• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಆರೋಪ: ರಾಯಚೂರು ನ್ಯಾಯಾಧೀಶರ ವಿರುದ್ಧ ಆಕ್ರೋಶ

Any Mind by Any Mind
January 26, 2022
in ಕರ್ನಾಟಕ
0
ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಆರೋಪ: ರಾಯಚೂರು ನ್ಯಾಯಾಧೀಶರ ವಿರುದ್ಧ ಆಕ್ರೋಶ
Share on WhatsAppShare on FacebookShare on Telegram

ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಇಟ್ಟು ಧ್ವಜಾರೋಹಣ ಮಾಡಲು ನ್ಯಾಯಾಧೀಶರು ನಿರಾಕರಣೆ ಮಾಡಿ ಸಂವಿಧಾನ ಶಿಲ್ಪಿಗೆ ಮತ್ತು ಸ್ವತಃ ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ ಎಂದು ರಾಯಚೂರು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ವಿವಿಧ ದಲಿತ ಮತ್ತು ಪ್ರಗತಿಪರ ವಕೀಲರು ಹಾಗೂ ಹೋರಾಟಗಾರರು ಬುಧವಾರ ಪ್ರತಿಭಟನೆ ನಡೆಸಿದರು.

ADVERTISEMENT

ರಾಯಚೂರು ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಆಯೋಜಿಸಿದ್ದ ೭೩ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನ ಅವರು ಅಂಬೇಡ್ಕರ್ ಅವರ ಭಾವಚಿತ್ರ ಪೂಜೆಗೆ ನಿರಾಕರಿಸಿ ಆ ಫೋಟೋ ತೆರವು ಮಾಡಿಸಿದ್ದಾರೆ ಮತ್ತು ಆ ವೇಳೆ ದಲಿತ ವಕೀಲರು ನ್ಯಾಯಾಧೀಶರ ಕ್ರಮವನ್ನು ಪ್ರಶ್ನಿಸಿ ಸಮಾರಂಭ ಬಹಿಷ್ಕರಿಸಿ ಹೊರನಡೆದರು ಎನ್ನಲಾದ ವೀಡಿಯೋ ಒಂದು ಬೆಳಗ್ಗೆಯಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ ವಿವಿಧ ದಲಿತ ಮತ್ತು ಪ್ರಗತಿಪರ ಸಂಘಟನೆಗಳು ರಾಯಚೂರಿನಲ್ಲಿ ಘಟನೆಯನ್ನು ಖಂಡಿಸಿ ಬೀದಿಗಿಳಿದು ಪ್ರತಿಭಟನೆ ನಡೆಸಿದರು.

