ಬೆಂಗಳೂರು : ರಾಜ್ಯದಲ್ಲಿ ಅಮುಲ್ ಮಾರಾಟ ಮಾಡುತ್ತಿರುವ ಬಗ್ಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ನಮ್ಮ ರಾಜ್ಯದ ನಂದಿನಿ ಇರುವಾಗಲೇ ರಾಜ್ಯದಲ್ಲಿ ಅಮುಲ್ ಉತ್ಪನ್ನಗಳಿಗೆ ಬೆಲೆ ಕೊಡುತ್ತಿರುವುದು ಏಕೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿರುವ ಬೆನ್ನಲ್ಲೇ ಇದೀಗ ಈ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಆಕ್ರೋಶ ಹೊರ ಹಾಕಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದೀರಿ. ಈಗ ರೈತರ ಸಂಜೀವಿನ ನಂದಿನಿಯ ಆಪೋಶನ ತೆಗೆದುಕೊಳ್ಳೋಕೆ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಸಂಚು ಮಾಡಿದ್ದಾರೆ . ಕನ್ನಡಿಗರೇ ಎಚ್ಚರ..! ಎಂದು ಟ್ವೀಟಾಸ್ತ್ರ ಪ್ರಯೋಗಿಸಿದ್ದಾರೆ.
ಅಮಿತ್ ಶಾ ಕೆಎಂಎಫ್ ಹಾಗೂ ಅಮುಲ್ ವಿಲೀನದ ಬಗ್ಗೆ ಪ್ರಸ್ತಾಪ ಮಾಡಿದಾಗಿನಿಂದ ರಾಜ್ಯದ ಹೈನು ಉದ್ಯಮ ಗರ ಬಡಿದಂತಾಗಿದೆ. ಇದಕ್ಕೆ ಕನ್ನಡಿಗರ ವಿರೋಧವಿರೋದು ಮನಗಂಡ ಬಳಿಕ ಅಮುಲ್ ಹಿಂಬಾಗಿಲಿನ ಮೂಲಕ ಕರ್ನಾಟಕ ಪ್ರವೇಶಿಸುತ್ತಿದೆ. ರಾಜ್ಯದ ಮಾರುಕಟ್ಟೆಯಲ್ಲಿ ನಂದಿನಿ ಉತ್ಪನ್ನಗಳೇ ಸಿಗುತ್ತಿಲ್ಲ. ಎಂದು ಆಕ್ರೋಶ ಹೊರ ಹಾಕಿದ್ದಾರೆ.