ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹಿಟ್ ಆ್ಯಂಡ್ ರನ್ ಕೇಸ್ ಗಳು ಹೆಚ್ಚಾಗುತ್ತಲೇ ಇದ್ದು, ಇಂತದ್ದೇ ಒಂದು ಘಟನೆ ಬೆಂಗಳೂರಿನ ಕೆ.ಆರ್.ಪುರಂ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಫೆ.11 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕೆ.ಆರ್.ಪುರಂ ಬಳಿಯ ಟಿಸಿ ಪಾಳ್ಯದಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಸುಮಾ ಹಾಗೂ ಚೇತನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಸುಮಾ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾರೆ.
ಕೆ.ಆರ್.ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಮುಂದಾಗಿದ್ದಾರೆ.