ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಸಚಿವ, NCP ನಾಯಕ ಅನಿಲ್ ದೇಶಮುಖ್ಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
1ಲಕ್ಷ ರೂಪಾಯಿ ಮೌಲ್ಯದ ಬಾಂಡ್ ಶ್ಯೂರಿಟಿ ಮೇಲೆ ಜಾಮೀನು ಮಂಜೂರು ಮಾಡಲಾಗಿದೆ.
ಜಾರಿ ನಿರ್ದೇಶನಾಲಯದ ದಾಖಲಿಸಿದ ಪ್ರಕರಣದಲ್ಲಿ ಜಾಮೀನು ಮಂಜೂರಾಗಿದ್ದರು ಸಹ ಸಿಬಿಐ ದಾಖಲಿಸಿದ್ದ ಪ್ರಕರಣದ ವಿಚಾರಣೆ ನಡೆಯುತ್ತಿರುವ ಕಾರಣ ಸದ್ಯಕ್ಕೆ ಅವರಿಗೆ ಬಿಡುಗಡೆ ಭಾಗ್ಯ ಲಭಿಸಿಲ್ಲ.