• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮಾತು ಮರೆತ  ಪ್ರಧಾನಿ ಮೋದಿ; ಮುಂದುವರೆದ ಅಂಗನವಾಡಿ ಕಾರ್ಯಕರ್ತೆಯರ ಗೋಳು

ಲಾಯ್ಡ್ by ಲಾಯ್ಡ್
September 8, 2021
in ದೇಶ
0
ಅಮೃತ ಮಹೋತ್ಸವಕ್ಕೆ ಸಜ್ಜಾಗುವ ಮುನ್ನ,,, ಕುಸಿಯುತ್ತಿರುವ ಸ್ತಂಭಗಳೂ ಅಡಗುತ್ತಿರುವ ದನಿಗಳೂ
Share on WhatsAppShare on FacebookShare on Telegram

ಕರೋನಾದಂತಹ ಸಂಕಷ್ಟದ ಸಮಯದಲ್ಲಿ ವೈದ್ಯರು ಹಾಗೂ ದಾದಿಯರು ಯಾವ ರೀತಿ ಯೋಧರಂತೆ ಸೇವೆ ಸಲ್ಲಿಸಿದರೋ, ಅದೇ ರೀತಿ ದೇಶದ ಲಕ್ಷಾಂತರ ಅಂಗನವಾಡಿ ಕಾರ್ಯಕರ್ತೆಯರು ಕೂಡಾ ಲಾಕ್ಡೌನ್ ಹಾಗೂ ಕರೋನಾ ಭಯದ ನಡುವೆಯೂ ಸೇವೆಯನ್ನು ಸಲ್ಲಿಸಿದ್ದಾರೆ. ಇವರಿಗೆಲ್ಲಾ ಕರೋನಾ ವಾರಿಯರ್ಸ್ ಎಂಬ ‘ಬಿರುದು’ ಬಿಟ್ಟರೆ ಬೇರೆ ಯಾವ ರೀತಿಯ ಸವಲತ್ತುಗಳು ಕೂಡಾ ದಕ್ಕಲಿಲ್ಲ. ಇಂದಿಗೂ ದೇಶದ ಮೂಲೆ ಮೂಲೆಗಳಲ್ಲಿ ತಮ್ಮ ಹಕ್ಕಿಗಾಗಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟಸುತ್ತಲೇ ಇದ್ದಾರೆ. ಆದರೆ, ಸರ್ಕಾರ ಮಾತ್ರ ಎಂದಿನಂತೆ ಕಣ್ಣಿದ್ದೂ ಕುರುಡಾಗಿ, ಕಿವಿಯಿದ್ದೂ ಕಿವುಡಾಗಿ ಕುಳಿತಿದೆ. 

ADVERTISEMENT

ರೈತ ಆಂದೋಲನದ ಕೇಂದ್ರ ಬಿಂದುವಾದ ದೆಹಲಿಯಲ್ಲಿ ಮಂಗಳವಾರದಂದು ಅಂಗನವಾಡಿ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು. ಗೌರವಧನ ಹೆಚ್ಚಳ, ಬಾಕಿ ಉಳಿದಿರುವ ಗೌರವಧನ ಬಿಡುಗಡೆ ಸೇರಿದಂತೆ ಹಲವು ದೀರ್ಘ ಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡವನ್ನು ಹೇರುವ ಪ್ರಯತ್ನ ಮಾಡಿದ್ದರು. 

ಕರ್ನಾಟಕದಲ್ಲಿಯೂ ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆ ಹಾಗೂ ಒಕ್ಕೂಟಗಳಿಂದ ನಿರಂತರವಾಗಿ ಪ್ರತಿಭಟನೆಗಳು ನಡೆಯುತ್ತಾ ಬಂದಿವೆ. ಪ್ರತಿ ಜಿಲ್ಲಾ ಕೇಂದ್ರಗಳಲ್ಲಿಯೂ ಅಂಗನವಾಡಿ ಕಾರ್ಯಕರ್ತೆಯರು ಒಕ್ಕೊರಲಿನಿಂದ ತಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ. ಮುಖ್ಯವಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ‘ಗೌರವ’ದಿಂದ ಸಲ್ಲಬೇಕಾದ ಗೌರವಧನವನ್ನು ಹೆಚ್ಚಿಸುತ್ತ ಸರ್ಕಾರ ಗಮನವೇ ನೀಡುತ್ತಿಲ್ಲ. 

ಪ್ರಧಾನಿ ಮೋದಿಯವರು ಸೆಪ್ಟೆಂಬರ್ 11,2018ರಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಸುವ ಭರವಸೆ ನೀಡಿದ್ದರು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ನಡೆಸಿದ ಆನ್ಲೈನ್ ಸಂವಾದದಲ್ಲಿ ಶೀಘ್ರವೇ ಗೌರವಧನ ಹೆಚ್ಚಿಸುವುದಾಗಿ ಹೇಳಿದ್ದರು. ಈ ಭರವಸೆಯೂ ಇತರ ಭರವಸೆಗಳಂತೆ ಪೊಳ್ಳಾಗಿಯೇ ಉಳಿದಿದೆ. ಭರವಸೆ ನೀಡಿ ಮೂರು ವರ್ಷಗಳು ಕಳೆದರೂ, ಇನ್ನೂ ಪರಿಷ್ಕೃತ ವೇತನ ದರ ನಿಗದಿ ಮಾಡಲು ಕೇಂದ್ರ ಸರ್ಕಾರ ಮುಂದಾಗಲಿಲ್ಲ. 

“ಯಾರಿಗೆ ರೂ. 3,000 ವೇತನ ಲಭಿಸುತ್ತಿದೆಯೋ ಅವರಿಗೆ ರೂ. 4,500 ಹಾಗೂ ಯಾರಿಗೆ ರೂ. 2,200 ಲಭಿಸುತ್ತಿದೆಯೋ ಅವರಿಗೆ ರೂ.3,500ದಷ್ಟು ವೇತನ ಹೆಚ್ಚಳ ಮಾಡಲಾಗುವುದು. ಇದರಂತೆ ಅಂಗನವಾಡಿ ಸಹಾಯಕಿಯರಿಗೂ ಶೇ.50ರಷ್ಟು ವೇತನ ಹೆಚ್ಚಳ ಮಾಡಲಾಗುವುದು,” ಎಂದು ಪ್ರಧಾನಿ ಮೋದಿ ಹೇಳಿದ್ದರು. 

ಆದರೆ, ಪ್ರಧಾನಿಯವರ ಭರವಸೆಗಳ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಿರುವ ದೆಹಲಿ ಅಂಗನವಾಡಿ ಕಾರ್ಯರ್ತೆಯರು ಹಾಗೂ ಸಹಾಯಕಿಯರ ಸಂಘಟನೆಯ ಸದಸ್ಯೆ ವೃಷಾಲಿ ಅವರು, ಕೆಲವು ಭಾಗಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಒಂದೂವರೆ ಸಾವಿರ ಗೌರವಧನವನ್ನು ‘ದಾಖಲೆ’ಗಳಲ್ಲಿ ಹೆಚ್ಚಿಸಲಾಗಿದೆ. ಆದರೆ, ಆ ಹಣ ಇನ್ನೂ ಕಾರ್ಯಕರ್ತೆಯರ ಕೈ ಸೇರಿಲ್ಲ. ಆಗಸ್ಟ್ 2021ರ ಹೊತ್ತಿಗೆ, ಅಂಗನವಾಡಿ ಕಾರ್ಯಕರ್ತೆಯರ ರೂ.51,000 ಹಾಗೂ ಸಹಾಯಕಿಯರ ರೂ.25,500 ಬಾಕಿ ಹಣ ಇನ್ನೂ ಪಾವತಿಯಾಗಿಲ್ಲ, ಎಂದಿದ್ದಾರೆ. 

