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ಆರೋಪಿಗಳಿಬ್ಬರ ವಿರುದ್ಧ ಸೆಕ್ಷನ್ 447 (ಕ್ರಿಮಿನಲ್ ಅತಿಕ್ರಮಣಕ್ಕೆ ಶಿಕ್ಷೆ), 505 (ಸಾರ್ವಜನಿಕ ಕಿರುಕುಳಕ್ಕೆ ಕಾರಣವಾಗುವ ಹೇಳಿಕೆಗಳು), 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ), 34 (ಸಾಮಾನ್ಯ ಉದ್ದೇಶ) ಮತ್ತು 295 ಎ ಅಡಿ ಎಫ್‌ಐಆರ್‌ ದಾಖಲಿಸಲಾಗಿತ್ತು. ಇದರ ರದ್ದು ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

Tags: Allegation of Jai Shriram.announcement in mosque premises;filed by Kirtan of BilideneleHigh Court dismissed the caseJai Shri Ram slogans in KadabaJMFC Court of Puttur in Dakshina Kannada district.
Previous Post

ಕೋಲ್ಕತಾದಲ್ಲಿ ದುರ್ಗಾ ಪೂಜೆ ನಡುವೆಯೂ ಮುಂದುವರಿದ ಪ್ರತಿಭಟನೆ

Next Post

ತೆಲಂಗಾಣ:ದೇವಿಯ ವಿಗ್ರಹವನ್ನು ಕಾಲಿನಲ್ಲಿ ಒದ್ದಿದ್ದವ ಪೊಲೀಸ್ ಅತಿಥಿ

Related Posts

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ
Top Story

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

by ಪ್ರತಿಧ್ವನಿ
July 14, 2025
0

ಸರ್ಕಾರಿ ಸಹಾಯಧನ, ಪರಿಹಾರ ಧನ, ಆರ್ಥಿಕ ಸೌಲಭ್ಯಗಳನ್ನು ಸಾಲಕ್ಕೆ ಹೊಂದಾಣಿಕೆ ಮಾಡಿದರೆ, ಬ್ಯಾಂಕ್ ಮೇಲೆ ಕ್ರಮ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕರ್ಸ್‍ಗಳೊಂದಿಗೆ ಸಚಿವ ಸಂತೋಷ ಲಾಡ್ ಸಭೆ...

Read moreDetails

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

July 14, 2025
B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!

B Saroja Devi: ಮಲ್ಲಮ್ಮನ ಪವಾಡ ನಿಲ್ಲಿಸಿದ ಕಲಾ ಸರಸ್ವತಿ..

July 14, 2025

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

July 14, 2025

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

July 14, 2025
Next Post

ತೆಲಂಗಾಣ:ದೇವಿಯ ವಿಗ್ರಹವನ್ನು ಕಾಲಿನಲ್ಲಿ ಒದ್ದಿದ್ದವ ಪೊಲೀಸ್ ಅತಿಥಿ

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ
Top Story

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

by ಪ್ರತಿಧ್ವನಿ
July 14, 2025
Top Story

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

by ಪ್ರತಿಧ್ವನಿ
July 14, 2025
B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!
Top Story

B Saroja Devi: ಮಲ್ಲಮ್ಮನ ಪವಾಡ ನಿಲ್ಲಿಸಿದ ಕಲಾ ಸರಸ್ವತಿ..

by ಪ್ರತಿಧ್ವನಿ
July 14, 2025
Top Story

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

by ಪ್ರತಿಧ್ವನಿ
July 14, 2025
Top Story

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

by ಪ್ರತಿಧ್ವನಿ
July 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

July 14, 2025

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

July 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada