• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಭಜರಂಗ ದಳ ಕಾರ್ಯಕರ್ತನ ಕೊಲೆ : ಸ್ಥಳದಲ್ಲಿ ಬಿಗುವಿನ ವಾತಾವರಣ, ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ವಿವಿಧ ಸಂಘಟನೆಗಳಿಂದ ಆಗ್ರಹ!

Any Mind by Any Mind
February 21, 2022
in ಕರ್ನಾಟಕ
0
ಭಜರಂಗ ದಳ ಕಾರ್ಯಕರ್ತನ ಕೊಲೆ : ಸ್ಥಳದಲ್ಲಿ ಬಿಗುವಿನ ವಾತಾವರಣ, ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ವಿವಿಧ ಸಂಘಟನೆಗಳಿಂದ ಆಗ್ರಹ!
Share on WhatsAppShare on FacebookShare on Telegram

ಈಗಅಗಲೇ ಹಿಜಾಬ್ (Hijab), ಕೇಸರಿ ಶಾಲು ವಿವಾದದ ಮೂಲಕ ಶಿವಮೊಗ್ಗ (Shivamogha) ಜಿಲ್ಲೆ ಬೂದಿ ಮುಚ್ಚಿದ ಕೆಂಡದಂತಾಗಿದೆ. ಇದರ ನಡುವೆಯೇ ಈಗ ಭಜರಂಗ ದಳ ಕಾರ್ಯಕರ್ತನ ಕೊಲೆಯಾಗಿದ್ದು ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವಂತೆ ಮಾಡಿದೆ. ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ADVERTISEMENT

ಭಜರಂಗ ದಳ (Bajaranga dal) ಕಾರ್ಯಕರ್ತ ಹರ್ಷ ಎಂಬ ಯುವಕನನ್ನು ಕಳೆದ ರಾತ್ರಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಭಾರತಿ ಕಾಲೋನಿಯಲ್ಲಿ (Bharati colony) ನಡೆದಿದೆ. ಕಾರಿನಲ್ಲಿ ಬಂದಿದ್ದ 4ರಿಂದ 6 ಜನರ ಗುಂಪು, ಹರ್ಷ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಹರ್ಷ ರಸ್ತೆಯಲ್ಲೇ ಬಿದ್ದು ಒದ್ದಾಡುತ್ತಿದ್ದ. ಜಿಲ್ಲೆಯಾದ್ಯಂತ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಳೆದ ರಾತ್ರಿ 9 ಗಂಟೆಯ ಸುಮಾರಿಗೆ ಹರ್ಷ ಎಂಬಾತನನ್ನು ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಚುಚ್ಚಿ ಪರಾರಿಯಾಗಿದ್ದಾರೆ. ನಂತರ ಯುವಕನನ್ನು ತಕ್ಷಣವೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಯಿಸಿತಾದರೂ ಅಷ್ಟೊತ್ತಿಗೆ ಆತನ ಪ್ರಾಣಪಕ್ಷಿ ಹಾರಿಹೋಗಿತ್ತು. ಸದ್ಯ ಪ್ರಕರಣ ದಾಖಲಿಸಿಕೊಂಡಿರು ಪೊಲೀಸರು, ಆರೋಪಿಗಳಿಗೆ ಬಲೆ ಬೀಸಿದ್ದಾರೆ.

ಈ ಕೊಲೆ ಸುದ್ದಿ ಮಲೆನಾಡಿನಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಸಾವಿರಾರು ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದರು. ಸ್ಥಳಕ್ಕೆ ಎಸ್ಪಿ ಲಕ್ಷ್ಮಿಪ್ರಸಾದ್ ಮತ್ತು ಡಿಸಿ ಡಾ. ಸೆಲ್ವಮಣಿ ಆಗಮಿಸಿ ಪರಿಶೀಲನೆ ನಡೆಸಿ ಮುಂಜಾಗ್ರತಾ ಕ್ರಮವಾಗಿ ಇಂದು ಶಿವಮೊಗ್ಗ ನಗರದ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಹರ್ಷ (24) ಮೃತ ಯುವಕ ಕೆಲವು ತಿಂಗಳ ಹಿಂದೆ ಮತ್ತೊಂದು ಧರ್ಮವನ್ನು ಅವಹೇಳನ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರ ಹಾಕಿದ್ದ ಪ್ರಕರಣ ದೊಡ್ಡಪೇಟೆ ಠಾಣೆಯಲ್ಲಿ ದಾಖಲಾಗಿತ್ತು. ಟೈಲರಿಂಗ್ ವೃತ್ತಿ ಮಾಡಿಕೊಂಡಿದ್ದ ಆತನಿಗೆ ಹಾಗಾಗ ಬೆದರಿಕೆ ಕರೆಗಳು ಬರುತ್ತಿದ್ದವು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಆರೋಪಿಗಳನ್ನು ತಕ್ಷಣ ಬಂಧಿಸಬೇಕು. ಮೃತನ ಸಾವಿಗೆ ನ್ಯಾಯಕೊಡಿಸಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳು ಮೆಗ್ಗಾನ್ ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದವು. ನಗರದ ಎಲ್ಲೆಡೆ ಬಿಗಿ ಪೊಲೀಸ್ ಪಹರೆ ಹಾಕಲಾಗಿದೆ. ಪೂರ್ವವಲಯ ವ್ಯಾಪ್ತಿಯ ಇತರೆ ಜಿಲ್ಲೆಗಳಿಂದ ರಾತ್ರಿಯೇ ಹೆಚ್ಚುವರಿ ಪೊಲೀಸ್ ಪಡೆ ಕರೆಸಲಾಗಿದೆ.