ಕಾರ್ಯಕರ್ತೆಯರ ಇನ್ನೊಂದು ಪ್ರಮುಖ ಬೇಡಿಕೆ ಏನೆಂದರೆ, ಅಂಗನವಾಡಿ ಕಾರ್ಯಕರ್ತೆಯರನ್ನು ಸರ್ಕಾರ ನೌಕರರೆಂದು ಪರಿಗಣಿಸಬೇಕು. ಎಲ್ಲಾ ಕಾರ್ಯಕರ್ತೆಯರಿಗೂ ಹಾಗೂ ಸಹಾಯಕಿಯರಿಗೂ ಇಎಸ್ಐ, ಪಿಎಫ್ ಸೇರಿದಂತೆ ಪಿಂಚಣಿ ಸೌಲಭ್ಯವನ್ನು ಕೂಡಾ ನೀಡಬೇಕು. 

ಈ ವಿಚಾರವಾಗಿ ಕರ್ನಾಟಕದಲ್ಲಿಯೂ ಕಳೆದ ಹಲವು ವರ್ಷಗಳಿಂದ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಆದರೆ, ಸರ್ಕಾರ ಮಾತ್ರ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. 2016ರ ನಂತರ ನಿವೃತ್ತರಾದ ಕಾರ್ಯಕರ್ತೆಯರಿಗೆ ಇನ್ನೂ ಎನ್ ಪಿ ಎಸ್ ಹಾಗೂ ಪಿಎಫ್ ನೀಡಲಾಗಿಲ್ಲ. ಹದಿನೈದು ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾರ್ಯಕರ್ತೆಯರ ಗೌರವಧನ ಇನ್ನೂ ಹತ್ತು ಸಾವಿರ ಮಾತ್ರವೇ ಇದೆ. 

ಹೀಗೆ ಒಂದಲ್ಲ ಒಂದು ರೀತಿಯಲ್ಲಿ ನಿರಂತರವಾಗಿ ಸರ್ಕಾರದ ಅವಗಣನೆಗೆ ಒಳಗಾಗುತ್ತಿರುವ ಅಂಗನವಾಡಿ ನೌಕರರ ಸಂಕಷ್ಟಕ್ಕೆ ಸರ್ಕಾರ ತುರ್ತಾಗಿ ಸ್ಪಂದಿಸಬೇಕಾಗಿದೆ. ಕರೋನಾ ಸಂಕಷ್ಟದ ವೇಳೆ ಸೇವೆ ಸಲ್ಲಿಸಿ, ಸೋಂಕಿನಿಂದ ಮೃತಪಟ್ಟ ಕಾರ್ಯಕರ್ತೆಯರ ಕುಟುಂಬದ ನೆರವಿಗೆ ಸರ್ಕಾರ ಬರಬೇಕಿದೆ. ಕೇವಲ ಬಾಯಿ ಮಾತಿನ ಚಪಲಕ್ಕೆ ಹಾಗೂ ಪ್ರಚಾರದ ತೆವಲಿಗೆ ಬಿದ್ದು ಅಂಗನವಾಡಿ ಕಾರ್ಯಕರ್ತೆಯನ್ನು ಕರೋನಾ ವಾರಿಯರ್ಸ್ ಎಂದು ಹೊಗಳುವ ಬದಲು, ಅವರ ಪಾಲಿನ ಹಕ್ಕುಗಳನ್ನು ಅವರಿಗೆ ನೀಡಿದ್ದಲ್ಲಿ, ಅದು ನಿಜವಾಗಿಯೂ ಅಂಗನವಾಡಿ ಕಾರ್ಕರ್ತೆಯರಿಗೆ ನೀಡುವ ಗೌರವವಾಗುವುದು. 

Tags: Asha WorkersBJPCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ವ್ಯವಸ್ಥೆಯ ಕ್ರೌರ್ಯವೂ ಪರ್ಯಾಯದ ಅನಿವಾರ್ಯತೆಯೂ

Next Post

ತೇಜಸ್ವಿಯವರಿಂದ ನಾನು ಹಲವು ವಿಚಾರಗಳನ್ನು ಕಲಿತಿದ್ದೇನೆ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post
ತೇಜಸ್ವಿಯವರಿಂದ ನಾನು ಹಲವು ವಿಚಾರಗಳನ್ನು ಕಲಿತಿದ್ದೇನೆ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ತೇಜಸ್ವಿಯವರಿಂದ ನಾನು ಹಲವು ವಿಚಾರಗಳನ್ನು ಕಲಿತಿದ್ದೇನೆ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada