ಕೊಪ್ಪಳ : ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಕಾವು ಜೋರಾಗಿದೆ. ದೆಹಲಿ ನಾಯಕರು ಕರ್ನಾಟಕದಲ್ಲಿಯೇ ಬೀಡುಬಿಟ್ಟಿದ್ದು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಆದರೆ ಇಂದು ಕೊಪ್ಪಳದಲ್ಲಿ ಅಬ್ಬರದ ಪ್ರಚಾರ ಕಾರ್ಯ ಕೈಗೊಳ್ಳಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮಗಳು ಏಕಾಏಕಿ ರದ್ದಾಗಿವೆ.

ಕೊಪ್ಪಳ ಜಿಲ್ಲೆಯ ಕಾರಟಗಿ, ಕುಷ್ಟಗಿ ಹಾಗೂ ಕೊಪ್ಪಳದಲ್ಲಿ ಇಂದು ಅಮಿತ್ ಶಾ ನೇತೃತ್ವದಲ್ಲಿ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಆದರೆ ಮಣಿಪುರದಲ್ಲಿ ಪರಿಶಿಷ್ಠ ಪಂಗಡದ ಸ್ಥಾನಮಾನ ಕುರಿತು ಕೋರ್ಟ್ ನೀಡಿರುವ ಆದೇಶದ ವಿರುದ್ಧ ಪ್ರತಿಭಟಿಸುತ್ತಾ ಬುಡಕಟ್ಟು ಸಮಾಜದವರು ಹಿಂಸಾಚಾರ ಆರಂಭಿಸಿದ್ದು ಮಣಿಪುರದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.
ಈ ಹಿನ್ನೆಲೆಯಲ್ಲಿ ಕೊಪ್ಪಳದಲ್ಲಿ ಇಂದು ನಡೆಯಬೇಕಿದ್ದ ಅಮಿತ್ ಶಾ ಕಾರ್ಯಕ್ರಮಗಳು ರದ್ದಾಗಿದ್ದು ಅಮಿತ್ ಶಾ ಬದಲು ಬೇರೆ ಕೇಂದ್ರ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗ್ತಿದೆ.