ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75ನೇ ಅಮೃತ ಮಹೋತ್ಸವಕ್ಕೆ ಇನ್ನೇನು ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಮುನಿಯಪ್ಪ ಗೈರಾಗಿದ್ದಾರೆ ಎಂಬ ಮಾಹಿತಿ ಬಂದಿದೆ.
ಹೌದು, ಈ ಕುರಿತು ಸ್ವತಃ ಸಿದ್ದರಾಮಯ್ಯ ಅವರೇ ದಾವಣಗೆಯಲ್ಲಿ ಪ್ರತಿಕ್ರಿಯಿಸಿದ್ದು, ಮಲ್ಲಿಕಾರ್ಜುನ ಖರ್ಗೆ,ಕೆ.ಎಚ್.ಮುನಿಯಪ್ಪ ಬರುತ್ತಿಲ್ಲ. ರಾಹುಲ್ ಗಾಂಧಿ ಜೊತೆ ಖರ್ಗೆ ಬರಬೇಕಿತ್ತು. ಆದ್ರೆ, ಹೆರಾಲ್ಡ್ ಪತ್ರಿಕೆ ದಾಳಿ ಕಾರಣಕ್ಕೆ ದೆಹಲಿಯಲ್ಲಿ ಇದ್ದಾರೆ. ಇನ್ನು ಮುನಿಯಪ್ಪ ಹುಷಾರಿಲ್ಲ, ಅವರಿಗೆ ಡೆಂಗ್ಯೂ ಜ್ವರ ಬಂದಿದೆ ಕರೆ ಮಾಡಿ ತಿಳಿಸಿದ್ದಾರೆ ಎಂದು ಹೇಳಿದರು.
ಜನ ಚುನಾವಣೆಗಾಗಿ ಕಾಯುತ್ತಿದ್ದಾರೆ. ನಾಳೆಯೇ ಚುನಾವಣೆ ನಡೆದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜಕೀಯ ವ್ಯವಹಾರ ಸಮಿತಿ ಸಭೆ ನಡೆಯಲಿದೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆಯಾಗಲಿದೆ ಎಂದರು.