ಕರ್ನಾಟಕದಲ್ಲಿ ಚುನಾವಣೆಯ ವರ್ಷ 2023 ವಿಧಾನಸಭಾ ಚುನಾವಣೆಗೆ (assembly elections) 2 ತಿಂಗಳು ಮಾತ್ರ ಬಾಕಿ ಇದೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಮಾವೇಶಗಳು, (Conventions) ರ್ಯಾಲಿಗಳು (Rallies) ಭರ್ಜರಿಯಾಗಿ ನಡೆಯುತ್ತಿದೆ. ವಿಧಾನಸಭಾ ಚುನಾವಣಾ ಸಮೀಪದಲ್ಲಿ ಇಂದು ಬಿಜೆಪಿ ಆರಂಭಿಸಿರುವ ವಿಜಯ ಸಂಕಲ್ಪ ಯಾತ್ರೆಗೆ (Vijay Sankalpa Yatra) ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (BJP National President J.P. Nadda) ಚಾಲನೆ ನೀಡಿದ್ದಾರೆ.
ಹೆಲಿಕಾಪ್ಟರ್ ಮೂಲಕ ಮಲೆಮಹದೇಶ್ವರ ಬೆಟ್ಟಕ್ಕೆ ಬಂದಿಳಿದ ಜೆ.ಪಿ. ನಡ್ಡಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನೀಲ್ ಕುಮಾರ್, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನವರು ಭಾಗವಹಿಸಿದ್ರು.
ಕೆಲ ದಿನಗಳ ಹಿಂದೆಷ್ಟೇ ರಾಜ್ಯಕ್ಕೆ ಬೇಟಿ ಕೊಟ್ಟಿದ್ದ ಅಮಿತ್ ಶಾ ಮತ್ತೆ ರಾಜ್ಯಕ್ಕೆ ವಿಜಯ ಸಂಕಲ್ಪ ಯಾತ್ರೆಗೆ ಶಕ್ತಿ ನೀಡಿ ವಿವಿಧ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಮಾರ್ಚ್ 3 ರಂದು ಒಂದು ದಿನದ ಭೇಟಿಯ ಸಂದರ್ಭದಲ್ಲಿ ಅಮಿತ್ ಶಾ ಬೀದರ್ನ ಬಸವಕಲ್ಯಾಣ ಪ್ರದೇಶದ ಅನುಭವ ಮಂಟಪದಿಂದ ಮೊದಲ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ನಂತ್ರ ಬೀದರ್ನಲ್ಲಿ ಮಧ್ಯಾಹ್ನ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ಆವತಿಯಲ್ಲಿರುವ ಚೆನ್ನಕೇಶವ ಮಂದಿರದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಪ್ರಾರ್ಥನೆ ಸಲ್ಲಿಸಲಿದ್ದಾರೆ.