• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸೋತರೂ ಸಾಧನೆ ಮಾಡಿದ ಆಮ್​ ಆದ್ಮಿ, ಕಾಂಗ್ರೆಸ್​ಗೇ ಕಂಟಕ..!

Any Mind by Any Mind
December 9, 2022
in ದೇಶ, ರಾಜಕೀಯ
0
ದೆಹಲಿ MCD ಚುನಾವಣೆ; ಮುನ್ನಡೆ ಕಾಯ್ದುಕೊಂಡ ಎಎಪಿ
Share on WhatsAppShare on FacebookShare on Telegram

ಕಾಂಗ್ರೆಸ್, ಬಿಜೆಪಿ ಎರಡು ರಾಷ್ಟ್ರೀಯ ಪಕ್ಷಗಳು ದೇಶದ ಚುನಾವಣೆಯಲ್ಲಿ ಹೊಡೆದಾಡುತ್ತಿದ್ದು ಗೊತ್ತಿರುವ ಸಂಗತಿ. ಗುಜರಾತ್​ನಲ್ಲಿ ಭಾರೀ ಮಟ್ಟದಲ್ಲಿ ಗೆಲುವು ಸಾಧಿಸಿ ಕನಿಷ್ಠ ಪಕ್ಷ ವಿರೋಧ ಸ್ಥಾನಕ್ಕಾದರೂ ನಾವು ಬರುತ್ತೇವೆ ಎಂದುಕೊಂಡಿದ್ದ ಆಮ್​ ಆದ್ಮಿ ಪಾರ್ಟಿ ಕೇವಲ 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಆದರೆ ಕಾಂಗ್ರೆಸ್​ ಕೂಡ ವಿರೋಧ ಪಕ್ಷದ ಸ್ಥಾನಮಾನ ಕಳೆದುಕೊಳ್ಳುವಂತೆ ಮಾಡುವಲ್ಲಿ ಆಮ್​ ಆದ್ಮಿ ಪಕ್ಷದ ಪಾಲು ಇದೆ ಎನ್ನುವುದನ್ನು ಯಾರಾದರೂ ಒಪ್ಪಿಕೊಳ್ಳಲೇ ಬೇಕು. ಯಾಕಂದರೆ ಆಮ್​ ಆದ್ಮಿ ಪಾರ್ಟಿ ಬಿಜೆಪಿ, ಕಾಂಗ್ರೆಸ್​ಗೆ ಪರ್ಯಾಯವಾಗಿ ದೇಶದಲ್ಲಿ ಬೆಳವಣಿಗೆ ಆಗ್ತಿದ್ದು, ಇದೀಗ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದುಕೊಂಡಿದೆ.

ADVERTISEMENT

ದೆಹಲಿ, ಪಂಜಾಬ್​, ಗೋವಾ ಬಳಿಕ ಗುಜರಾತ್​..!

ದೆಹಲಿಯಲ್ಲಿ ಸರ್ಕಾರ ರಚನೆ ಮಾಡಿರುವ ಆಮ್​ ಆದ್ಮಿ ಪಾರ್ಟಿಯ ಅರವಿಂದ ಕೇಜ್ರಿವಾಲ್​, ಆ ನಂತರ ಗುರಿಯಾಗಿಸಿಕೊಂಡಿದ್ದು ಪಕ್ಕದ ಪಂಜಾಬ್​ ಅನ್ನು. ಆ ನಂತರ ಚುನಾವಣೆ ನಡೆದಾಗ ಗೋವಾದಲ್ಲೂ ಅಸ್ತಿತ್ವ ರೂಪಿಸಿಕೊಂಡಿತ್ತು. ಮೂರು ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷವಾಗಿ ಮಾನ್ಯತೆ ಪಡೆದಿದ್ದ ಆಮ್​ ಆದ್ಮಿ ಪಾರ್ಟಿ ರಾಷ್ಟ್ರೀಯ ಪಕ್ಷವಾಗಿ ಮೇಲ್ಪಂಕ್ತಿ ಪಡೆಯಲು ಬೇಕಿದ್ದದ್ದು ಕೇವಲ ಎರಡು ಸ್ಥಾನಗಳು ಮಾತ್ರ. ಇದೀಗ ಗುಜರಾತ್​ನಲ್ಲಿ ಆಮ್​ ಆದ್ಮಿ ಪಾರ್ಟಿ 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಶೇಕಡ 12ಕ್ಕಿಂತಲೂ ಹೆಚ್ಚಿನ ಮತಗಳನ್ನು ಪಡೆದಿರುವ ಕಾರಣ ರಾಷ್ಟ್ರೀಯ ಪಕ್ಷವಾಗಿ ಆಮ್​ ಆದ್ಮಿ ಪಾರ್ಟಿ ಕೂಡ ಭಡ್ತಿ ಪಟಡೆದುಕೊಂಡಿದೆ.

After Del n Punjab, AAP is now a state recognised party in Goa too. If we get recognised in one more state, we will officially be declared as a “national party”

I congratulate each and every volunteer for their hard work. I thank the people for posing faith in AAP n its ideology pic.twitter.com/7UmsIixF0v

— Arvind Kejriwal (@ArvindKejriwal) August 9, 2022

ರಾಷ್ಟ್ರೀಯ ಪಕ್ಷವಾದಲು ಇರುವ ಅರ್ಹತೆ ಏನು..?

ಯಾವುದೇ ಒಂದು ಪಕ್ಷ ನೋಂದಣಿ ಆದ ಬಳಿಕ ಒಂದು ರಾಜ್ಯದಲ್ಲಿ ಕನಿಷ್ಟ 2 ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕು. ಅಥವಾ ಚಲಾವಣೆಯಾಗಿರುವ ಒಟ್ಟು ಅಧಿಕೃತ ಮತಗಳಲ್ಲಿ ಕನಿಷ್ಠ ಪಕ್ಷ ಶೇಕಡ 6ರಷ್ಟು ಮತಗಳನ್ನು ಪಡೆದಿರಬೇಕು. ಕಳೆದ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿರಬೇಕು. ಆಮ್​ ಆದ್ಮಿ ಪಾರ್ಟಿ ದೆಹಲಿಯಲ್ಲಿ ಭರ್ಜರಿ ಜಯ ದಾಖಲಿಸಿ ಸರ್ಕಾರ ರಚನೆ ಮಾಡಿದ ಬಳಿಕ ಪಂಜಾಬ್​ನಲ್ಲೂ ಸರ್ಕಾರ ರಚನೆ ಮಾಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೋವಾದಲ್ಲಿ ಶೇಕಡ 6.77 ರಷ್ಟು ಮತಗಳನ್ನು ಪಡೆದು ಪ್ರಾದೇಶಿಕ ಪಾರ್ಟಿ ಅನ್ನೋ ಪಟ್ಟ ಪಡೆದುಕೊಂಡಿತ್ತು. ಇದೀಗ 4ನೇ ರಾಜ್ಯವಾಗಿ ಗುಜರಾತ್​ನಲ್ಲಿ ಶೇಕಡ12ಕ್ಕಿಂತ ಹೆಚ್ಚು ಮತ ಹಾಗು 5 ಸ್ಥಾನಗಳಲ್ಲೂ ಗೆಲುವು ಸಾಧಿಸಿದ್ದು, ರಾಷ್ಟ್ರೀಯ ಪಕ್ಷವಾಗಿ ಹೊರ ಹೊಮ್ಮಿದೆ.

ಬೇರೆ ಯಾವ ಪಕ್ಷಕ್ಕಿದೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ?

ರಾಷ್ಟ್ರೀಯ ಪಕ್ಷದ ಸ್ಥಾನಮಾನ ಸಿಗುವ ಬಗ್ಗೆ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ನಾವು ಗುಜರಾತ್​ನಲ್ಲಿ 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದೇವೆ. ಆದರೆ ಆಮ್​ ಆದ್ಮಿ ಪಕ್ಷ ರಾಷ್ಟ್ರೀಯ ಪಕ್ಷವಾಗಿ ಸ್ಥಾನ ಪಡೆದಿದೆ. ಈ ಮೂಲಕ ಅತೀ ವೇಗವಾಗಿ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿದ್ದು ಆಪ್​​ನ ಹೆಗ್ಗಳಿಕೆ ಎಂದಿದ್ದಾರೆ. ಇನ್ನು ದೇಶದಲ್ಲಿ 9ನೇ ರಾಷ್ಟ್ರೀಯ ಪಕ್ಷವಾಗಿ ಆಮ್​ ಆದ್ಮಿ ಪಕ್ಷ ಸೇರ್ಪಡೆ ಆಗಿದೆ. ಇನ್ನುಳಿದಂತೆ ಕಾಂಗ್ರೆಸ್​, ಬಿಜೆಪಿ, ಮಾಯಾವತಿ ನೇತೃತ್ವದ ಬಿಎಸ್​ಪಿ, ಕಮ್ಯುನಿಷ್ಟ್​ ಪಾರ್ಟಿ ಆಫ್​ ಇಂಡಿಯಾ (ಸಿಪಿಐ), ಸಿಪಿಐ ಮ್ಯಾಕ್ಸಿಸ್ಟ್​, ಶರದ್​ ಪವಾರ್​ ಅವರ ಎನ್​ಸಿಪಿ, ಮಮತಾ ಬ್ಯಾನರ್ಜಿ ಅವರ ಟಿಎಂಸಿ ಮತ್ತು ಮೇಘಾಲಯ ಮೂಲದ ನ್ಯಾಷನಲ್​ ಪೀಪಲ್ಸ್​ ಪಾರ್ಟಿ ರಾಷ್ಟ್ರೀಯ ಪಕ್ಷಗಳಾಗಿವೆ.

