ಅಂಗನವಾಡಿ ಕಾರ್ಯಕರ್ತೆಯರು ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಬೀದಿಗಿಳಿದಿದ್ದಾರೆ. ಚಿಕ್ಕಬಳ್ಳಾಪುರದ (Chikkaballapur) ಜಿಲ್ಲಾಡಳಿತ ಭವನದ ಎದುರು ಪ್ರೊಟೆಸ್ಟ್ ಗೆ ಇಳಿದಿರುವ ಮಹಿಳೆಯರು ತಮ್ಮ ಸಂಕಷ್ಟಗಳನ್ನು ಸರ್ಕಾರ ಆಲಿಸಿ ವಿವಿಧ ಬೇಡಿಕೆಗಳ ಈಡೇರಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಅಹೋರಾತ್ರಿ ಧರಣಿ ನಡೆಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರುವ ಕಾರ್ಯಕರ್ತೆಯರು ತೀವ್ರ ಚಳಿ ನಡುವೆಯೂ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಧರಣಿ ನಡೆಸುತ್ತಿದ್ದಾರೆ. ತಮ್ಮ ಬೇಡಿಕೆಗಳ ಈಡೇರೂವವೆಗೂ ಹೋರಾಟ ಮಾಡಲು ಮುಂದಾಗಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಅಹೋರಾತ್ರಿ ಧರಣಿಗೆ ಮುಂದಾಗಿರುವ ಕಾರ್ಯಕರ್ತೆಯರು ಪ್ರತಿಭಟನಾ ಸ್ಥಳದ ರಸ್ತೆ ಬದಿ ತೀವ್ರ ಚಳಿಯಲ್ಲಿ ಮಲಗಿ ರಾತ್ರಿ ಕಳೆದಿದ್ದಾರೆ. ಇಷ್ಟಾದ್ರೂ ಯಾವ ಜನಪ್ರತಿನಿಧಿಗಳು ಕೂಡ ಇದುವರೆಗೂ ಅವರ ಅಹವಾಲು ಆಲಿಸಿಲ್ಲ.