• Home
  • About Us
  • ಕರ್ನಾಟಕ
Tuesday, October 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹಠ ಬಿಟ್ಟು, ಕೊಟ್ಟ ಪಟ್ಟ ಸ್ವೀಕರಿಸಿದ ಆನಂದ್‌ ಸಿಂಗ್‌ : ಪ್ರವಾಸೋದ್ಯಮ, ಪರಿಸರ ಮತ್ತು ಜೀವಶಾಸ್ತ್ರ ಸಚಿವರಾಗಿ​ ಅಧಿಕಾರ ಸ್ವೀಕಾರ !

ಕರ್ಣ by ಕರ್ಣ
August 24, 2021
in ಕರ್ನಾಟಕ, ರಾಜಕೀಯ
0
ಹಠ ಬಿಟ್ಟು, ಕೊಟ್ಟ ಪಟ್ಟ ಸ್ವೀಕರಿಸಿದ ಆನಂದ್‌ ಸಿಂಗ್‌ : ಪ್ರವಾಸೋದ್ಯಮ, ಪರಿಸರ ಮತ್ತು ಜೀವಶಾಸ್ತ್ರ ಸಚಿವರಾಗಿ​ ಅಧಿಕಾರ ಸ್ವೀಕಾರ !
Share on WhatsAppShare on FacebookShare on Telegram

ಖಾತೆ ವಿಚಾರಕ್ಕೆ ಮುನಿಸಿಕೊಂಡಿದ್ದ ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡುತ್ತಾರೆ ಎಂಬ ಮಾತುಗಳು ರಾಜ್ಯ ರಾಜಕಾರಣದಲ್ಲಿ ಕೇಳಿ ಬರುತ್ತಿದ್ದವು. ಆದರೆ ಈ ಮುನಿಸು ಸದ್ಯಕ್ಕೆ ಶಮನವಾಗಿದೆ ಎನ್ನಲಾಗಿದ್ದು, ಆನಂದ್ ಸಿಂಗ್ ಇಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಶಾಸ್ತ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಆಗಸ್ಟ್‌ 24ರಂದು ಸಚಿವ ಆನಂದ್ ಸಿಂಗ್ ತಮ್ಮ ರಾಜೀನಾಮೆ ನಿರ್ಧಾರ ತಿಳಿಸಲು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಲು ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ್ದರು. ಸಿಂಗ್ ಜೊತೆಗೆ ರಾಜೂಗೌಡ ಕೂಡ ಬಂದಿದ್ದರು. ಸಿಎಂ ಬೊಮ್ಮಾಯಿ ಆನಂದ್ ಸಿಂಗ್ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ದುಡುಕಿನ ನಿರ್ಧಾರ ಕೈಗೊಳ್ಳಬೇಡಿ, ಇರುವ ಖಾತೆಯಲ್ಲೇ ಮುಂದುವರೆಯಿರಿ. ನಾಳೆ ನಾನು ದೆಹಲಿಗೆ ಹೋಗುತ್ತಿದ್ದೇನೆ. ನಿಮ್ಮ ಖಾತೆ ಬದಲಾವಣೆ ಸಂಬಂಧ ವರಿಷ್ಠರ ಜೊತೆ ಚರ್ಚೆ ಮಾಡುತ್ತೇನೆ. ಅಲ್ಲಿ ತನಕ ಸ್ವಲ್ಪ ತಾಳ್ಮೆಯಿಂದ ಇರಿ ಎಂದು ಬೊಮ್ಮಾಯಿ ಸಿಂಗ್ಗೆ ಹೇಳಿದ್ದಾರೆ. ಇದಕ್ಕೆ ಒಪ್ಪಿದ ಆನಂದ್ ಸಿಂಗ್ ಸದ್ಯ ಇರುವ ಖಾತೆಯಲ್ಲೇ ಮುಂದುವರೆಯಲು ಇಚ್ಛಿಸಿ, ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ADVERTISEMENT

ಸಿಎಂ ಭೇಟಿ ಬಳಿಕ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಆನಂದ್ ಸಿಂಗ್ ವಿಕಾಸಸೌಧಕ್ಕೆ ತೆರಳಿದರು. ಬಳಿಕ ಮಾತನಾಡಿದ ಅವರು, ಈ ಮೊದಲು ಮಾತನಾಡಿದ ವಿಚಾರವನ್ನೇ ಸಿಎಂ ಬಳಿ ಪ್ರಸ್ತಾಪಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಿಎಂ ಅವರನ್ನು ಭೇಟಿಯಾಗಿದ್ದೆ. ಇಬ್ಬರೂ ಸಹ ಮೊದಲು ಅಧಿಕಾರ ಸ್ವೀಕಾರ ಮಾಡು ಅಂತ ಹೇಳಿದ್ದರು. ಹೀಗಾಗಿ ಅಧಿಕಾರ ಸ್ವೀಕರಿಸುತ್ತಿದ್ದೇನೆ. ಸಿಎಂ ಅವರು ನನ್ನ ಭಾವನೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಲಿದ್ದಾರೆ ಎಂದರು. ಬ್ಲಾಕ್ಮೇಲ್ ತಂತ್ರನಾ? ಎಂಬ ಮಾಧ್ಯಮಗಳ ಪ್ರಶ್ನೆಗೆ ಸಿಂಗ್ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

ಬಳಿಕ ಆನಂದ್ ಸಿಂಗ್ ಅಧಿಕಾರ ಸ್ವೀಕಾರ ಮಾಡಿದರು. ಪೊಲೀಸ್ ಬಂದೋಬಸ್ತ್ನಲ್ಲಿ ಕಚೇರಿ ಪೂಜೆ ನಡೆಯಿತು. ಕಚೇರಿ ಮುಂಭಾಗ ಬ್ಯಾರಿಕೇಡ್ ಹಾಕಲಾಗಿತ್ತು. ಆನಂದ್ ಸಿಂಗ್ಗೆ ಸದ್ಯ ಕೊಟ್ಟಿರುವ ಖಾತೆ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಖಾತೆ. ಇದೇ ವೇಳೆ ಮಾತನಾಡಿದ ಸಚಿವ ಆರ್.ಅಶೋಕ್, ಆನಂದ್ ಸಿಂಗ್ ಅವರಿಗೆ ಯಾವುದೇ ಅಸಮಾಧಾನ ಇಲ್ಲ. ಈಗ ಎಲ್ಲವೂ ಬಗೆಹರಿದಿದೆ. ನಾನು, ಸಿಎಂ ಹಾಗೂ ರಾಜೂಗೌಡ ಕುಳಿತು ಚರ್ಚಿಸಿದ್ದೇವೆ. ಆನಂದ್ ಸಿಂಗ್ ಇದಕ್ಕೆ ಒಪ್ಪಿಗೆ ನೀಡಿದ್ದಾರೆ. ಈಗ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅಧಿಕಾರಿಗಳ ಜೊತೆ ಸಭೆಯನ್ನೂ ನಡೆಸಲಿದ್ದಾರೆ ಎಂದರು. ಮುಂದುವರೆದ ಅವರು, ಆನಂದ್ ಸಿಂಗ್ಗೆ ಯಾವುದೇ ಷರತ್ತು ಹಾಕಿಲ್ಲ. ನಾಳೆ ಸಿಎಂ ದೆಹಲಿಗೆ ತೆರಳುತ್ತಿದ್ದಾರೆ. ಅಲ್ಲಿ ಆನಂದ್ ಸಿಂಗ್ ಖಾತೆ ಬಗ್ಗೆ ಚರ್ಚಿಸಲಿದ್ದಾರೆ ಎಂದು ಹೇಳಿದರು. ರಾಜೂಗೌಡ ಮಾತನಾಡಿ, ಆನಂದ್ ಸಿಂಗ್ಗೆ ಬ್ಲಾಕ್ಮೇಲ್ ಮಾಡಿಲ್ಲ. ಯಾವುದೇ ಖಾತೆ ದೊಡ್ಡದು, ಸಣ್ಣದು ಅಲ್ಲ. 6 ಕೋಟಿ ಜನರಲ್ಲಿ 30 ಜನರಿಗೆ ಮಾತ್ರ ಸಚಿವರಾಗುವ ಅವಕಾಶ ಸಿಕ್ಕಿದೆ ಎಂದರು.

ಆನಂದ್‌ ಸಿಂಗ್‌ ತಣ್ಣಗಾಗಲು ಪ್ರಮುಖ ಎರಡು ಕಾರಣಗಳು !

ಆದರೆ ವಾಸ್ತವದಲ್ಲಿ ಆನಂದ್‌ ಸಿಂಗ್‌ ಅದ್ಯಾವಾಗ ಖಾತೆ ಕ್ಯಾತೆ ತೆಗೆದರೋ ಆಗಲೇ ಬಿಜೆಪಿ ಹೈಕಮಾಂಡ್‌ ಇದ್ದರು ಇಲ್ಲದಿದ್ದರು ರಾಜೀನಾಮೆ ಕೊಟ್ಟು ಹೊರಡು ಏಟೊಂದು ತುಂಡೆರಡು ಎಂಬ ರೀತಿಯ ಮಾತನ್ನು ಹೇಳಿದ್ದರು. ಯಾಕೆಂದರೆ ಈಗ ಓರ್ವ ರಾಜೀನಾಮೆ ಕೊಟ್ಟರೂ ಯಾವುದೇ ರೀತಿಯ ಬದಲಾವಣೆ ರಾಜ್ಯದಲ್ಲಿ ಸರ್ಕಾರಕ್ಕೆ ಆಗುವುದಿಲ್ಲ ಎಂಬ ಸ್ಪಷ್ಟತೆ ಹೈಕಮಾಂಡ್‌ಗಿತ್ತು. ಅದಾಗಿಯೂ ಬಂಡಾಯ ಎದ್ದಮೇಲೆ ಏಕಾಏಕಿಯಾಗಿ ತಣ್ಣಗಾದರೆ ತನ್ನ ಇಮೇಜ್‌ಗೆ ಧಕ್ಕೆಯಾಗಲಿದೆ ಎಂಬ ಕಾರಣದಿಂದ ಇಷ್ಟು ದಿನಗಳ ಕಾಲ ರಂಪಾಟ ನಡೆಸಿಕೊಂಡು ಆನಂದ್‌ ಸಿಂಗ್‌ ಓಡಾಡಿಕೊಂಡಿದ್ದರು.

ಇದೊಂದು ಕಡೆಯಾದರೆ ಅತ್ತ ಬಳ್ಳಾರಿಗೆ ಗಾಲಿ ಜನಾರ್ಧನ ರೆಡ್ಡಿ ಕೂಡ ಆಗಮಿಸಿದ್ದು ಬಳ್ಳಾರಿಯಲ್ಲಿ ಕೇವಲ ಓರ್ವ ಶಾಸಕನಾಗಿ ತಾನು ಮುಂದುವರೆಯುವುದಕ್ಕೂ ಸಚಿವನಾಗಿ ಗೂಟದ ಕಾರಲ್ಲಿ ಮುಂದುವರೆಯುವುದಕ್ಕೂ ಬಹಳ ವ್ಯತ್ಯಾಸವಿದೆ ಎಂಬ ವಾಸ್ತವವನ್ನು ಅರ್ಥ ಮಾಡಿಕೊಂಡಿದ್ದಾರೆ ಅವರು. ಹೀಗಾಗಿ ಪಟ್ಟು ಹಿಡಿದ ಖಾತೆ ಸಿಗಲಿಲ್ಲ ಎನ್ನುವುದು ಮಾತ್ರವಲ್ಲ, ತಾನು ಬಂಡಾಯವೆದ್ದರೂ ಯಾವುದೇ ಪ್ರಯೋಜನವಿಲ್ಲ ಎಂಬ ಕಟುಸತ್ಯವನ್ನು ಆನಂದ್‌ ಸಿಂಗ್‌ ಅರ್ಥ ಮಾಡಿಕೊಂಡಿದ್ದಾರೆ.

Tags: Anand SinghBasavaraj BommaiBJPcabinet expansionUnhappy over Portfolioಬಿಜೆಪಿ
Previous Post

ಯತ್ನಾಳ್ ಮತ್ತು ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್ ನಿಯೋಗ

Next Post

ಸಿಎಂ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿರಲಿರುವ ಹಾನಗಲ್:‌ ಸೋಲಿನ ಆತಂಕದಲ್ಲಿ ಕಾಂಗ್ರೆಸ್!

Related Posts

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
0

ಜ್ವರ ಹಾಗೂ ಯೂರಿನ್ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ್ರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಂದಿನ ಕೆಲವು ದಿನಗಳ...

Read moreDetails

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025
Next Post
ಸಿಎಂ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿರಲಿರುವ ಹಾನಗಲ್:‌ ಸೋಲಿನ ಆತಂಕದಲ್ಲಿ ಕಾಂಗ್ರೆಸ್!

ಸಿಎಂ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿರಲಿರುವ ಹಾನಗಲ್:‌ ಸೋಲಿನ ಆತಂಕದಲ್ಲಿ ಕಾಂಗ್ರೆಸ್!

Please login to join discussion

Recent News

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

October 13, 2025

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada