75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ರಾಜ್ಯ ಸರ್ಕಾರ ನೀಡಿದ್ದ ಜಾಹೀರಾತಿನಲ್ಲಿ ಸ್ವತಂತ್ರ ಹೋರಾಟಗಾರ ಹಾಗೂ ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪೋಟೋ ಇಲ್ಲದಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಆದರೆ ಪ್ರಧಾನಿ ಮೋದಿ ಅವರು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಲ್ಲದೆ ಸ್ವಾತಂತ್ರ್ಯದ ನಂತರ ರಾಷ್ಟ್ರ ನಿರ್ಮಾಣಕ್ಕಾಗಿ ಶ್ರಮಿಸಿದ ಜವಾಹರಲಾಲ್ ನೆಹರು ಗೌರವ ಸೂಚಿಸಿದ್ದಾರೆ.
ಹೌದು, ಇಂದು ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣದಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ವಿವಿಧ ನಾಯಕರು ಮತ್ತು ಕ್ರಾಂತಿಕಾರಿಗಳ ಕೊಡುಗೆಗಳನ್ನು ಸ್ಮರಿಸಿ ಮಾತನಾಡಿದ ಅವರ, “ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಜೊತೆಗೆ ದೇಶವನ್ನು ಕಟ್ಟಿದ ನೆಹರೂ ಜಿ ಸರ್ದಾರ್ ವಲ್ಲಭಭಾಯಿ ಪಟೇಲ್, ಶ್ಯಾಮ ಪ್ರಸಾದ್ ಮುಖರ್ಜಿ, ಲಾಲ್ ಬಹದ್ದೂರ್ ಶಾಸ್ತ್ರಿ, ದೀನದಯಾಳ್ ಉಪಾಧ್ಯಾಯ, ಜಯಪ್ರಕಾಶ್ ನಾರಾಯಣ್, ರಾಮ್ ಮನೋಹರ್ ಲೋಹಿಯಾ, ಆಚಾರ್ಯ ವಿನೋಬಾ ಭಾವೆ, ನಾನಾಜಿ ದೇಶಮುಖ್, ಸುಬ್ರಮಣ್ಯ ಭಾರತಿ ಇವರ ಮುಂದೆ ತಲೆಬಾಗಲು ಇಂದು ಒಂದು ಅವಕಾಶವಿದೆ” ಎಂದಿದ್ದಾರೆ.

ಕರ್ನಾಟಕ ಬಿಜಿಪಿ ಕೂಡ ನೆಹರು ದೇಶ ವಿಭಜನೆಗೆ ಕಾರಣರಾದವರು ಎಂದು ಆರೋಪಿಸಿದೆ. ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸುವ ಜಾಹೀರಾತಿನಲ್ಲಿ ಜವಾಹರಲಾಲ್ ನೆಹರು ಅವರ ಫೋಟೋವನ್ನು ಬಿಟ್ಟು, ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿನಾಯಕ್ ಸಾವರ್ಕರ್ ಅವರನ್ನು ಸೇರಿಸಿತ್ತು ಇದನ್ನು ಉದ್ದೇಶ ಪೂರ್ವಕವಾಗಿಯೇ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ನಾಯಕರು ಒಪ್ಪಿಕೊಂಡಿದ್ದರು.