“ನ್ಯಾಯಾಧೀಶರ ವಿರೋಧದ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಆಯೋಜಕರು ಅಂಬೇಡ್ಕರ್ ಭಾವಚಿತ್ರವನ್ನು ತಗೆದಿದ್ದರು. ತಕ್ಷಣವೇ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪರಿಶಿಷ್ಟ ಜಾತಿ ಮತ್ತು ಇತರ ವರ್ಗಗಳ ವಕೀಲರು ನ್ಯಾಯಾಧೀಶರ ನಡೆಯನ್ನು ಟೀಕಿಸಿ ಆಕ್ರೋಶ ವ್ಯಕ್ತಪಡಿಸಿ ಹೊರನಡೆದರು. ಆ ಬಳಿಕ ನ್ಯಾಯಾಧೀಶರು ಮತ್ತು ಅಯೋಜಕರ ನಡುವೆ ಚರ್ಚೆ ನಡೆದು ಕಳೆದ ವರ್ಷ ಈ ಸಂಬಂಧ ಅಂಬೇಡ್ಕರ್ ಭಾವಚಿತ್ರ ಪೂಜೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದ ಪ್ರತಿ ತೋರಿಸಿ ಮನವರಿಕೆ ಮಾಡಿದ ಬಳಿಕ ಮತ್ತೆ ಅಂಬೇಡ್ಕರ್ ಫೋಟೋ ಇಟ್ಟು ಪೂಜೆ ಸಲ್ಲಿಸಲಾಗಿದೆ. ಆದರೆ ನ್ಯಾಯಾಧೀಶರ ನಡೆ ಸಂವಿಧಾನ ಶಿಲ್ಪಿಗೆ ಮಾಡಿದ ಅವಮಾನ. ಇದನ್ನು ಖಂಡಿಸಿ ನಾವು ಹೋರಾಟ ನಡೆಸುತ್ತಿದ್ದೇವೆ” ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಗಣರಾಜ್ಯೋತ್ಸವದಂದು ಇಟ್ಟು ಪೂಜಿಸಬೇಕು ಎಂಬ ಚರ್ಚೆಗಳು ಪ್ರತಿವರ್ಷ ಕೇಳಿಬರುತ್ತವೆ. ಹೀಗಾಗಿ ಅಂಬೇಡ್ಕರ್ ಫೋಟೋವನ್ನು ಗಣರಾಜ್ಯೋತ್ಸವದಂದು ಇಡಬೇಕು ಎಂದು ರಾಜ್ಯ ಸರ್ಕಾರ ಕಳೆದ ವರ್ಷವೇ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಕೆಲವು ಕಡೆ ಗಣರಾಜ್ಯೋತ್ಸ ಆಚರಣೆ ವೇಳೆ ಸಂವಿಧಾನ ರಚಿಸುವಲ್ಲಿ ಮುಖ್ಯ ಪಾತ್ರ ವಹಿಸಿದ ಅಂಬೇಡ್ಕರ್ ಭಾವಚಿತ್ರ ಇಟ್ಟು ಗೌರವಿಸಲಾಗುತ್ತಿದೆ.
ಆದರೆ ರಾಯಚೂರು ನ್ಯಾಯಾಲಯದ ಆವರಣದಲ್ಲಿ ನಡೆದಿದೆ ಎನ್ನಲಾದ ಘಟನೆಯ ವೀಡಿಯೋ ವೈರಲ್ ಆಗುತ್ತಿದ್ದಂತೆ ರಾಯಚೂರು ಸೇರಿದಂತೆ ರಾಜ್ಯದ ವಿವಿಧೆಡೆ ಪ್ರತಿಭಟನೆ ವರದಿಯಾಗಿವೆ. ಮತ್ತು ಖಂಡನಾ ಹೇಳಿಕೆಗಳು ಹೊರಬಿದ್ದಿವೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಕೂಡ ಹಲವು ಸಾಹಿತಿ ಲೇಖಕರು, ಹೋರಾಟಗಾರರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಸಂವಿಧಾನ ಮತ್ತು ಸಂವಿಧಾನ ಶಿಲ್ಪಿಗೆ ಅವಮಾನ ಎಸಗುವ ಇಂತಹ ಘಟನೆಗಳು ದುರಾದೃಷ್ಟಕರ ಎಂಬ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

Tags: BJPCongress PartyCovid 19ಅಂಬೇಡ್ಕರ್ಅವಮಾನಕರೋನಾಕೋವಿಡ್-19ನ್ಯಾಯಾಧೀಶರುನ್ಯಾಯಾಲಯಬಿಜೆಪಿಭಾವಚಿತ್ರ
Previous Post

ದೇಶ ನಮ್ಮದು-ಗಣತಂತ್ರವೂ ನಮ್ಮದು – ನಮಗೆ ನಾವೇ ಅರ್ಪಿಸಿಕೊಂಡ ಸಂವಿಧಾನವೂ ನಮ್ಮದು!

Next Post

ಪ್ರತಿಧ್ವನಿ ಬಜೆಟ್ ಸರಣಿ-1 | ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸವಾಲಾಗಿರುವ ಬೃಹತ್ ಪ್ರಮಾಣದ ವಿತ್ತೀಯ ಕೊರತೆ

Related Posts

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್
Top Story

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

by ಪ್ರತಿಧ್ವನಿ
May 25, 2026
0

ಚೆನೈ : ರಾಜ್ಯದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಮೇಕೆದಾಟು ನೀರಾವರಿ ಯೋಜನೆಗೆ ತಮಿಳುನಾಡಿನ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಈ ಹಿಂದಿನ ಸರ್ಕಾರಗಳು ಇದರ ವಿರುದ್ಧ ನಿಲುವನ್ನು ಹೊಂದಿದ್ದವು, ಅದರಂತೆ...

Read moreDetails
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
Next Post
ಪ್ರತಿಧ್ವನಿ ಬಜೆಟ್ ಸರಣಿ-1 | ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸವಾಲಾಗಿರುವ ಬೃಹತ್ ಪ್ರಮಾಣದ ವಿತ್ತೀಯ ಕೊರತೆ

ಪ್ರತಿಧ್ವನಿ ಬಜೆಟ್ ಸರಣಿ-1 | ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸವಾಲಾಗಿರುವ ಬೃಹತ್ ಪ್ರಮಾಣದ ವಿತ್ತೀಯ ಕೊರತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada