• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಾತಿಗಣತಿ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
June 10, 2025
in Top Story, ಕರ್ನಾಟಕ, ರಾಜಕೀಯ
0
ಜಾತಿಗಣತಿ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

“ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಸಮುದಾಯಗಳ ಅಂಕಿಅಂಶಗಳ ಬಗ್ಗೆ ಇರುವ ಗೊಂದಲ ನಿವಾರಣೆಗೆ ತೀರ್ಮಾನಿಸಲಾಗಿದೆ. ಮನೆ ಮನೆ ಸಮೀಕ್ಷೆ ಹಾಗೂ ಆನ್ಲೈನ್ ಮೂಲಕ ಎಲ್ಲರೂ ತಮ್ಮ ಮಾಹಿತಿಯನ್ನು ಮತ್ತೊಮ್ಮೆ ಸಲ್ಲಿಸಲು ಅವಕಾಶ ನೀಡಲಾಗುವುದು. ಈ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ADVERTISEMENT

ನವದೆಹಲಿಯಲ್ಲಿ ಎಐಸಿಸಿ ನಾಯಕರ ಸಭೆ ಬಳಿಕ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾಧ್ಯಮಗಳ ಜತೆ ಮಂಗಳವಾರ ಮಾತನಾಡಿದರು.

“ಮಂಗಳವಾರದಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಅವರು ನನ್ನನ್ನು ಹಾಗೂ ಮುಖ್ಯಮಂತ್ರಿಗಳನ್ನು ಕರೆಸಿ ಪಕ್ಷ ಸಂಘಟನೆ ವಿಚಾರವಾಗಿ, ರಾಜ್ಯ ರಾಜಕಾರಣ ಹಾಗೂ ಇತ್ತೀಚಿನ ಕಾಲ್ತುಳಿತ ಪ್ರಕರಣದ ಬಗ್ಗೆ ಚರ್ಚೆ ಮಾಡಲಾಯಿತು” ಎಂದು ಹೇಳಿದರು.

#watch ಸಿದ್ದು-ಡಿಕೆಶಿ ರಾಜಿನಾಮೆಗೆ ಹೈಕಮಾಂಡ್‌ ಸೂಚಿಸಿದ್ರಾ..!? #pratidhvani #siddaramaiah #dkshivakumar

“ಜಾತಿ ಗಣತಿ ವಿಚಾರವಾಗಿ ಇದೇ ತಿಂಗಳ 12ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಮಾಡಲು ನಿರ್ಧರಿಸಿದ್ದೆವು. ಈ ವಿಚಾರವಾಗಿ ಸಂಸದರು, ಶಾಸಕರು, ಸಂಘ ಸಂಸ್ಥೆಗಳು ನಮ್ಮ ವರಿಷ್ಠರ ಜತೆ ಚರ್ಚೆ ಮಾಡಿದ್ದಾರೆ. ಕೆಲವು ಸಂಘಟನೆ ಹಾಗೂ ಸಮಾಜಗಳಿಂದ ಈ ಜಾತಿ ಗಣತಿಗೆ ಅಪಸ್ವರ ಬಂದಿರುವ ಹಿನ್ನೆಲೆಯಲ್ಲಿ ಎಲ್ಲರಿಗೂ ನ್ಯಾಯಬದ್ಧವಾಗಿ ಅವಕಾಶ ಕಲ್ಪಿಸಿಕೊಡಬೇಕು ಎಂದು ವರಿಷ್ಠರು ನಮಗೆ ಮಾರ್ಗದರ್ಶನ ನೀಡಿದ್ದಾರೆ. ಈ ಜಾತಿ ಗಣತಿಯಲ್ಲಿ ಯಾರನ್ನೂ ಬಿಡಬಾರದು, ಎಲ್ಲರನ್ನು ಒಳಗೊಳ್ಳಬೇಕು ಎಂದು ತೀರ್ಮಾನಿಸಲಾಗಿದೆ. ಯಾರ ಅಪಸ್ವರವೂ ಇಲ್ಲದಂತೆ ನೋಡಿಕೊಳ್ಳಲು ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡಿದ್ದಾರೆ” ಎಂದು ಮಾಹಿತಿ ನೀಡಿದರು.

“ಸಾಮಾಜಿಕ ನ್ಯಾಯದ ಬಗ್ಗೆ ಸರ್ಕಾರದ ಬದ್ಧತೆ ಇದೆ. ಜಾತಿ ಗಣತಿಯಲ್ಲಿ ಅಂಕಿ ಅಂಶಗಳ ಬಗ್ಗೆ ಅನೇಕ ಸಮಾಜಗಳು ಅಪಸ್ವರ ಎತ್ತಿದ್ದು, ಈ ಬಗ್ಗೆ ಎಲ್ಲರಿಗೂ ಸ್ಪಷ್ಟನೆ ನೀಡಲು ಅವಕಾಶ ಮಾಡಿಕೊಡಬೇಕು ಎಂದು ತೀರ್ಮಾನಿಸಲಾಗಿದೆ. ಸಾರ್ವಜನಿಕರು ನ್ಯಾಯಬದ್ಧವಾಗಿ ಯಾವ ಸಮಾಜಕ್ಕೆ ಸೇರಿದ್ದೀರಿ ಎಂಬುದನ್ನು ವ್ಯಕ್ತಪಡಿಸಿಕೊಳ್ಳಬೇಕು. ಈ ಅವಕಾಶವನ್ನು ಎಲ್ಲರೂ ಬಳಸಿಕೊಳ್ಳಬೇಕು. ಸಮಾಜದ ಮುಖಂಡರು ಹಾಗೂ ಮಠಾಧೀಶರು ಇದಕ್ಕೆ ಸಹಕರಿಸಬೇಕು” ಎಂದು ಮನವಿ ಮಾಡಿದರು.

“ಕಳೆದ ಎರಡು ತಿಂಗಳಿನಿಂದ ಒಳಮೀಸಲಾತಿ ವಿಚಾರವಾಗಿ ಪರಿಶಿಷ್ಟ ಜಾತಿ ಅವರ ಜನಗಣತಿ ಮಾಡುತ್ತಿದ್ದೇವೆ. ಹೀಗಾಗಿ ಈ ಪ್ರಕ್ರಿಯೆ ಸುದೀರ್ಘವಾಗಿ ನಡೆಯುವುದರಿಂದ ಇದನ್ನು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ. ನಾವು ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಎಲ್ಲರಿಗೂ ನ್ಯಾಯ ಒದಗಿಸಿಕೊಡಲಾಗುವುದು. ಇದರಲ್ಲಿ ಯಾವುದೇ ಆತಂಕ ಬೇಡ. ನಮ್ಮ ಈ ಪ್ರಯತ್ನದ ಮೂಲಕ ಜಾತಿಗಣತಿ ವಿಚಾರವಾಗಿ ಇರುವ ಅಪಸ್ವರವನ್ನು ಸರಿಪಡಿಸಲಾಗುವುದು. ನಮ್ಮ ರಾಜ್ಯದವರು ಎಲ್ಲೇ ಇದ್ದರೂ ಈ ಬಗ್ಗೆ ಆನ್ಲೈನ್ ಮೂಲಕ ಮಾಹಿತಿ ನೀಡಲು ಅವಕಾಶ ಕಲ್ಪಿಸಲಾಗುವುದು” ಎಂದು ತಿಳಿಸಿದರು.

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚೆಯಾಯಿತೇ ಎಂದು ಕೇಳಿದಾಗ, “ಈ ವಿಚಾರವಾಗಿ ಚರ್ಚೆ ಮಾಡಲಾಯಿತು. ಈ ದುರ್ಘಟನೆಯನ್ನು ನಮ್ಮ ಪಕ್ಷ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಬಗ್ಗೆ ವರಿಷ್ಠರಿಗೆ ಸಂಪೂರ್ಣ ಮಾಹಿತಿ ನೀಡಿ ಸತ್ಯಾಸತ್ಯತೆಯನ್ನು ವಿವರಿಸಿದ್ದೇವೆ” ಎಂದು ತಿಳಿಸಿದರು.

ಸಚಿವ ಸಂಪುಟ ಮರುವಿಂಗಡಣೆ ಬಗ್ಗೆ ಚರ್ಚೆಯಾಯಿತೇ ಎಂದು ಕೇಳಿದಾಗ, “ಈ ವಿಚಾರವಾಗಿ ಯಾವುದೇ ಚರ್ಚೆ ಆಗಿಲ್ಲ” ಎಂದು ತಿಳಿಸಿದರು.

ವಿಧಾನ ಪರಿಷತ್ ಸ್ಥಾನಕ್ಕೆ ನಾಮನಿರ್ದೇಶನದ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಹೈಕಮಾಂಡ್ ಪರಿಶೀಲಿಸಿ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಲಿದೆ” ಎಂದು ತಿಳಿಸಿದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಿಎಂ ಸಿದ್ದರಾಮಯ್ಯ ಮಹತ್ವ ಸುದ್ದಿಗೋಷ್ಠಿ

Next Post

ಆಳ್ವಿಕೆಯ ಉತ್ತರದಾಯಿತ್ವ – ಸಾಂವಿಧಾನಿಕ ಜವಾಬ್ದಾರಿ

Related Posts

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ
Top Story

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

by ಪ್ರತಿಧ್ವನಿ
April 30, 2026
0

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತದ ಹಿನ್ನೆಲೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ ಅವರು ಗುರುವಾರ ಆಸ್ಪತ್ರೆಗೆ ಭೇಟಿ...

Read moreDetails
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
Next Post
ಆಳ್ವಿಕೆಯ ಉತ್ತರದಾಯಿತ್ವ – ಸಾಂವಿಧಾನಿಕ ಜವಾಬ್ದಾರಿ

ಆಳ್ವಿಕೆಯ ಉತ್ತರದಾಯಿತ್ವ – ಸಾಂವಿಧಾನಿಕ ಜವಾಬ್ದಾರಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada