ಉತ್ತರ ಕನ್ನಡದ ಹೊನ್ನಾವರದಿಂದ ಉಡುಪಿ ಕಡೆಗೆ ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕರೆತರುತ್ತಿದ್ದ ಆಂಬುಲೆನ್ಸ್ ಬೈಂದೂರು ತಾಲ್ಲೂಕಿನ ಶಿರೂರು ಟೋಲ್ ಗೇಟ್ ಬಳಿ ಅಪಘಾತಕ್ಕೀಡಾಗಿದ್ದು ನಾಲ್ವರು ಮೃತಪಟ್ಟಿದ್ದಾರೆ.
ಮೃತರ ಗುರುತು ಇನ್ನು ಪತ್ತೆಯಾಗದ ಕಾರಣ ಒಬ್ಬರ ಸ್ಥಿತಿ ಇನ್ನು ಚಿಂತಾಜನಕವಾಗಿದ್ದು ಇಬ್ಬರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಂಬುಲೆನ್ಸ್ನಲ್ಲಿ ಒಟ್ಟು 7ಮಂದಿ ಪ್ರಯಾಣಿಸುತ್ತಿದ್ದರು. ವೇಗವಾಗಿ ಬರುತ್ತಿದ್ದ ಆಂಬುಲೆನ್ಸ್ ಅನ್ನು ಗಮನಿಸಿದ ಟೋಲ್ ಸಿಬ್ಬಂದಿ ರಸ್ತೆಗೆ ಅಡ್ಡಲಾಗಿ ಇಟ್ಟಿದ್ದ ಬ್ಯಾರಿಕೇಡ್ಗಳನ್ನು ತೆರವುಗೊಳಿಸುವ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಅಫಘಾತದಲ್ಲಿ ಟೋಲ್ ಸಿಬ್ಬಂದಿಗೂ ಗಂಭೀರ ಗಾಯಗಳಾಗಿದ್ದು ಘಟನೆ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಅಪಘಾತದ ಭೀಕರೆತೆಗೆ ಸಾಕ್ಷಿಯಾಗಿದೆ.