ಲೋಕಸಭಾ ಎಲೆಕ್ಷನ್ ನಡುವೆ ವಾಕ್ಸಮರ ಜೋರಾಗಿದೆ. ಗಾಂಧಿ ಕುಟುಂಬಕ್ಕೆ ಸ್ಮೃತಿ ಇರಾನಿ ಸಕ್ಕತ್ತಾಗಿಯೇ ಕೌಂಟರ್ ಕೊಟ್ಟಿದ್ದಾರೆ.
ಕಾಂಗ್ರೆಸ್ ಈಗಾಗಲೇ ತನ್ನ ಸೋಲನ್ನು ಒಪ್ಪಿಕೊಂಡಿದೆ. ಗಾಂಧಿ ಕುಟುಂಬದ ಯಾರೊಬ್ಬರೂ ಅಮೇಥಿಯಿಂದ ಸ್ಪರ್ಧಿಸಲು ಮುಂದಾಗುತ್ತಿಲ್ಲ ಅಂದರೆ ಕಾಂಗ್ರೆಸ್ಗೆ ತನ್ನ ಸೋಲು ಖಚಿತ ಎಂಬುದು ಮನವರಿಕೆ ಆಗಿದೆ ಎಂದು ಸ್ಮೃತಿ ಇರಾನಿ ಕುಟುಕಿದರು.ಒಂದು ಕಾಲದಲ್ಲಿ ಕಾಲದಲ್ಲಿ ಕಾಂಗ್ರೆಸ್ನ ಭದ್ರಕೋಟೆಯಂತಿದ್ದ ಅಮೇಥಿ(Amethi)ಯಲ್ಲಿ ಸುಮಾರು 25 ವರ್ಷಗಳ ಬಳಿಕ ಮೊದಲ ಬಾರಿಗೆ ಗಾಂಧಿ ಕುಟುಂಬದ ಹೊರತಾದ ಅಭ್ಯರ್ಥಿಯನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಕಳೆದ ಬಾರಿ ಈ ಕ್ಷೇತ್ರದಿಂದು ಸೋಲುಂಡ ಬಳಿಕ ರಿಸ್ಕ್ ತೆಗೆದುಕೊಳ್ಳಲು ಒಪ್ಪದ ರಾಹುಲ್ ಗಾಂಧಿ(Rahul Gandhi) ಅಮೇಥಿ ಬಿಟ್ಟು ರಾಯ್ ಬರೇಲಿಯಿಂದ ಸ್ಪರ್ಧಿಸಲು ಮುಂದಾಗಿದ್ದಾರೆ. ಇದೀಗ ಇದೇ ವಿಚಾರವನ್ನಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿಯಿಂದ ಸೇರಿದಂತೆ ಅನೇಕ ಬಿಜೆಪಿಗರು ವ್ಯಂಗ್ಯವಾಡಿದ್ದಾರೆ. ಇದೀಗ ಈ ವಿಚಾರದ ಬಗ್ಗೆ ಅಮೇಥಿಯಿಂದ ಮೂರನೇ ಬಾರಿ ಕಣಕ್ಕಿಳಿದಿರುವ ಸ್ಮೃತಿ ಇರಾನಿ(Smirthi Irani) ಕೂಡ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಯ್ ಬರೇಲಿ ಮತ್ತು ಅಮೇಥಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರಾಗುತ್ತಾರೆ ಎನ್ನುವ ವಿಚಾರ ದೇಶಾದ್ಯಂತ ಚರ್ಚೆ ಹುಟ್ಟು ಹಾಕಿತ್ತು. ಕೊನೆಗೂ ಇಂದು ಕಾಂಗ್ರೆಸ್ ಪಟ್ಟಿ ಬಿಡುಗಡೆ ಮಾಡಿತ್ತು. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಖಾಲಿಯಾಗಿರುವ ರಾಯ್ ಬರೇಲಿ ಕ್ಷೇತ್ರದಿಂದ ಮೊದಲಿಗೆ ಪ್ರಿಯಾಂಕಾ ಗಾಂಧಿ ವಾಧ್ರಾ ಹಾಗೂ ಅಮೇಥಿಯಿಂದ ರಾಹುಲ್ ಗಾಂಧಿ ಕಣಕ್ಕಿಳಿಯುತ್ತಾರೆ ಎಂಬ ವಿಚಾರ ಹರಿದಾಡುತ್ತಿತ್ತು. ಇದೀಗ ಕುತೂಹಲಕ್ಕೆ ತೆರೆ ಬಿದ್ದಿದೆ. ಇತ್ತ ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಬಿಜೆ ದಿನೇಶ್ ಪ್ರತಾಪ್ ಅವರನ್ನು ಕಣಕ್ಕಿಳಿಸಿದೆ.