ಬೆಂಗಳೂರು (Bengaluru): ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ತನಿಖೆ ಆರಂಭಿಸಿದೆ.
74.93 ಕೋಟಿ ರೂಪಾಯಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆದರೆ, ಪ್ರಕರಣ ಸಂಬಂಧ ವಿವರಗಳನ್ನು ವರ್ಗಾಯಿಸುವಂತೆ ಕೇಂದ್ರ ತನಿಖಾ ದಳ (CBI)ಕ್ಕೆ ಮಾಡಿರುವ ಮನವಿಗೆ ಯಾವುದೇ ಪ್ರತಿಕ್ರಿಯೆಗಳು ಬಂದಿಲ್ಲ ಎಂದು ಮೂಲಗಳು ತಿಳಿಸಿವೆ.
ಶಿವಕುಮಾರ್ ಅವರ ಆಸ್ತಿ, ಆದಾಯ ಮತ್ತು ವೆಚ್ಚದ ವಿವರಗಳನ್ನು ಕೋರಿ ಲೋಕಾಯುಕ್ತ ತನಿಖಾಧಿಕಾರಿಗಳು ವಿವಿಧ ತನಿಖಾ ಸಂಸ್ಥೆಗಳಿಗೆ ನೋಟಿಸ್ (Notice) ಜಾರಿ ಮಾಡಿದೆ.
ಆದಾಗ್ಯೂ, ಲೋಕಾಯುಕ್ತ ಅಧಿಕಾರಿಗಳು, ನೋಟಿಸ್ ನೀಡಿದ ನಿರ್ದಿಷ್ಟ ತನಿಖಾ ಸಂಸ್ಥೆಗಳ ಹೆಸರು ಹಾಗೂ ವಿವರಗಳನ್ನು ನೀಡಲು ನಿರಾಕರಿಸಿದ್ದಾರೆ.
#karnataka #bengaluru #dkshivakumar #lokayukta #DACase