ಈ ಪೋಸ್ಟರ್ನಲ್ಲಿ ರವಿಚಂದ್ರನ್ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡು, ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸಿದ್ದಾರೆ.
ಬೆಂಗಳೂರು: ಕಳೆದ ತಿಂಗಳಷ್ಟೇ ‘ಗೌರಿ’ ಎಂಬ ಚಿತ್ರವನ್ನು ಒಪ್ಪಿ, ಅದರ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದ ರವಿಚಂದ್ರನ್, ಈಗ ಇನ್ನೊಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರು ಅಣ್ಣಯ್ಯಪ್ಪ ಎಂಬ ಪಾತ್ರದಲ್ಲಿ ನಟಿಸುತ್ತಿದ್ದು, ಅವರ ಪಾತ್ರದ ಮೊದಲ ನೋಟ ಇತ್ತೀಚೆಗೆ ಬಿಡುಗಡೆಯಾಗಿದೆ.
ಈ ಪೋಸ್ಟರ್ನಲ್ಲಿ ರವಿಚಂದ್ರನ್ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡು, ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸಿದ್ದಾರೆ.
ಅಂದಹಾಗೆ, ಅಣ್ಣಯ್ಯಪ್ಪನಾಗಿ ರವಿಚಂದ್ರನ್ ಕಾಣಿಸಿಕೊಳ್ಳುತ್ತಿರುವುದು ‘ಜೋಗಿ’ ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದಲ್ಲಿ. ಧ್ರುವ ಸರ್ಜಾ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರದಲ್ಲಿ ಸಂಜಯ್ ದತ್ ವಿಲನ್ ಆಗಿ ನಟಿಸುತ್ತಿದ್ದು, ಇದೀಗ ರವಿಚಂದ್ರನ್ ಸಹ ಸೇರ್ಪಡೆಯಾಗಿದ್ದಾರೆ. ಈ ಚಿತ್ರದಲ್ಲಿ ಅಣ್ಣಯ್ಯಪ್ಪ ಎಂಬ ಪಾತ್ರದಲ್ಲಿ ರವಿಚಂದ್ರನ್ ನಟಿಸುತ್ತಿರುವುದು ಬೆಳಕಿಗೆ ಬಂದಿದ್ದರೂ, ಅವರ ಪಾತ್ರವೇನು? ಅವರಿಲ್ಲಿ ಏನು ಮಾಡುತ್ತಾರೆ? ಎಂಬ ಯಾವ ವಿಷಯಗಳನ್ನೂ ಚಿತ್ರತಂಡದವರು ಬಹಿರಂಗಗೊಳಿಸಿಲ್ಲ.
‘ಕೆಡಿ’ ಚಿತ್ರದಲ್ಲಿ ಧ್ರುವ ಸರ್ಜಾಗೆ ನಾಯಕಿಯಾಗಿ ಶ್ರೀಲೀಲಾ ಅಥವಾ ಮಾಲಾಶ್ರೀ ಮಗಳು ರಾಧನಾ ರಾಮ್ ನಟಿಸಬಹುದು ಎಂಬ ಸುದ್ದಿ ಇದೆ. ಈ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ನಟಿ ನಿಶಾ ವೆಂಕಟ್ ಕೋನಾಂಕಿ ನಿರ್ಮಾಣ ಮಾಡುತ್ತಿದ್ದು, ವಿಲಿಯಂ ಡೇವಿಡ್ ಛಾಯಾಗ್ರಹಣ ಮತ್ತು ಅರ್ಜುನ್ ಜನ್ಯ ಸಂಗೀತವಿದೆ. ಧ್ರುವ ಜತೆಗೆ ಸಂಜಯ್ ದತ್, ಶಿಲ್ಪಾ ಶೆಟ್ಟಿ, ರವಿಚಂದ್ರನ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಚಿತ್ರದ ಚಿತ್ರೀಕರಣ ಪ್ರಾರಂಭವಾಗುವ ಮುನ್ನವೇ ಎಲ್ಲಾ ಭಾಷೆಗಳ ವಿತರಣೆಯ ಹಕ್ಕುಗಳು ಮಾರಾಟವಾಗಿರುವುದು ವಿಶೇಷ.