• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

FACT CHECK: ರೈಲಿನ ಸೀಟಿಗೆ ಬೆಂಕಿ ಹಚ್ಚುತ್ತಿರುವ ಹಳೆಯ ವೀಡಿಯೊ ಅನುಮಾನದೊಂದಿಗೆ ವೈರಲ್

ಪ್ರತಿಧ್ವನಿ by ಪ್ರತಿಧ್ವನಿ
February 3, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಓರ್ವ ವ್ಯಕ್ತಿ ರೈಲಿನ ಸೀಟಿನ ಮೇಲೆ ಪೇಪರ್ ಇಟ್ಟು ಬೆಂಕಿಕಡ್ಡಿಯಿಂದ ಬೆಂಕಿ ಹಚ್ಚುತ್ತಿರುವುದನ್ನು ಕಾಣಬಹುದು. ಮತ್ತೋರ್ವ ವ್ಯಕ್ತಿ ಮೊಬೈಲ್ನಲ್ಲಿ ವೀಡಿಯೊ ಮಾಡುತ್ತಿರುತ್ತಾನೆ.

ADVERTISEMENT

ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ಒಂದು ವೈರಲ್ ಆಗುತ್ತಿದೆ. ಇದರಲ್ಲಿ ಮೊದಲಿಗೆ ಓರ್ವ ವ್ಯಕ್ತಿ ರೈಲಿನ ಸೀಟಿನ ಮೇಲೆ ಪೇಪರ್ ಇಟ್ಟು ಬೆಂಕಿಕಡ್ಡಿಯಿಂದ ಬೆಂಕಿ ಹಚ್ಚುತ್ತಿರುವುದನ್ನು ಕಾಣಬಹುದು. ಮತ್ತೋರ್ವ ವ್ಯಕ್ತಿ ಮೊಬೈಲ್‌ನಲ್ಲಿ ವೀಡಿಯೊ ಮಾಡುತ್ತಿರುತ್ತಾನೆ. ಇದೇ ರೀತಿ ಇವರು ರೈಲಿನ ಬೇರೆ ಬೇರೆ ಸೀಟುಗಳಿಗೆ ಬೆಂಕಿ ಇಡುತ್ತಿರುವುದನ್ನು ಈ ವೀಡಿಯೊದಲ್ಲಿ ಕಾಣಬಹುದು.

ಫೇಸ್‌ಬುಕ್ (Facebook User) ಬಳಕೆದಾರರೊಬ್ಬರು ಜನವರಿ 27,2025 ರಂದು ಈ ವೀಡಿಯೊವನ್ನು ಹಂಚಿಕೊಂಡು, “ದೇಶದ ಅಭಿವೃದ್ಧಿ ಸಹಿಸದ ಮುಸ್ಲಿಂ ಬೋ*** ಮಕ್ಕಳ ಕೆಲಸ ನೋಡಿ….. ಬಾಂಬ್ ಇಕ್ಕೋರು ದರೋಡೆಕೋರರು ಸುಲಿಗೆಗಾರರು ಅತ್ಯಾಚಾರಿಗಳು..

ಡಿಕೆ ಇರೋವರೆಗೆ ಈ ದೇಶ ಅಭಿವೃದ್ಧಿ ಅಗಲ್ಲ ಎಂದು ಬರೆದುಕೊಂಡಿದ್ದಾರೆ.

ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ನೀವು ಇಲ್ಲಿ ನೋಡಬಹುದು.

Fact Check: ಈ ಸುದ್ದಿಯ ಸತ್ಯಾ ಸತ್ಯತೆಯನ್ನು ನ್ಯೂಸ್ ಮೀಟರ್  ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ ಎಂಬುದು ಕಂಡುಬಂದಿದೆ. ರೈಲಿನ ಸೀಟಿಗೆ ಬೆಂಕಿ ಇಡುತ್ತಿರುವ ವೀಡಿಯೊ 2022 ರಲ್ಲಿ ಹೈದರಾಬಾದ್‌ನ ಸಿಕಂದರಾಬಾದ್‌ನಲ್ಲಿ ಅಗ್ನಿಪಥ್ ಯೋಜನೆ (Agneepath Scheme) ವಿರುದ್ಧ ನಡೆದ ಪ್ರತಿಭಟನೆಯದ್ದಾಗಿದೆ ಮತ್ತು ಇದರಲ್ಲಿ ಯಾವುದೇ ಅನುಮಾನವಿಲ್ಲ.

ನಿಜಾಂಶವನ್ನು ತಿಳಿಯಲು ನಾವು ವೈರಲ್ ವೀಡಿಯೊವನ್ನು ಗೂಗಲ್ ಲೆನ್ಸ್ ಸಹಾಯದಿಂದ ಸರ್ಚ್ ಮಾಡಿದ್ದೇವೆ. ಆಗ ಇದೇ ವೀಡಿಯೊ ಎಕ್ಸ್‌ನಲ್ಲಿ ಕೂಡ ವೈರಲ್ ಆಗುತ್ತಿರುವುದು ಕಂಡುಬಂದು, ಈ ವೀಡಿಯೊದ ಕಮೆಂಟ್ ಬಾಕ್ಸ್ ಪರಿಶೀಲಿಸಿದಾಗ ಬಳಕೆದಾರರೊಬ್ಬರು, ಇದು ಹಳೇಯ ವೀಡಿಯೊ ಎಂದು 2022ರ ವಾರ ಪತ್ರಿಕೆ Organiser Weekly ಹಂಚಿಕೊಂಡಿರುವ ಇದೇ ವೈರಲ್ ವೀಡಿಯೊವನ್ನು ಕಮೆಂಟ್ ಬಾಕ್ಸ್‌ನಲ್ಲಿ ಹಾಕಿದ್ದಾರೆ.

Organiser Weekly ಈ ವೀಡಿಯೊವನ್ನು ಜೂನ್ 23, 2022 ರಂದು ತನ್ನ ಎಕ್ಸ್ ಖಾತೆಯಲ್ಲಿ (X Account) ಅಪ್ಲೋಡ್ ಮಾಡಿದೆ. ಇದರಲ್ಲಿರುವ ಮಾಹಿತಿಯ ಪ್ರಕಾರ, ಇದು ಸಿಕಂದರಾಬಾದ್‌ನ (Secunderabad Vedio)ವೀಡಿಯೊ. ಆರೋಪಿ ಆದಿಲಾಬಾದ್‌ನ ಪೃದ್ವಿರಾಜ್ ರೈಲ್ವೆ ಬೋಗಿಗಳಿಗೆ ಮೊದಲು ಬೆಂಕಿ ಹಚ್ಚಿದ ವ್ಯಕ್ತಿ. ಜೂನ್ 17 ರಂದು ಹಿಂಸಾತ್ಮಕ ಗುಂಪೊಂದು ಸಿಕಂದರಾಬಾದ್ ರೈಲ್ವೆ ನಿಲ್ದಾಣದ (Attack on Secunderabad  Railway Station) ಮೇಲೆ ದಾಳಿ ಮಾಡಿ ರೈಲ್ವೆ ಆಸ್ತಿಗೆ ಹಾನಿ ಮಾಡಿತು .

ಈ ಮಾಹಿತಿಯ ಆಧಾರದ ಮೇಲೆ ನಾವು “Prudhviraj-Adilabad-rail-fire” ಎಂಬ ಕೀವರ್ಡ್‌ ಬಳಸಿ  ಗೂಗಲ್‌ನಲ್ಲಿ ಸರ್ಚ್ (Google Search) ಮಾಡಿದ್ದೇವೆ. ಆಗ ಇದೇ ವೈರಲ್ ವೀಡಿಯೊದ ಸ್ಕ್ರೀನ್ ಶಾಟ್‌ನೊಂದಿಗೆ ಜೂನ್ 25, 2022 ರಂದು ಸುದ್ದಿ ಪ್ರಕಟಿಸಿರುವುದು ಸಿಕ್ಕಿದೆ. “ಸೇನಾ ನೇಮಕಾತಿಗಾಗಿ ಕೇಂದ್ರ ಸರ್ಕಾರದ ಅಗ್ನಿಪಥ್‌ ಯೋಜನೆ ವಿರೋಧಿಸಿ ದೇಶದ ಹಲವೆಡೆ ಭಾರೀ ಪ್ರತಿಭಟನೆಗಳು ನಡೆದಿದ್ದವು. ಅಗ್ನಿಪಥ್ ಯೋಜನೆ ವಿರುದ್ಧ ತೆಲಂಗಾಣದಲ್ಲೂ ಉಗ್ರ ಪ್ರತಿಭಟನೆಗಳು ನಡೆದಿವೆ. ಸಿಕಂದರಾಬಾದ್ ರೈಲು ನಿಲ್ದಾಣದಲ್ಲಿ ಪ್ರತಿಭಟನಾಕಾರರು ಕೋಲಾಹಲ ಸೃಷ್ಟಿಸಿದರು. ಪ್ರತಿಭಟನಾಕಾರರು ನಿಲ್ದಾಣವನ್ನು ಧ್ವಂಸಗೊಳಿಸಿದ್ದು ಮಾತ್ರವಲ್ಲದೆ ರೈಲು ಬೋಗಿಗಳಿಗೆ ಬೆಂಕಿ ಹಚ್ಚಿದ್ದಾರೆ. ಇದೀಗ ಈ ಘಟನೆಯ ಆಘಾತಕಾರಿ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ’ ಎಂದು ಬರೆದುಕೊಂಡಿದೆ.

ಜೊತೆಗೆ ರೈಲಿನ ಕಂಪಾರ್ಟ್‌ಮೆಂಟ್‌ಗೆ ನುಗ್ಗಿ ಬೆಂಕಿ ಹಚ್ಚಿದವರ ವಿರುದ್ಧ ರೈಲ್ವೆ ಪೊಲೀಸರು ಕ್ರಮ ಕೈಗೊಂಡು ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಆರ್‌ಪಿಎಫ್ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ಟೀಟ್ ಅನ್ನು ಆಜ್ ತಕ್ ಎಂಬೆಡ್ ಮಾಡಿದೆ.

“ಈ ವೀಡಿಯೊ ಜೂನ್ 17 ರಂದು ಸಿಕಂದರಾಬಾದ್ ಠಾಣೆಯಲ್ಲಿ ನಡೆದಿದೆ. ವೀಡಿಯೊದಲ್ಲಿರುವ ವ್ಯಕ್ತಿಗಳನ್ನು ಸಂತೋಷ್ ಮತ್ತು ಪೃದ್ಧಿ ಎಂದು ಗುರುತಿಸಲಾಗಿದೆ, ಐಪಿಸಿ(IPC), ಪಿಡಿಪಿಪಿ (PDPP Act) ಕಾಯ್ದೆ ಮತ್ತು ರೈಲ್ವೆ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳಲ್ಲಿ ಜಿಆರ್‌ಪಿ/ಆರ್‌ಪಿಎಫ್ (GRP/RPF) ಬಂಧಿಸಿದ 60 ಕ್ಕೂ ಹೆಚ್ಚು ಜನರಲ್ಲಿ ಇವರೂ ಇದ್ದಾರೆ. ಹೆಚ್ಚಿನ ಬಂಧನಗಳು ನಂತರ ನಡೆಯಲಿವೆ” ಎಂದು ಟ್ವೀಟ್‌ನಲ್ಲಿದೆ.

The Kashmir Monitor ಕೂಡ ಜೂನ್ 23, 2022 ರಂದು ಇದೇ ವೈರಲ್ ವೀಡಿಯೊದ ಸ್ಕ್ರೀನ್ ಶಾಟ್ ನೊಂದಿಗೆ “ಅಗ್ನಿಪಥ್ ಪ್ರತಿಭಟನಾಕಾರರು ರೈಲಿಗೆ ಬೆಂಕಿ ಹಚ್ಚುವ ಆಘಾತಕಾರಿ ದೃಶ್ಯಗಳು” ಎಂಬ ಹೆಡ್‌ಲೈನ್ ಬರೆದು ಸುದ್ದಿ ಪ್ರಕಟಿಸಿದೆ. “ಸಿಕಂದರಾಬಾದ್ ರೈಲ್ವೆ ನಿಲ್ದಾಣದ ಹಿಂಸಾಚಾರ ಪ್ರಕರಣದ ಶಂಕಿತರಲ್ಲಿ ಒಬ್ಬನಾದ ಪೃದ್ವಿರಾಜ್‌ ನನ್ನು ಪೊಲೀಸರು ಬಂಧಿಸಿದ್ದಾರೆ. ಅವನು ತನ್ನ ಸ್ನೇಹಿತನನ್ನು ಕರೆದು ವೀಡಿಯೊ ಮಾಡಲು ಕೇಳಿಕೊಂಡನು. ನಂತರ ಅವುಗಳನ್ನು ಸಾಮಾಜಿಕ ಜಾಲಾತಾಣಗಳಲ್ಲಿ ಹಂಚಿಕೊಂಡಿದ್ದಾನೆ” ಎಂದು ಬರೆಯಲಾಗಿದೆ.

Amar Ujala ಹಾಗೂ Deccan Herald ಕೂಡ ರೈಲಿನ ಕೋಚ್‌ಗೆ ಬೆಂಕಿ ಹಚ್ಚಿ ವ್ಯಕ್ತಿಗಳನ್ನು ಸಂತೋಷ್ ಮತ್ತು ಪುದ್ದಿ ಎಂದು ಗುರುತಿಸಲಾಗಿದೆ ಎಂದು ಬರೆದುಕೊಂಡಿದೆ.

ಹೀಗಾಗಿ ಈ ಎಲ್ಲ ಮಾಹಿತಿಯ ಆಧಾರದ ಮೇಲೆ, ರೈಲಿನ ಸೀಟಿಗೆ ಬೆಂಕಿ ಇಡುತ್ತಿರುವ ವೀಡಿಯೊ 2022 ರಲ್ಲಿ ಸಿಕಂದರಾಬಾದ್‌ನಲ್ಲಿ ಅಗ್ನಿಪಥ್ ಯೋಜನೆ ವಿರುದ್ಧ ನಡೆದ ಪ್ರತಿಭಟನೆಯ ಸಮದ್ದಾಗಿದೆ ಮತ್ತು ಇದರಲ್ಲಿ ಯಾವುದೇ ಅನುಮಾನವಿಲ್ಲ. ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಇವರು ಹಿಂದೂಗಳಾಗಿದ್ದಾರೆ.

ಈ Fact Check  ಅನ್ನು ನ್ಯೂಸ್‌ ಮೀಟರ್‌ ರವರು ಪ್ರಕಟಿಸಿದ್ದಾರೆ ಮತ್ತು ಶಕ್ತಿ ಕಲೆಕ್ಟೀವ್ ನ ಭಾಗವಾಗಿ ನ್ಯೂಸ್‌ ಮೀಟರ್‌ ರವರಿಂದ ಮರುಪ್ರಕಟಿಸಲಾಗಿದೆ.

Tags: Fact checkKarnatakaNews MeterRailwatrailwayRPFSecunderabad
Previous Post

ಶರಣ್ ಅಭಿನಯದ “ಛೂಮಂತರ್”ಗೆ 25ದಿನಗಳ ಸಂಭ್ರಮ

Next Post

ಮೈಕ್ರೊಫೈನಾನ್ಸ್ ಗಳಿಂದ ಬಡವರ ಮೇಲಿನ ದೌರ್ಜನ್ಯ ತಡೆಯಲು ಸುಗ್ರೀವಾಜ್ಞೆ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!
Top Story

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ದಾವಣಗೆರೆಯ ಹರಿಹರ ಪಂಚಮಸಾಲಿ ಗುರು ಪೀಠದಿಂದ ಶ್ವಾಸಗುರು ವಚನಾನಂದ ಸ್ವಾಮೀಜಿಯವರನ್ನು ಉಚ್ಚಾಟಿಸಲಾಗಿದೆ. ಇಂದು ಸಭೆ ಸೇರಿದ್ಧ ಧರ್ಮ ದರ್ಶಿ ಮಂಡಳಿಯ 15 ಸದಸ್ಯರ...

Read moreDetails
ಒಳದನಿಗೆ ಜೀವತುಂಬಿದ ʼ ಪ್ರತಿಧ್ವನಿ ʼ ಯೊಡನೆ- ನಾ ದಿವಾಕರ  ಲೇಖನ

ಒಳದನಿಗೆ ಜೀವತುಂಬಿದ ʼ ಪ್ರತಿಧ್ವನಿ ʼ ಯೊಡನೆ- ನಾ ದಿವಾಕರ  ಲೇಖನ

April 13, 2026
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

April 13, 2026
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
Next Post
ಮೈಕ್ರೊಫೈನಾನ್ಸ್ ಗಳಿಂದ ಬಡವರ ಮೇಲಿನ ದೌರ್ಜನ್ಯ ತಡೆಯಲು ಸುಗ್ರೀವಾಜ್ಞೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೈಕ್ರೊಫೈನಾನ್ಸ್ ಗಳಿಂದ ಬಡವರ ಮೇಲಿನ ದೌರ್ಜನ್ಯ ತಡೆಯಲು ಸುಗ್ರೀವಾಜ್ಞೆ: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada