ಅಮರಾವತಿ: ಪವನ್ ಕಲ್ಯಾಣ್(Pawan Kalyan) ಆಂಧ್ರ (Andhra Pradesh DCM) ಡಿಸಿಎಂ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಆಂಧ್ರಪ್ರದೇಶದ ಉಪಮುಖ್ಯಮಂತ್ರಿಯಾಗಿರುವ ಪವನ್ ಕಲ್ಯಾಣ್ ಅವರಿಗೆ ಅಭಿನಂದನೆಗಳು. ಕ್ಯಾಬಿನೆಟ್ ನಲ್ಲಿನ ನನ್ನ ಎಲ್ಲ ಸಹೋದ್ಯೋಗಿಗಳಿಗೆ ಖಾತೆಗಳನ್ನು ನಿಯೋಜಿಸಿದ್ದಕ್ಕಾಗಿ ನಾನು ಅಭಿನಂದಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಒಟ್ಟಾಗಿ ನಾವು ಆಂಧ್ರಪ್ರದೇಶದ ಜನರಿಗೆ ಸೇವೆ ಸಲ್ಲಿಸಲು ಮತ್ತು ಜನಪರ ಆಡಳಿತದ ಯುಗವನ್ನು ಪ್ರಾರಂಭಿಸಲು ಪ್ರತಿಜ್ಞೆ ಮಾಡಿದ್ದೇವೆ. ಸಚಿವರಾಗಿ ನಮ್ಮ ಜನರ ನಿರೀಕ್ಷೆಗಳನ್ನು ಈಡೇರಿಸಲು ನೀವು ಶ್ರಮಿಸುತ್ತೀರಿ ಎಂಬ ವಿಶ್ವಾಸ ನನಗಿದೆ. ಸೇವೆ ಮತ್ತು ಭಕ್ತಿಯ ಈ ಪಯಣವನ್ನು ಆರಂಭಿಸುತ್ತಿರುವ ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳು ಎಂದು ಹೇಳಿದ್ದಾರೆ.
ಡಿಸಿಎಂ ಆಗಿರುವ ಪವನ್ ಕಲ್ಯಾಣ್ ಗೆ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ, ಪರಿಸರ, ಅರಣ್ಯ, ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಗಳನ್ನು ನೀಡಲಾಗಿದೆ. ನಾಯ್ಡು ಅವರ ಪುತ್ರ ನಾರಾ ಲೋಕೇಶ್‌ಗೆ ಮಾನವ ಸಂಪನ್ಮೂಲ ಅಭಿವೃದ್ಧಿ, ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಖಾತೆಯ ನಿರ್ವಹಣೆ ನೀಡಲಾಗಿದೆ. 24 ಜನ ಸಚಿವರು ಸಿಎಂ ಅವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದರು.