• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕಾನ್ಪುರ ಹಿಂಸಾಚಾರದ ಹಿಂದೆ ಸಿಎಎ ವಿರೋಧಿ ಪ್ರತಿಭಟನಾಕಾರರು : ಬಿಜೆಪಿ ಆರೋಪದ ನಡುವೆ ಪೊಲೀಸರು ಹೇಳಿದ್ದೇನು?

Any Mind by Any Mind
June 4, 2022
in ದೇಶ
0
ಕಾನ್ಪುರ ಹಿಂಸಾಚಾರದ ಹಿಂದೆ ಸಿಎಎ ವಿರೋಧಿ ಪ್ರತಿಭಟನಾಕಾರರು : ಬಿಜೆಪಿ ಆರೋಪದ ನಡುವೆ ಪೊಲೀಸರು ಹೇಳಿದ್ದೇನು?
Share on WhatsAppShare on FacebookShare on Telegram

ಶುಕ್ರವಾರ ಕಾನ್ಪುರ ನಗರದ ಪರೇಡ್ ಚೌಕ್ ಪ್ರದೇಶದಲ್ಲಿ ಭುಗಿಲೆದ್ದ ಹಿಂಸಾಚಾರದ ಹಿಂದೆ ಸ್ಥಳೀಯ ಮುಸ್ಲಿಂ ಮುಖಂಡ ಹಯಾತ್ ಜಾಫರ್ ಹಶ್ಮಿ ಪ್ರಮುಖ ಸಂಚುಕೋರ ಎಂದು ಕಾನ್ಪುರ ಪೊಲೀಸರು ಗುರುತಿಸಿದ್ದಾರೆ. ಪ್ರಕರಣದಲ್ಲಿ ಎಫ್‌ಐಆರ್‌ನಲ್ಲಿ ಹೆಸರಿಸಲಾದ 40 ಆರೋಪಿಗಳಲ್ಲಿ ಈತನೂ ಸೇರಿದ್ದಾನೆ.

ADVERTISEMENT

ಮೌಲಾನಾ ಮುಹಮ್ಮದ್ ಜೌಹರ್ ಅಲಿ ಅಭಿಮಾನಿಗಳ ಸಂಘದ ರಾಷ್ಟ್ರೀಯ ಅಧ್ಯಕ್ಷರಾದ ಹಯಾತ್ ಜಾಫರ್ ಹಶ್ಮಿ ಅವರು ಟಿವಿ ಸುದ್ದಿ ಚರ್ಚೆಯ ವೇಳೆ ಬಿಜೆಪಿ ವಕ್ತಾರ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ಅವರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಾರುಕಟ್ಟೆ ಬಂದ್‌ಗೆ ಕರೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಶ್ಮಿ ಜನರನ್ನು ಪ್ರಚೋದಿಸಿದ್ದಾರೆ ಡಎಂದು ಆರೋಪಿಸಿದ್ದು, ಇದು ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ಮತ್ತು ಘರ್ಷಣೆಗೆ ಕಾರಣವಾಯಿತು, ಇದರಿಂದಾಗಿ ಹಲವಾರು ಪೊಲೀಸ್ ಸಿಬ್ಬಂದಿ ಸೇರಿದಂತೆ 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಆತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ.

ಈ ಹಿಂದೆ, ಕಾನ್ಪುರದಲ್ಲಿ ಉದ್ದೇಶಿತ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಹಶ್ಮಿ ಭಾಗಿಯಾಗಿದ್ದರು.

ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಅವರು ಕಟ್ಟುನಿಟ್ಟಿನ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಮತ್ತು ಅವರ ಆಸ್ತಿಗಳನ್ನು ವಶಪಡಿಸಿಕೊಳ್ಳಲಾಗುವುದು ಅಥವಾ ನೆಲಸಮಗೊಳಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಎಹಿತ್‌ಶಾಮ್ ಕಬಾಡಿ, ಜೀಶನ್, ಆಕಿಬ್, ನಿಜಾಮ್, ಅಜೀಜುರ್, ಅಮೀರ್ ಜಾವೇದ್, ಇಮ್ರಾನ್ ಕಾಳೆ, ಯೂಸುಫ್ ಮನ್ಸೂರಿ ವಿರುದ್ದ ಎಫ್‌ಐಆರ್‌ ದಾಖಲಾಗಿದೆ. ಗಲಭೆ ಮತ್ತು ಹಿಂಸಾಚಾರದ ಕುರಿತು ಮೂರು ಎಫ್‌ಐಆರ್‌ಗಳಾಗಿದ್ದು, 1,000 ಕ್ಕೂ ಹೆಚ್ಚು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ  ದಾಖಲಿಸಲಾಗಿದೆ.

ರಾತ್ರಿಯ ದಾಳಿಯ ನಂತರ ಇದುವರೆಗೆ 35 ಮಂದಿಯನ್ನು ಬಂಧಿಸಲಾಗಿದೆ ಮತ್ತು ವೀಡಿಯೊಗಳು ಮತ್ತು ಸಿಸಿಟಿವಿ ದೃಶ್ಯಗಳ ಮೂಲಕ ಹಿಂಸಾಚಾರದಲ್ಲಿ ಭಾಗಿಯಾಗಿರುವ ಇತರರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಲಿಂಕ್‌ಗಳ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.

ಉತ್ತರ ಪ್ರದೇಶದ ಎಂಎಲ್‌ಸಿ ಮತ್ತು ಬಿಜೆಪಿ ನಾಯಕ ಮೊಹ್ಸಿನ್ ರಜಾ ಅವರು ಕಾನ್ಪುರದಲ್ಲಿ ನಡೆದ ಹಿಂಸಾಚಾರವು ಪೂರ್ವ ಯೋಜಿತ ಪಿತೂರಿಯಾಗಿದೆ.ಇದರಲ್ಲಿ ಸಿಎಎ ವಿರೋಧಿ ಪ್ರತಿಭಟನಾಕಾರರು ಕೂಡಾ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.

Tags: BJPCongress PartyCovid 19ಕಾನ್ಪುರ ಹಿಂಸಾಚಾರನರೇಂದ್ರ ಮೋದಿಪೊಲೀಸರುಬಿಜೆಪಿಬಿಜೆಪಿ ಸರ್ಕಾರಸಿಎಎ ವಿರೋಧಿ ಪ್ರತಿಭಟನೆ
Previous Post

ಮೊಬೈಲ್‌ ಫೋನ್‌ ಕೊಡಿಸಲಿಲ್ಲ ಅಂತ ತಾಯಿಯನ್ನೇ ಕೊಂದ ಮಗ!

Next Post

ಆರ್ ಎಸ್ ಎಸ್ ತಂಟೆಗೆ ಬರಬೇಡಿ ಹುಷಾರ್; ಕೆ.ಎಸ್.ಈಶ್ವರಪ್ಪ ಟ್ವೀಟ್

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

May 26, 2026
Next Post
ಆರ್ ಎಸ್ ಎಸ್ ತಂಟೆಗೆ ಬರಬೇಡಿ ಹುಷಾರ್; ಕೆ.ಎಸ್.ಈಶ್ವರಪ್ಪ ಟ್ವೀಟ್

ಆರ್ ಎಸ್ ಎಸ್ ತಂಟೆಗೆ ಬರಬೇಡಿ ಹುಷಾರ್; ಕೆ.ಎಸ್.ಈಶ್ವರಪ್ಪ ಟ್ವೀಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada