ಚಾಮರಾಜನಗರ : ಮೇ 10ರಂದು ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು ಮೇ 13ರಂದು ಬಹುನಿರೀಕ್ಷಿತ ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಹೀಗಾಗಿ ಚುನಾವಣಾ ಕರ್ತವ್ಯಕ್ಕೆ ಹಾಜರಾಗಲಿರುವ ಸರ್ಕಾರಿ ನೌಕರರಿಗೆ ಚುನಾವಣೆಗೆ ತರಬೇತಿ ನೀಡುತ್ತಿದ್ದ ಸಂದರ್ಭದಲ್ಲಿ ನೌಕರರೊಬ್ಬರು ಏಕಾಏಕಿ ಮೃತಪಟ್ಟ ಘಟನೆಯು ವರದಿಯಾಗಿದೆ.

ಚಾಮರಾಜನಗರದ ಹನೂರಿನಲ್ಲಿ ಈ ಘಟನೆ ನಡೆದಿದ್ದು ಮೃತಪಟ್ಟ ನೌಕರನನ್ನು ಜಗದೀಶ್(40) ಎಂದು ಗುರುತಿಸಲಾಗಿದೆ. ಜಗದೀಶ್ರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ.
ಕೂಡಲೇ ಅವರನ್ನು ತಾಲೂಕಾಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಲಾಯ್ತಾದರೂ ಮಾರ್ಗಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ ಜಗದೀಶ್ಗೆ ಹೃದಯಾಘಾತವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.