2023ರ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ, ಬಿಜೆಪಿ ಪ್ರಚಾರ ಕಾರ್ಯಗಳನ್ನ ನಡೆಸುವ ಸಲುವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದಾರೆ. ಆದರೆ ಅಮಿತ್ ಶಾ ಅವರ ರೋಡ್ ಶೊ ಮಳೆಯಿಂದಾಗಿ ರದ್ದಾಗಿದೆ. ಕೇಂದ್ರ ಗೃಹ ಸಚಿವರು ಇಂದು ಬೆಂಗಳೂರಿಗೆ ಭೇಟಿ ನೀಡಿದ್ದು, ತಾಲ್ಲೂಕಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಬೇಕಿತ್ತು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ, ಸ್ಥಳಕ್ಕೆ ತೆರಳುವ ಮೊದಲು ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದರು. ಆದರೆ ಮಳೆಯಿಂದಾಗಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯು ರೋಡ್ ಶೋ ರದ್ದುಗೊಳಿಸಲು ನಿರ್ಧರಿಸಿದೆ. ಮಳೆ ಹೆಚ್ಚಾದ ಕಾರಣದಿಂದ ಹೈಕಮಾಂಡ್ ನಾಯಕರು ಈ ರೋಡ್ ಶೋ ಕ್ಯಾನ್ಸಲ್ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತೆ ಕಾರ್ಯಕ್ರಮ ಮಾಡುತ್ತೇವೆ. ಮತ್ತೆ ನಾವು ಇದೇ ಜಾಗದಲ್ಲಿ ಸೇರೋಣ. ವರುಣ ದೇವರು ನಮಗೆ ಆಶೀರ್ವಾದ ಮಾಡಿದ್ದಾರೆ. ಪುನಃ ಕಾರ್ಯಕ್ರಮ ಆಯೋಜಿಸಿ ಘೋಷಣೆ ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.