
ಬೀದರ ಜಿಲ್ಲೆಯ ಭಾಲ್ಕಿ, ಬಸವಕಲ್ಯಾಣ, ಹುಮನಾಬಾದ ಹಾಗೂ ಸಂತಪೂರ (ಔ) ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 148 ಅಂಗನವಾಡಿ ಕಾರ್ಯಕರ್ತೆ ಮತ್ತು 270 ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಜನವರಿ-24ರ ಮಾಹೆಯಲ್ಲಿ ಅನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.
ಸದರಿ ಹುದ್ದೆಗಳಿಗೆ ಅತಿ ಶೀಘ್ರದಲ್ಲಿ ಆಯ್ಕೆ ಪ್ರಕ್ರಿಯೇ ಪ್ರಾರಂಭಿಸಲಾಗುತ್ತದೆ. ಪ್ರಥಮ ಹಂತದಲ್ಲಿ ತಹಸೀಲ್ದಾರರ ಅಧ್ಯಕ್ಷತೆಯಲ್ಲಿ ಇರುವ ತಾಲ್ಲೂಕು ಮಟ್ಟದ ಪರಿಶೀಲನಾ ಸಮಿತಿ ಸಭೆಯಲ್ಲಿ ಅರ್ಜಿಗಳನ್ನು ಪರಿಶೀಲಿಸಿ, ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇರುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಇಲಾಖೆಯ ಮಾರ್ಗಸೂಚಿ ಪ್ರಕಾರ ಪಾರದರ್ಶಕವಾಗಿ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳಿಗೆ ಮತ್ತು ಸಿಬ್ಬಂದಿ/ಅಧಿಕಾರಿಗಳಿಗೆ ಅನ್ಯಮಾರ್ಗದಿಂದ ಆಯ್ಕೆಗಾಗಿ ಹಣಕಾಸು ವ್ಯವಹಾರ ಮಾಡದಿರುವಂತೆ ಮತ್ತು ಮೋಸಕ್ಕೆ ಒಳಗಾಗಬಾರದು. ಹುದ್ದೆಗೆ ಆಯ್ಕೆ ಮಾಡಿಸುವುದಾಗಿ ಯಾರಾದರೂ ಹಣದ ಬೇಡಿಕೆಯನ್ನು ಇಟ್ಟಿರುವುದು ತಿಳಿದುಬಂದರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.