ದಾವಣಗೆರೆ: ಕಳೆದ ಮೂರು ತಿಂಗಳಿಂದ ವೇತನ ಸರಿಯಾಗಿ ಬಂದಿಲ್ಲವೆಂದು ನೊಂದ ಅಂಗನವಾಡಿ ಸಹಾಯಕಿಯೊಬ್ಬರು ಆಸಿಡ್ ಕುಡಿದಿದ್ದಾರೆ. ಸಾಲ ತೀರಿಸಲು ಹಣ ಇಲ್ಲದ ಕಾರಣ ಆಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಕೆಟಿಜೆ ನಗರದ ಡಾಂಗೆ ಪಾರ್ಕ್ ಆವರಣದ ಅಂಗನವಾಡಿ ಕೇಂದ್ರದ ಸಹಾಯಕಿ ಬಾರತಿ ಆಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದವರು.ಅವರ ಪತಿ ಆಟೋರಿಕ್ಷಾ ಚಾಲನೆ ಮಾಡುತ್ತಾರೆ. ಅಂಗನವಾಡಿ ಸಹಾಯಕರಾಗಿ ಕೆಲಸ ಮಾಡುವ ಭಾರತಿ ಬರುವ ವೇತನದಲ್ಲಿ ಪುಟ್ಟ ಕುಟುಂಬ ಕಟ್ಟಿಕೊಂಡು ಜೀವನ ಸಾಗಿಸುತ್ತಿದ್ದಾರೆ.
ಆದರೆ, ಕಳೆದ ಮೂರು ತಿಂಗಳಿಂದ ಅಂಗನವಾಡಿ ವೇತನ ಭಾರತಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಅವರು ಸಾಲ ತೀರಿಸಲು ಹಣವಿಲ್ಲದ ಕಾರಣ ದಿಕ್ಕೇ ತೋಚದಂತಾಗಿ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅವರ ಪತಿ, ಮಕ್ಕಳು ಮತ್ತು ಅಕ್ಕಪಕ್ಕದವರು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಬಳಿಕ ಭಾರತಿ ಚೇತರಿಸಿಕೊಳ್ಳುತ್ತಿದ್ದಾರೆ.