ಆಮ್​ ಆದ್ಮಿ ಕಾಂಗ್ರೆಸ್​ಗೆ ಕಂಟಕ ಹೇಗೆ..?

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶೀಲಾ ದೀಕ್ಷಿತ್​ ಸರ್ಕಾರ ಇದ್ದಾಗ ಆಮ್​ ಆದ್ಮಿ ಪಾರ್ಟಿ ಅಧಿಕಾರಕ್ಕೆ ಬಂದಿತ್ತು. ಆ ಬಳಿಕ ಪಂಜಾಬ್​ನಲ್ಲಿ ಕಾಂಗ್ರೆಸ್​ ಸರ್ಕಾರವನ್ನು ಮಣಿಸಿ ಆಮ್​ ಆದ್ಮಿ ಪಕ್ಷ ಅಧಿಕಾರ ಹಿಡಿದಿದೆ. ಆ ಬಳಿಕ ಗೋವಾದಲ್ಲೂ ಆಮ್​ ಆದ್ಮಿ ಪಕ್ಷ ಅಖಾಡಕ್ಕೆ ಇಳಿದಿತ್ತು, ಬಿಜೆಪಿ ಪಕ್ಷ ಅಧಿಕಾರ ಹಿಡಿದಿದೆ. ಇದೀಗ ಗುಜರಾತ್​ನಲ್ಲೂ ಶೇಕಡ 12ಕ್ಕಿಂತ ಹೆಚ್ಚಿನ ಮತಗಳನ್ನು ಪಡೆದುಕೊಂಡಿರುವುದು ಕಾಂಗ್ರೆಸ್​ ಪಾಲಿಗೆ ದುಬಾರಿ ಆಗಿದೆ. ರಾಜ್ಯದಲ್ಲೂ ಆಮ್​ ಆದ್ಮಿ ಇದೇ ರೀತಿ ಮತಗಳನ್ನು ಸೆಳೆದುಕೊಂಡರೆ ಕಾಂಗ್ರೆಸ್​ ಪಾಲಿಕೆ ಕಂಟಕವಾಗಿಯೇ ಉಳಿಯುವ ಸಾಧ್ಯತೆಯಿದೆ. ಇದರ ಜೊತೆಗೆ ದೇಶದಲ್ಲಿ ಬಿಜೆಪಿಗೆ ಎದುರಾಳಿ ಆಮ್​ ಆದ್ಮಿ ಎನ್ನುವ ಹಾಗೆ ಬೆಳೆಯುವ ಲಕ್ಷಣವೂ ಕಾಣಿಸುತ್ತಿದೆ.

ಕೃಷ್ಣಮಣಿ

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮಂಡ್ಯ; ಮರಾಠ ಪುಂಡರಿಂದ ಕ್ನನಡಿಗರ ಮೇಲೆ ದಾಳಿ ಖಂಡಿಸಿ ಪ್ರತಿಭಟನೆ

Next Post

ಗುಜರಾತ್‌ ರೀತಿ ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಕೆ.ಎಸ್.‌ ಈಶ್ವರಪ್ಪ ವಿಶ್ವಾಸ

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
Next Post
ಗುಜರಾತ್‌ ರೀತಿ ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಕೆ.ಎಸ್.‌ ಈಶ್ವರಪ್ಪ ವಿಶ್ವಾಸ

ಗುಜರಾತ್‌ ರೀತಿ ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಕೆ.ಎಸ್.‌ ಈಶ್ವರಪ್ಪ ವಿಶ್ವಾಸ

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada