• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತಿಲ್ಲ: ಅನಿತಾ ಕುಮಾರಸ್ವಾಮಿ ಸ್ಪಷ್ಟನೆ..!

Any Mind by Any Mind
April 4, 2023
in ಇತರೆ / Others, ಕರ್ನಾಟಕ, ರಾಜಕೀಯ
0
ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತಿಲ್ಲ: ಅನಿತಾ ಕುಮಾರಸ್ವಾಮಿ ಸ್ಪಷ್ಟನೆ..!
Share on WhatsAppShare on FacebookShare on Telegram

2023ರ ವಿಧಾನಸಭಾ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಅವರು ಸ್ಪರ್ಧಿಸುತ್ತಾರೆಂಬ ಸುದ್ದಿ ಎಲ್ಲೆಡೆ ಹಬ್ಬಿದೆ. ಇದೀಗ ಖುದ್ದು ಅನಿತಾ ಕುಮಾರಸ್ವಾಮಿಯವರೇ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ. “ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಂಬ ವದಂತಿಗಳನ್ನು ಕೆಲವರು ವ್ಯವಸ್ಥಿತವಾಗಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದು ಶುದ್ಧ ಸುಳ್ಳು ಮತ್ತು ಅಪಪ್ರಚಾರದ ಭಾಗವಷ್ಟೇ. ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ.

ADVERTISEMENT

ಈ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ರಾಮನಗರ ಕ್ಷೇತ್ರವನ್ನು ನನ್ನ ಪುತ್ರ ಶ್ರೀ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಬಿಟ್ಟುಕೊಟ್ಟಿದ್ದೇನೆ. ಪುನಾ ಸ್ಪರ್ಧಿಸುವ ಮಾತೆಲ್ಲಿ? 2008ರಲ್ಲಿ ಆಪರೇಷನ್‌ ಕಮಲದ ಉಪ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷ, ಮಾಜಿ ಪ್ರಧಾನಮಂತ್ರಿಗಳಾದ ಪೂಜ್ಯ ಶ್ರೀ ಹೆಚ್‌.ಡಿ.ದೇವೇಗೌಡ ಅವರು & ಶ್ರೀ ಹೆಚ್‌.ಡಿ.ಕುಮಾರಸ್ವಾಮಿ ಅವರ ಆದೇಶ ಗೌರವಿಸಿ ಸ್ಪರ್ಧಿಸಿದ್ದೆ. ನಂತರದ ಚುನಾವಣೆಯಲ್ಲಿ ಶ್ರೀ ವೀರಭದ್ರಯ್ಯ ಅವರಿಗೆ ಮಧುಗಿರಿ ಕ್ಷೇತ್ರವನ್ನು ಸಂತೋಷದಿಂದ ಬಿಟ್ಟುಕೊಟ್ಟು ಪಕ್ಷದ ಕೆಲಸ, ಮನೆಗಷ್ಟೇ ಸೀಮಿತವಾದೆ. 2013ರಲ್ಲಿ ಕೂಡ ಕಾರ್ಯಕರ್ತರ ಒತ್ತಡಕ್ಕೆ ತಲೆಕೊಟ್ಟು ಚನ್ನಪಟ್ಟಣದಲ್ಲಿ ಸ್ಪರ್ಧಿಸಬೇಕಾಯಿತು.

ಆಗಲೂ ನಾನು ಪಕ್ಷ ಹಾಗೂ ವರಿಷ್ಠರ ಆದೇಶವನ್ನಷ್ಟೇ ಪಾಲಿಸಿದೆ. 2018ರ ಉಪ ಚುನಾವಣೆ ವೇಳೆ ರಾಮನಗರ ಕ್ಷೇತ್ರದಲ್ಲಿ ಕೆಲವರು ನಮ್ಮ ಪಕ್ಷದ ಬೆನ್ನಿಗೆ ಇರಿಯುವ ಕೃತ್ಯವೆಸಗಿದಾಗ ಮತ್ತೆ ಜೆಡಿಎಸ್‌ ಪಕ್ಷ, ಪೂಜ್ಯ ಶ್ರೀ ಹೆಚ್‌.ಡಿ.ದೇವೇಗೌಡ ಅವರು, ಶ್ರೀ ಹೆಚ್‌.ಡಿ.ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ರಾಮನಗರ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದೆ.  ಹೀಗೆ ಪಕ್ಷ ಹಾಗೂ ವರಿಷ್ಠರ ಆದೇಶವನ್ನು ಶಿರಸಾ ಪಾಲಿಸಿದ್ದೇನೆ. ಅಂಥ ಕ್ಲಿಷ್ಟ ಪರಿಸ್ಥಿತಿಯಲ್ಲೂ ಮನೆಮಗಳೆಂದು ಭಾವಿಸಿ ನನ್ನನ್ನು ಗೆಲ್ಲಿಸಿದ ಮಧುಗಿರಿ, ರಾಮನಗರ ಕ್ಷೇತ್ರಗಳ ಮಹಾಜನತೆಗೆ ಆಜೀವ ಪರ್ಯಂತ ನಾನು ಆಭಾರಿ. ಚನ್ನಪಟ್ಟಣ ಕ್ಷೇತ್ರದ ಜನತೆಗೂ ಚಿರಋಣಿ.

ಸಿಕ್ಕಿದ ಅವಕಾಶ ಬಳಸಿಕೊಂಡು ಈ ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಚುನಾವಣೆಯ ಕಣದಿಂದ ಹಿಂದೆ ಸರಿದು ಪಕ್ಷದ ಶ್ರೇಯೋಭಿವೃದ್ಧಿ ಹಾಗೂ ನನ್ನ ಕ್ಷೇತ್ರದ ಜನರ ಒಳಿತಿಗಾಗಿಯಷ್ಟೇ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ಯಾರೂ ಇಂಥ ವದಂತಿಗಳನ್ನು ಹಬ್ಬಿಸಬಾರದು ಮತ್ತೂ ನಂಬಬಾರದು ಎನ್ನುವುದು ನನ್ನ ಕಳಕಳಿಯ ವಿನಂತಿ.  ಎಲ್ಲಾ ಚುನಾವಣೆಗಳಲ್ಲಿ ಪಕ್ಷದ ಆದೇಶವನ್ನಷ್ಟೇ ಪಾಲಿಸಿ ನಡೆದಿದ್ದೇನೆಯೇ ಹೊರತು, ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಹೆಚ್.ಡಿ.ದೇವೇಗೌಡರು ಕಟ್ಟಿದ ಈ ಪಕ್ಷಕ್ಕೆ ಧಕ್ಕೆ ತರುವ ಅಥವಾ ಕುಟುಂಬದ ಗೌರವಕ್ಕೆ ಚ್ಯುತಿಯುಂಟು ಮಾಡುವ ಕೆಲಸ ಮಾಡಿಲ್ಲ, ಮುಂದೆ ಮಾಡುವುದೂ ಇಲ್ಲ. ದಯಮಾಡಿ ನನ್ನ ಭಾವನೆಗಳನ್ನು ಗೌರವಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಅನಿತಾ ಕುಮಾರಸ್ವಾಮಿ ಅವರು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Tags: #vidhanasabha #election #2023 #anitakumaraswamy #socialmedia #clarification #pratidhvani #pratidhvanidigital #pratidhvaninews
Previous Post

ಸಿ.ಟಿ.ರವಿ ವಿರುದ್ಧ ಪೋಸ್ಟ್ ಮಾಡಿದ್ದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ FIR‌ ದಾಖಲು

Next Post

‘ಸಿಎಂ ಸೀಟ್​ ಕುಸ್ತಿ’ ಸಿದ್ದರಾಮಯ್ಯ ಹೇಳಿದ್ದೇನು..! ಆಗಿದ್ದೇನು..?

Related Posts

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
0

ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವ ಪೈಕಿ ನಟ ರಾಕಿಂಗ್‌ ಸ್ಟಾರ್‌ ಯಶ್‌ ಕೂಡ ಒಬ್ಬರು. ಅವರ ತಾಯಿ ಪುಷ್ಪ ಅರುಣ್ ಕುಮಾರ್ ತಮ್ಮದೇ ಪಿಎ...

Read moreDetails
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

June 20, 2025
Next Post
‘ಸಿಎಂ ಸೀಟ್​ ಕುಸ್ತಿ’ ಸಿದ್ದರಾಮಯ್ಯ ಹೇಳಿದ್ದೇನು..! ಆಗಿದ್ದೇನು..?

‘ಸಿಎಂ ಸೀಟ್​ ಕುಸ್ತಿ’ ಸಿದ್ದರಾಮಯ್ಯ ಹೇಳಿದ್ದೇನು..! ಆಗಿದ್ದೇನು..?

Please login to join discussion

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 
Top Story

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್…ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!