ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಇಂದು ಕೊನೆಯ ದಿನವಾಗಿದೆ. ನಾಳೆಯಿಂದ ಅಭ್ಯರ್ಥಿಗಳ ಪ್ರಚಾರ ಕಾರ್ಯ ಇನ್ನಷ್ಟು ಚುರುಕುಗೊಳ್ಳಲಿದ್ದು ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
ಶುಕ್ರವಾರ ಹಾಗೂ ಶನಿವಾರದಂದು 2 ದಿನಗಳ ಕಾಲ ಅಮಿತ್ ಶಾ ರಾಜ್ಯದಲ್ಲಿ ನೆಲೆಸಲಿದ್ದಾರೆ. ಈ ಅವಧಿಯಲ್ಲಿ ರಾಜ್ಯ ಬಿಜೆಪಿ ನಾಯಕರ ಜೊತೆಯಲ್ಲಿ ಅಮಿತ್ ಶಾ ಮಹತ್ವದ ಸಭೆ ನಡೆಸಲಿದ್ದಾರೆ. ನಾಳೆ ದೇವನಹಳ್ಳಿಯಲ್ಲಿ ಬೃಹತ್ ರೋಡ್ ಶೋ ನಡೆಸಲಿರುವ ಅಮಿತ್ ಶಾ ಸಂಜೆ ವೇಳೆಗೆ ರೇಸ್ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ನಾಯಕರೊಂದಿಗೆ ರಾತ್ರಿವರೆಗೂ ಮೀಟಿಂಗ್ ನಡೆಸಲಿದ್ದಾರೆ ಎನ್ನಲಾಗಿದೆ.
ರಾತ್ರಿ ಇದೇ ಹೋಟೆಲ್ನಲ್ಲಿ ತಂಗಲಿರುವ ಅಮಿತ್ ಶಾ ಶನಿವಾರ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಧ್ಯಾಹ್ನದ ವೇಳೆಗೆ ಹೆಚ್ಎಎಲ್ ವಿಮಾನ ನಿಲ್ದಾಣದ ಮೂಲಕ ದೆಹಲಿಗೆ ವಾಪಸ್ಸಾಗಲಿದ್ದಾರೆ. ಏಪ್ರಿಲ್ 29ರಂದು ಪ್ರಧಾನಿ ಮೋದಿ ಕರ್ನಾಟಕಕ್ಕೆ ಎಂಟ್ರಿ ನೀಡಲಿದ್ದು ಮತಬೇಟೆ ನಡೆಸಲಿದ್ದಾರೆ.