ಮೈಸೂರಿನಲ್ಲಿ ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಮನೆಗಳಿಗೆ ಕಲ್ಲು ತೂರಾಟ ಮಾಡಿ, ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂ ಮಾಡಲಾಗಿದೆ. ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,

ಕೆಲವು ಕಿಡಿಗೇಡಿಗಳ ಕೃತ್ಯದಿಂದ ಹಲ್ಲರೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣ ಆಗಿದೆ. ಎರಡೂ ಸಮುದಾಯದ ಬೀದಿಯಲ್ಲೂ ಕಲ್ಲು ತೂರಾಟ ನಡೆದಿದೆ. ಅಂಬೇಡ್ಕರ್ ನಾಮಫಲಕ ಹಾಕುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ಆಗಿದೆ. ಸ್ಥಳಕ್ಕೆ ಮೈಸೂರು ಎಸ್‌ಪಿ ಸೀಮಾ ಲಾಟ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಘರ್ಷಣೆ ನಡೆಯುತ್ತಿದ್ದಂತೆ ನಂಜನಗೂಡು ಗ್ರಾಮಾಂತರ ಪೊಲೀಸರು ದೌಡಾಯಿಸಿ ಪರಿಸ್ಥಿತಿ ತಿಳಿಗೊಳಿಸುವ ಕೆಲಸ ಮಾಡಿದ್ದಾರೆ. ‘ಹೊಡಿಯೋ.. ಹೊಡಿಯೋ.. ಬಿಡ್ಬೇಡ ಹೊಡೆದಾಕು..’ ಎನ್ನುವ ಮೂಲಕ ಗುಂಪು ಘರ್ಷಣೆ ನಡೆದಿದೆ. ಮನೆಗಳಿಗೆ ಕಲ್ಲು ತೂರಾಟ

ಮಾಡಿ, ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂ ಮಾಡಲಾಗಿದೆ. ಪೊಲೀಸರು ಬಂದ್ರೂ ಪೊಲೀಸರ ಎದುರಲ್ಲೇ ಪೀಸ್ ಪೀಸ್ ಮಾಡಿದ್ದಾರೆ. ಗ್ರಾಮದಲ್ಲಿ ಕಲ್ಲು ತೂರಾಟ ಜೊತೆಗೆ ದೊಣ್ಣೆ ಹಿಡಿದು ಬಡಿದಾಡಿಕೊಂಡಿದ್ದಾರೆ. ನಾಯಕ ಸಮುದಾಯ ಹಾಗು ಎಸ್ಸಿ ಸಮುದಾಯದ ನಡುವೆ ಈ ಘರ್ಷಣೆ ನಡೆದಿದೆ ಎನ್ನಲಾಗ್ತಿದೆ. ಘಟನೆಯಲ್ಲಿ ಓರ್ವ ಸಬ್ ಇನ್ಸ್ಪೆಕ್ಟರ್ ಸೇರಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

