ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಚಿವ ಸಂಪುಟವನ್ನು ವಿಸರ್ಜಿಸಿದ್ದು, ಶೀಘ್ರದಲ್ಲೇ ಸಂಪುಟ ಪುನರ್ ರಚನೆ ಮಾಡುವ ಸುಳಿವು ನೀಡಿದ್ದಾರೆ.
ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಗುರುವಾರ ಸಂಪುಟದ ಎಲ್ಲಾ 24 ಸಚಿವರ ರಾಜೀನಾಮೆ ಪಡೆದಿದ್ದು, ರಾಜ್ಯಪಾಲ ವಿಶ್ವಭೂಷಣ್ ಹರಿಚಂದ್ರನ್ ಅವರನ್ನು ಭೇಟಿ ಮಾಡಿ ಸಂಪುಟ ಪುನರಚನೆಯ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ.
ಏಪ್ರಿಲ್ ೮ರಂದು ಮತ್ತೆ ರಾಜ್ಯಪಾಲರನ್ನು ಭೇಟಿ ಮಾಡಲಿರುವ ಜಗನ್ ಮೋಹನ್ ರೆಡ್ಡಿ, ನೂತನ ಸಚಿವರ ಪಟ್ಟಿ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ. ಏಪ್ರಿಲ್ ೧೧ರಂದು ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಬರಲಿದೆ ಎಂದು ಹೇಳಲಾಗಿದೆ.