• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ದಟ್ಟ ಕಾನನದ ಮಧ್ಯೆ ʻಕಪ್ಪು ಬಿಳುಪಿನ ನಡುವೆʼ: ಬರುತ್ತಿದೆ ಕನ್ನಡದ ಮತ್ತೊಂದು ಹಾರಾರ್ ಚಿತ್ರ…

Pratidhvani by Pratidhvani
February 8, 2024
in ಸಿನಿಮಾ
0
ದಟ್ಟ ಕಾನನದ ಮಧ್ಯೆ ʻಕಪ್ಪು ಬಿಳುಪಿನ ನಡುವೆʼ: ಬರುತ್ತಿದೆ ಕನ್ನಡದ ಮತ್ತೊಂದು ಹಾರಾರ್ ಚಿತ್ರ…
Share on WhatsAppShare on FacebookShare on Telegram

ಇತ್ತೀಚಿನ ದಿನಗಳಲ್ಲಿ ಭಾರೀ ಸದ್ದು ಮಾಡುತ್ತಿರುವ ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ಪ್ರಯೋಗಗಳ ಚಿತ್ರಗಳು ಸಾಲು ಸಾಲಾಗಿ ಬರುತ್ತಿವೆ. ಹಿರಿಯ ಕಲಾವಿದರ ನಡುವೆಯೂ ಹೊಸಬರ ಚಿತ್ರಗಳು ಸಹ ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿವೆ. ಒಂದಿಲ್ಲೊಂದು ಹೊಸ ಪ್ರಯೋಗಗಳ ಚಿತ್ರಗಳ ಸಾಲಿಗೆ ಇದೀಗ ಮತ್ತೊಂದು ಚಿತ್ರ ಸೇರ್ಪಡೆಯಾಗಲು ಸಜ್ಜಾಗಿದೆ. ಕನ್ನಡದಲ್ಲಿ ಹೊಸ ಪ್ರಯತ್ನಗಳಿಗೆ ಕನ್ನಡಿಗರು ಬೆಂಬಲ ನೀಡುತ್ತಾ ಬಂದಿದ್ದಾರೆ. ಅದೇ ರೀತಿ ಹೊಸ ಹಾಗೂ ವಿಭಿನ್ನ ಕಥೆಯ ಹಾರಾರ್ ಚಿತ್ರ “ಕಪ್ಪು ಬಿಳುಪಿನ ನಡುವೆ”. ವೃತ್ತಿಯಲ್ಲಿ ಪಾರಂಪರಿಕ ಆಯುರ್ವೇದ ವೈದ್ಯರಾಗಿರುವ ಧರ್ಮೇಂದ್ರ ಅವರು ನಿರ್ಮಿಸಿರುವ ಹಾಗೂ ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟಿರುವ ವಸಂತ್ ವಿಷ್ಣು ಮೊದಲ ಬಾರಿಗೆ ನಿರ್ದೇಶಿಸಿ, ನಾಯಕರಾಗೂ ನಟಿಸಿರುವ ಈ ಚಿತ್ರದ ಪತ್ರಿಕಾಗೋಷ್ಠಿ ಇತ್ತೀಚಿಗೆ ನಡೆಯಿತು. ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು.

ADVERTISEMENT

ನಿರ್ದೇಶಕನಾಗಿ ಇದು ಮೊದಲ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಹಾಗೂ ನಾಯಕ ವಸಂತ್ ವಿಷ್ಣು, ನಾನು ಈ ಹಿಂದೆ ನಾಲ್ಕು ಚಿತ್ರಗಳಲ್ಲಿ ಪ್ರಮುಖಪಾತ್ರದಲ್ಲಿ ನಟಿಸಿದ್ದೇನೆ. ನಿರ್ದೇಶನ ವಿಭಾಗದಲ್ಲೂ ಕಾರ್ಯ ನಿರ್ವಹಿಸಿದ್ದೇನೆ. ಸ್ವತಂತ್ರವಾಗಿ ನಿರ್ದೇಶಿಸಿರುವ ಪ್ರಥಮಚಿತ್ರವಿದು. “ಕಪ್ಪು ಬಿಳುಪಿನ ನಡುವೆ” ಚಿತ್ರದ ಕುರಿತು ಹೇಳಬೇಕೆಂದರೆ, “ಕಪ್ಪು ಬಿಳುಪನ್ನು” ಕತ್ತಲು, ಬೆಳುಕಿಗೆ ಹೋಲಿಸಬಹುದು. ಪಾಸಿಟಿವ್ ಹಾಗೂ ನೆಗಟಿವ್ ಎನರ್ಜಿ ಅಂತಲೂ ಎನ್ನಬಹುದು. ಇದೊಂದು ಯೂಟ್ಯೂಬರ್ ಗಳ ಕುರಿತಾದ ಚಿತ್ರ. ಹಾರಾರ್ ಚಿತ್ರವೂ ಹೌದು. ಹಾಗಂತ ಇಲ್ಲಿ ಭಯ ಪಡಿಸುವ ದೆವ್ವಗಳಿಲ್ಲ. ಹಾರಾರ್ ಜಾನರ್ ನಲ್ಲೇ ಹೊಸಪ್ರಯತ್ನವಿದು. ಇನ್ನೂ ಕನಕಪುರದಿಂದ ಮೂವತ್ತು ಕಿಲೋಮೀಟರ್ ದೂರದ ದಟ್ಟ ಕಾನಾನದಲ್ಲಿ ಚಿತ್ರದ ಹೆಚ್ಚಿನ ಚಿತ್ರೀಕರಣವಾಗಿದೆ. ಕನ್ನಡ ಹಾಗೂ ತಮಿಳಿನಲ್ಲಿ ನಿರ್ಮಾಣವಾಗಿರುವ ಈ ಚಿತ್ರ ತೆರೆಗೆ ಬರಲು ಅಣಿಯಾಗಿದೆ. ಸದ್ಯದಲ್ಲೇ ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ‌. ಚಿತ್ರ ಉತ್ತಮವಾಗಿ ಬರಲು ಸಹಕಾರ ನೀಡಿದ ನಿರ್ಮಾಪಕರಿಗೆ ಹಾಗೂ ನನ್ನ ತಂಡಕ್ಕೆ ಧನ್ಯವಾದ ಎಂದರು.

ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಪ್ರೇಕ್ಷಕರಿಗೆ ಉತ್ತಮ ಸಂದೇಶವಿರುವ ಚಿತ್ರ ಕೊಡುವ ಆಸೆಯಿಂದ ಈ ಚಿತ್ರ ನಿರ್ಮಾಣ ಮಾಡಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಧರ್ಮೇಂದ್ರ. ಚಿತ್ರದಲ್ಲಿ ಮೂರು ಹಾಡುಗಳಿದೆ. ಡಾ||ವಿ.ನಾಗೇಂದ್ರಪ್ರಸಾದ್ ಮೂರು ಹಾಡುಗಳನ್ನು ಬರೆದಿದ್ದಾರೆ. “ಕೆ.ಜಿ.ಎಫ್” ಖ್ಯಾತಿಯ ಸಂತೋಷ್ ವೆಂಕಿ ಹಾಗೂ ಶ್ರೀಧರ್ ಕಶ್ಯಪ್ ಹಾಡಿದ್ದಾರೆ. ಜೀ music ಸೌತ್ ಮೂಲಕ ಹಾಡುಗಳು ಬಿಡುಗಡೆಯಾಗಿದೆ ಎಂದರು ಸಂಗೀತ ನಿರ್ದೇಶಕ ರಿಶಾಲ್ ಸಾಯಿ.

ಚಿತ್ರದಲ್ಲಿ ನಟಿಸಿರುವ ಹಿರಿಯ ನಟ ಬಿರಾದಾರ್, ಹಾಸ್ಯ ನಟ ಹರೀಶ್, ನವೀನ್, ಮಾಹೀನ್ ಮತ್ತು ತೇಜಸ್ವಿನಿ ತಮ್ಮ ಪಾತ್ರಗಳ ಕುರಿತು ಮಾಹಿತಿ ನೀಡಿದರು. ಪ್ರಮುಖಪಾತ್ರದಲ್ಲಿ ಖ್ಯಾತ ನಟ ಶರತ್ ಲೋಹಿತಾಶ್ವ ಹಾಗೂ ನಾಯಕಿಯಾಗಿ ವಿದ್ಯಾಶ್ರೀ ಗೌಡ “ಕಪ್ಪು ಬಿಳುಪಿನ ನಡುವೆ” ಚಿತ್ರದಲ್ಲಿ ನಟಿಸಿದ್ದಾರೆ. ಲಿಂಗೇಗೌಡ ಹಾಗೂ ಶಣ್ಮಗಸುಂದರಂ ನಿರ್ಮಾಣದ ಉಸ್ತುವಾರಿ ಈ ಚಿತ್ರಕ್ಕಿದೆ.

#KannadaFilm #Sandalwood #Movie #Horror

Previous Post

ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸಲು ಗುಜರಾತ್ ವಿಧಾನ ಸಭೆಯಲ್ಲಿ ನಿರ್ಣಯ

Next Post

ಮೋದಿ ʻಶ್ವೇತಪತ್ರ’ಕ್ಕೆ ಪ್ರತಿಯಾಗಿ ಕಾಂಗ್ರೆಸ್ ʻಕಪ್ಪು ಪತ್ರ’ !!

Related Posts

Kiccha Sudeep: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್
Top Story

Kiccha Sudeep: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

by ಪ್ರತಿಧ್ವನಿ
August 30, 2026
0

ಬೆಂಗಳೂರು: ‘ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್ ಅವರು ಬೆಳ್ಳಿಪರದೆಯ ಮೇಲಷ್ಟೇ ಅಲ್ಲದೆ, ನಿಜ ಜೀವನದಲ್ಲೂ ಸಮಾಜಮುಖಿ ಕಾರ್ಯಗಳ ಮೂಲಕ ಸದಾ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಮ್ಮ ಪ್ರೀತಿಯ...

Read moreDetails
ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ

August 28, 2026
ಅತಿಯಾದ ಹಿಂಸೆ..ಮಹಿಳೆಯರಿಗೆ ಅಗೌರವ: ‘ಟಾಕ್ಸಿಕ್’ ಬಗ್ಗೆ ಅಣ್ಣಾಮಲೈ ಅಸಮಾಧಾನ

ಅತಿಯಾದ ಹಿಂಸೆ..ಮಹಿಳೆಯರಿಗೆ ಅಗೌರವ: ‘ಟಾಕ್ಸಿಕ್’ ಬಗ್ಗೆ ಅಣ್ಣಾಮಲೈ ಅಸಮಾಧಾನ

August 28, 2026
ಟಾಕ್ಸಿಕ್’ನಲ್ಲಿ ಕಿಯಾರಾಗೆ ಧ್ವನಿ ನೀಡಿದ್ದು ಯಾರು? 120 ಮಂದಿಯ ನಡುವೆ ‘ಟಾಕ್ಸಿಕ್’ ಅವಕಾಶ ಗೆದ್ದ ಕಥೆ!

ಟಾಕ್ಸಿಕ್’ನಲ್ಲಿ ಕಿಯಾರಾಗೆ ಧ್ವನಿ ನೀಡಿದ್ದು ಯಾರು? 120 ಮಂದಿಯ ನಡುವೆ ‘ಟಾಕ್ಸಿಕ್’ ಅವಕಾಶ ಗೆದ್ದ ಕಥೆ!

August 27, 2026
ʼಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲʼ..ಬರ್ತಡೇ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಕಿಚ್ಚ ಸುದೀಪ್‌

ʼಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲʼ..ಬರ್ತಡೇ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಕಿಚ್ಚ ಸುದೀಪ್‌

August 27, 2026
Next Post
ಮೋದಿ ʻಶ್ವೇತಪತ್ರ’ಕ್ಕೆ ಪ್ರತಿಯಾಗಿ ಕಾಂಗ್ರೆಸ್ ʻಕಪ್ಪು ಪತ್ರ’ !!

ಮೋದಿ ʻಶ್ವೇತಪತ್ರ'ಕ್ಕೆ ಪ್ರತಿಯಾಗಿ ಕಾಂಗ್ರೆಸ್ ʻಕಪ್ಪು ಪತ್ರ' !!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada