ದೆಹಲಿ : ರಾಜ್ಯದಲ್ಲಿ ಈ ಬಾರಿಯ ಚುನಾವಣೆಯು ಯಾವಾಗ ನಡೆಯುತ್ತೋ ಎಂಬ ಕುತೂಹಲ ಎಲ್ಲರಲ್ಲಿಯೂ ಇದ್ದು ಈ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಇಂದು ಬೆಳಗ್ಗೆ 11:30ಕ್ಕೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿಯನ್ನು ಕರೆದಿದ್ದು ಇಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿರುವ ಪ್ಲೆನರಿ ಹಾಲ್ನಲ್ಲಿಂದು ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದೆ.
ಕಳೆದ ಬಾರಿ ಮೇ ಎರಡನೇ ವಾರದಲ್ಲಿ ಚುನಾವಣೆ ನಡೆದಿತ್ತು. ಹೀಗಾಗಿ ಈ ಬಾರಿ ಕೂಡ ಮೇ ತಿಂಗಳ 2ನೇ ವಾರದಲ್ಲಿಯೇ ಚುನಾವಣೆ ನಡೆಯಬಹುದು ಎಂದು ನಿರೀಕ್ಷಿಸಲಾಗಿದೆ. ರಾಜ್ಯದ ಒಟ್ಟು 224 ಕ್ಷೇತ್ರಗಳಿಗೆ ಇಂದು ಚುನಾವಣೆಗೆ ದಿನಾಂಕ ಘೋಷಣೆಯಾಗಲಿದ್ದು ರಾಜ್ಯದ ಜನತೆಯಲ್ಲಿ ಕುತೂಹಲ ಹೆಚ್ಚಾಗಿದೆ.
ಕಾಂಗ್ರೆಸ್ ಪಕ್ಷವು ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್ ಮಾಡಿದ್ದು ಕ್ಲಿಷ್ಠಕರ ಕ್ಷೇತ್ರಗಳನ್ನು ಮಾತ್ರ ಉಳಿಸಿಕೊಂಡಿದೆ. ಬಿಜೆಪಿ ಹಾಗೂ ಜೆಡಿಎಸ್ ಇನ್ನೂ ಯಾವುದೇ ಕ್ಷೇತ್ರಕ್ಕೆ ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡದೇ ಚುನಾವಣಾ ಲೆಕ್ಕಾಚಾರದಲ್ಲಿ ಬ್ಯುಸಿಯಾಗಿದೆ. ರಾಜ್ಯದಲ್ಲಿ ಚುನಾವಣಾ ದಿನಾಂಕ ಘೋಷಣೆ ಬಳಿಕ ಎಲ್ಲಾ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ಈ ವಾರದಲ್ಲಿಯೇ ರಿಲೀಸ್ ಮಾಡಬಹುದು ಎಂದು ನಿರೀಕ್ಷಿಸಲಾಗಿದೆ .
