ಟಾಲಿವುಡ್‌ನ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಇಂದು ತಮ್ಮ 41ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಅಲ್ಲು ಅರ್ಜುನ್‌ಗೆ ಬರ್ತ್‌ಡೇ ವಿಶ್ ಮಾಡ್ತಿದ್ದಾರೆ.

ಇನ್ನು ಸ್ಟೈಲಿಶ್ ಸ್ಟಾರ್ ಬರ್ತ್‌ಡೇ ಗಿಫ್ಟ್ ಆಗಿ ʻಪುಷ್ಪʼ ಚಿತ್ರತಂಡ ನಿನ್ನೆ ಪುಷ್ಪ-2 ಸಿನಿಮಾದ ಮೊದಲ ಟೀಸರ್ ರಿಲೀಸ್ ಮಾಡಿದೆ. ಮೈತ್ರಿ ಮೂವಿ ಮೇಕರ್ಸ್ ಸಿನಿಮಾ ನಿರ್ಮಾಣ ಸಂಸ್ಥೆ ಯೂಟ್ಯೂಬ್ ಚಾನಲ್ನಲ್ಲಿ ಟೀಸರ್ ಬಿಡುಗಡೆ ಮಾಡುವ ಮೂಲಕ ಅಲ್ಲು ಹುಟ್ಟುಹಬ್ಬಕ್ಕೆ ಇನ್ನಷ್ಟು ಕಳೆ ತಂದಿದೆ.

ಟೀಸರ್ ರಿಲೀಸ್ ಮಾಡಿದ ಕೆಲವೇ ಹೊತ್ತಲ್ಲಿ ಮೈತ್ರಿ ಮೂವಿ ಮೇಕರ್ಸ್ ಟ್ವಿಟರ್ನಲ್ಲಿ ಪುಷ್ಪ-2 ಚಿತ್ರದಲ್ಲಿ ಅಲ್ಲು ಅರ್ಜುನ್ ಅವರ ಫಸ್ಟ್ ಲುಕ್ ಕೂಡ ರಿಲೀಸ್ ಮಾಡಿದೆ. ಇದೇ ಪೋಸ್ಟರ್ ಅನ್ನು ನಟ ಅಲ್ಲು ಅರ್ಜುನ್ ಕೂಡ ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು, “#Pushpa2TheRule Begins!!!” ಎಂದು ಕ್ಯಾಪ್ಷನ್ ಬರೆದುಕೊಂಡಿದ್ದಾರೆ.
