ನಾನು ಸಭಾಧ್ಯಕ್ಷ ಸ್ಥಾನದಲ್ಲಿ ಇದ್ದರೂ ಸಹ ಉಳ್ಳಾಲ ಕ್ಷೇತ್ರದ ಜನರ ಸೇವೆ ಮಾಡುತ್ತೇನೆ ಎಂದು ಮಂಗಳೂರಿನಲ್ಲಿ ಸಭಾಧ್ಯಕ್ಷ ಯು.ಟಿ ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಕ್ಷೇತ್ರದ ಜನರ ಹಾಗೂ ಕಾರ್ಯಕರ್ತರ ಜೊತೆಯಲ್ಲಿ ನಿಕಟ ಸಂಬಂಧ ಉಳಿಸಿಕೊಳ್ಳುತ್ತೇನೆ ಎಂದಿದ್ದಾರೆ.
ನನ್ನ ಸೇವೆಗೆ ನನ್ನ ಸ್ಥಾನ ಅಡ್ಡಿ ಬರೋದಿಲ್ಲ. ಈ ಹಂತಕ್ಕೆ ಬರಲು ಎಲ್ಲರ ಸಹಕಾರ ಹಾಗೂ ಮಾರ್ಗದರ್ಶನವೇ ಕಾರಣ. ಸಭಾಧ್ಯಕ್ಷ ಸ್ಥಾನ ಗೌರವದ ಹಾಗೂ ಸಂವಿಧನಾತ್ಮಕ ಸ್ಥಾನ . ಇದರ ಗೌರವ ಉಳಿಸಿಕೊಂಡು ಜಿಲ್ಲೆಗೆ ಹಾಗೂ ಕ್ಷೇತ್ರಕ್ಕೆ ಗೌರವ ತರುತ್ತೇನೆ ಎಂದು ಹೇಳಿದ್ದಾರೆ.
ಸಭಾಧ್ಯಕ್ಷ ಸ್ಥಾನದಲ್ಲಿ ಜನರ ಜೊತೆ ಒಡನಾಟದ ಜೊತೆ ಸ್ಥಾನದ ಘನತೆ ಕೂಡ ಉಳಿಸಬೇಕಿದೆ .ಈ ಹೊತ್ತಲ್ಲಿ ಕ್ಷೇತ್ರದ ಜನತೆ ಕೂಡ ನನಗೆ ಬೆಂಬಲ ಕೊಡ್ತಾರೆ ಅನ್ನೋ ವಿಶ್ವಾಸವಿದೆ ಎಂದು ಹೇಳಿದ್ದಾರೆ.