ಶಿವಮೊಗ್ಗ ಸಚಿವ ಅರಗ ಜ್ಞಾನೇಂದ್ರ ಅವರ ತವರೂರು ಆಗಿದ್ದು, ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ ಹರ್ಷ ಅವರ ಕುಟುಂಬದ ಜೊತೆ ಮಾತನಾಡಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಬಿಜೆಪಿಯ ಹಿರಿಯ ನಾಯಕ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಹರ್ಷನನ್ನು “ಮುಸ್ಲಿಂ ಗೂಂಡಾಗಳು” ಕೊಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಶಿವಮೊಗ್ಗದಲ್ಲಿ ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ . “ ಮುಸ್ಲಿಂ ಗೂಂಡಾಗಳೇ ಈ ಹಿಂದೂ ಕಾರ್ಯಕರ್ತನನ್ನುಮಾಡಿರೋದು. ಶಿವಮೊಗ್ಗದಲ್ಲಿ ಹಿಂದೆಂದೂ ಬಾಲ ಅಲ್ಲಾಡಿಸದ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಈ ಗೂಂಡಾಗಳಿಗೆ ಕುಮ್ಮಕ್ಕು ಸಿಕ್ಕಂತಾಗಿದೆ. ಮುಸ್ಲಿಂ ಗೂಂಡಾಗಳನ್ನು ತಪ್ಪಿಸಿಕೊಳ್ಳಲು ನಾವು ಬಿಡುವುದಿಲ್ಲ ಎಂದು ಈಶ್ವರಪ್ಪ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಜರಂಗದಳ ಕಾರ್ಯಕರ್ತಬಿ ಎಸ್ ಯಡಿಯೂರಪ್ಪಬಿಜೆಪಿಭಜರಂಗ ದಳ ಕಾರ್ಯಕರ್ತಸಿದ್ದರಾಮಯ್ಯ
Previous Post

ಮಿಜೋರಾಂ ರಾಜ್ಯ : ಭಾರತದಲ್ಲಿ ಇಲಿಗಳು ಮತ್ತು ಬಿದಿರಿನ ಕಾರಣಕ್ಕೆ ರಾಜ್ಯವೊಂದು ಸೃಷ್ಟಿಯಾದ ಕಥೆ!

Next Post

ಶಿವಮೊಗ್ಗದ ಕೊಲೆ ಪ್ರಕರಣ : ಆರೋಪಿಗಳು ಯಾರೇ ಆಗಿದ್ದರೂ ಬಂಧಿಸಿ ಗಲ್ಲು ಶಿಕ್ಷೆ ನೀಡಿ : ಸಿದ್ದರಾಮಯ್ಯ ಆಗ್ರಹ

Related Posts

KPSC ಮುಚ್ಚುವ ಬಗ್ಗೆ ಚಿಂತನೆ : ಸಿಎಂ ಡಿ.ಕೆ ಶಿವಕುಮಾರ್ ಮಹತ್ವದ ಹೇಳಿಕೆ
Top Story

KPSC ಮುಚ್ಚುವ ಬಗ್ಗೆ ಚಿಂತನೆ : ಸಿಎಂ ಡಿ.ಕೆ ಶಿವಕುಮಾರ್ ಮಹತ್ವದ ಹೇಳಿಕೆ

by ಪ್ರತಿಧ್ವನಿ
September 22, 2026
0

ಬೆಂಗಳೂರು : ಕೆಪಿಎಸ್ ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಚಿಂತನೆಯಲ್ಲಿದ್ದೇವೆ ಎಂದು  ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು. https://youtu.be/nqHVSFNYLq0?si=YvQSA59nqZ9EPAmg ಸುದ್ದಿಗಾರರೊಂದಿಗೆ...

Read moreDetails
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನ

September 22, 2026
ಸರ್ಕಾರಿ ಪಿಯು ಕಾಲೇಜುಗಳಲ್ಲಿ 814 ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ

ಸರ್ಕಾರಿ ಪಿಯು ಕಾಲೇಜುಗಳಲ್ಲಿ 814 ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ

September 22, 2026
BREAKING : ಕರ್ನಾಟಕ ಸೇರಿದಂತೆ 4 ರಾಜ್ಯಗಳ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ಘೋಷಣೆ

BREAKING : ಕರ್ನಾಟಕ ಸೇರಿದಂತೆ 4 ರಾಜ್ಯಗಳ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ಘೋಷಣೆ

September 22, 2026
ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ: ರೇಷನ್ ಕಾರ್ಡ್ ಇ-ಕೆವೈಸಿ ಅವಧಿ ವಿಸ್ತರಣೆ.!

ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ: ರೇಷನ್ ಕಾರ್ಡ್ ಇ-ಕೆವೈಸಿ ಅವಧಿ ವಿಸ್ತರಣೆ.!

September 22, 2026
Next Post
ಶಿವಮೊಗ್ಗದ ಕೊಲೆ ಪ್ರಕರಣ : ಆರೋಪಿಗಳು ಯಾರೇ ಆಗಿದ್ದರೂ ಬಂಧಿಸಿ ಗಲ್ಲು ಶಿಕ್ಷೆ ನೀಡಿ : ಸಿದ್ದರಾಮಯ್ಯ ಆಗ್ರಹ

ಶಿವಮೊಗ್ಗದ ಕೊಲೆ ಪ್ರಕರಣ : ಆರೋಪಿಗಳು ಯಾರೇ ಆಗಿದ್ದರೂ ಬಂಧಿಸಿ ಗಲ್ಲು ಶಿಕ್ಷೆ ನೀಡಿ : ಸಿದ್ದರಾಮಯ್ಯ ಆಗ್ರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada