
ಡಾ.ಬಿ.ಆರ್. ಅಂಬೇಡ್ಕರ್ ಕುರಿತು ಅಮಿತ್ ಷಾ ಹೇಳಿಕೆ ಖಂಡಿಸಿ ಚಾಮರಾಜನಗರ ಬಂದ್‌ಗೆ ಕರೆ ನೀಡಲಾಗಿದೆ. ಅಮಿತ್‌ಷಾ ರಾಜೀನಾಮೆ ನೀಡಬೇಕು ಹಾಗು ಅವರು ದೇಶದ ಜನತೆಯಲ್ಲಿ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿರುವ ದಲಿತ ಪರ ಸಂಘಟನೆಗಳು ಚಾಮರಾಜನಗರ ಬಂದ್‌ಗೆ ಕರೆ ನೀಡಿದ್ದು ಸ್ಥಳೀಯ ಶಾಸಕ ಪುಟ್ಟರಂಗಶೆಟ್ಟಿ, ಅಹಿಂದ, ಎಸ್‌ಡಿಪಿಐ, ಬಿಎಸ್‌ಪಿ ಸೇರಿದಂತೆ ಹಲವು ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ.
ಬಂದ್ ಬೆಂಬಲಿಸುವಂತೆ ಈಗಾಗಲೇ ವಿವಿಧ ಸಂಘಟನೆಗಳಿಗೆ ದಲಿತ ಸಂಘಟನೆಗಳು ಮನವಿಯನ್ನೂ ಸಲ್ಲಿಸಿದ್ದು. ಪಟ್ಟಣದ ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ರಜೆ ಘೋಷಿಸಿವೆ. ಆದರೆ ಪರಿಸ್ಥಿತಿಗೆ ಅನುಗುಣವಾಗಿ ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ನೀಡಬೇಕೆ ಬೇಡವೇ ಎಂಬುದರ ಬಗ್ಗೆ ಆಯಾ ಶಾಲಾ ಕಾಲೇಜುಗಳ ಮುಖ್ಯಸ್ಥರ ವಿವೇಚನೆಗೆ ಬಿಡಲಾಗಿದೆ.

ಡಾ. ಬಿ.ಆರ್.ಅಂಬೇಡ್ಕರ್ ಬಗ್ಗೆ ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪೂರ ಬಂದ್‌ಗೂ ಕರೆ ಕೊಡಲಾಗಿದೆ. ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಶಹಾಪೂರ ಬಂದ್‌ಗೆ ಕರೆ ಕೊಡಲಾಗಿದೆ. ಯಾದಗಿರಿ ಜಿಲ್ಲೆಯ ಶಹಾಪೂರ ನಗರ ಇಂದು ಬಂದ್ ಆಗಲಿದ್ದು, ಬೆಳಗ್ಗೆಯಿಂದಲೇ ಅಂಗಡಿ ಮಂಗಟ್ಟು, ಬಸ್ ಸಂಚಾರ ಎಲ್ಲವೂ ಬಂದ್ ಆಗಲಿದೆ.
ಬಂದ್ ಮುನ್ನೆಚ್ಚರಿಕೆ ಕ್ರಮವಾಗಿ ನಗರ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜಿಗೂ ರಜೆ ಘೋಷಣೆ ಆಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಶಾಲಾ, ಕಾಲೇಜು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಸದರಿ ರಜೆ ದಿನವನ್ನು ಮುಂದಿನ ಎರಡು ಶನಿವಾರ ಪೂರ್ಣ ದಿನ ನಡೆಸುವಂತೆ ಶಿಕ್ಷಕರಿಗೆ ಸೂಚನೆ ಕೊಡಲಾಗಿದೆ.