ಆಂಧ್ಪ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಂಧನದ ಬಳಿಕ ಆಂಧ್ರ ಪ್ರದೇಶದ ರಾಜಕೀಯ ಮತ್ತಷ್ಟು ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ. ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನದ ಬೆನ್ನಲ್ಲೇ ಇದೀಗ ನಟ ಮತ್ತು ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್‌ರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಈ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.
ನಿನ್ನೆ (ಶನಿವಾರ) ರಾತ್ರಿ ಆಂಧ್ರ ಪ್ರದೇಶ ಪ್ರವೇಶಕ್ಕೆ ಪೊಲೀಸರು ಪವನ್ ಕಲ್ಯಾಣ್‌ಗೆ ಅವಕಾಶ ನೀಡಲಿಲ್ಲ. ಆದ್ದರಿಂದ ಆಂಧ್ರ ಪ್ರದೇಶ-ತೆಲಂಗಾಣ ಗಡಿಯ ಜಗ್ಗಯ್ಯಪೇಟ ಚೆಕ್‌ಪೋಸ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಮಲಗಿ ಅವರು ಪ್ರತಿಭಟನೆ ನಡೆಸಿದರು. ವಿಜಯವಾಡಕ್ಕೆ ಹೋಗಬೇಕು ಎಂದು ಪಟ್ಟು ಹಿಡಿದರು.
ಎನ್. ಚಂದ್ರಬಾಬು ನಾಯ್ಡು ಬಂಧನದ ಬಳಿಕ ಆಂಧ್ರ ಪ್ರದೇಶದಲ್ಲಿ ಕಾವೇರಿದ ರಾಜಕೀಯ ಪರಿಸ್ಥಿತಿ ಇದೆ. ಪವನ್ ಕಲ್ಯಾಣ್ ಜಗನ್ ಮೋಹನ ರೆಡ್ಡಿ ನೇತೃತ್ವದ ಸರ್ಕಾರದ ವಿರುದ್ಧ ಹಲವು ಹೋರಾಟಗಳನ್ನು ಮಾಡಿಕೊಂಡು ಬಂದಿದ್ದಾರೆ. ಈಗ ಸಹ ಅವರು ಹೋರಾಟ ನಡೆಸಬಹುದು ಎಂದು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.