• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಅನು ಪ್ರಭಾಕರ್ ಅಭಿನಯದ “ಹಗ್ಗ” ಚಿತ್ರ ಈ ವಾರ ತೆರೆಗೆ

ಪ್ರತಿಧ್ವನಿ by ಪ್ರತಿಧ್ವನಿ
September 18, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಅನು ಪ್ರಭಾಕರ್ ಕನ್ನಡ ಚಿತ್ರರಂಗದಲ್ಲಿ ನಾಯಕಿಯಾಗಿ ( heroine25 years)ವರ್ಷಗಳನ್ನು ಪೂರೈಸಿದ್ದಾರೆ. ಅನು ಪ್ರಭಾಕರ್ ನಾಯಕಿಯಾಗಿ ಅಭಿನಯಿಸಿದ ಮೊದಲ ಚಿತ್ರ ‘ಹೃದಯ ಹೃದಯ’,(film ‘Hridaya Hridiya’)1999ರ ಸೆಪ್ಟೆಂಬರ್ 15ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಆ ಚಿತ್ರದ ಮೂಲಕ ವೃತ್ತಿ ಜೀವನ ಪ್ರಾರಂಭಿಸಿದ ಅವರು, ಈ 25 ವರ್ಷಗಳಲ್ಲಿ 80ಕ್ಕೂ ಹೆಚ್ಚು ಚಿತ್ರಗಳಲ್ಲಿ (pictures)ನಟಿಸಿದ್ದಾರೆ.

ADVERTISEMENT

ಅಂದಹಾಗೆ, ಅನು ಪ್ರಭಾಕರ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಹಗ್ಗ’ ಚಿತ್ರವು ಸೆಪ್ಟೆಂಬರ್ 20ರಂದು ಬಿಡುಗಡೆಯಾಗುತ್ತಿದೆ.ಅನು ಅಭಿನಯದ ಮೊದಲ ಚಿತ್ರ ಬಿಡುಗಡೆಯಾದ ದಿನವೇ ‘ಹಗ್ಗ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು,ಈ ಸಂದರ್ಭದಲ್ಲಿ ಚಿತ್ರತಂಡದವರು ಅನು ಪ್ರಭಾಕರ್ ಅವರನ್ನು ಗೌರವಿಸಿದ್ದಾರೆ. ಕೇಕ್‍ ಕಟ್ ಮಾಡುವ ಮೂಲಕ ಸಂಭ್ರಮವನ್ನು ಹಂಚಿಕೊಂಡಿದ್ದಾರೆ.ಇದೇ ಸಂದರ್ಭದಲ್ಲಿ ನಟಿ ಹರ್ಷಿಕಾ ಪೂಣಾಚ್ಛ ಅವರ ಸೀಮಂತಶಾಸ್ತ್ರವನ್ನೂ ಚಿತ್ರತಂಡ ಆಯೋಜಿಸಿತ್ತು. ಈ ಸಂದರ್ಭದಲ್ಲಿ ನಟಿ ಪ್ರಿಯಾಂಕಾ ಉಪೇಂದ್ರ, ಅನು ಪ್ರಭಾಕರ್, ಗಾಯತ್ರಿ ಪ್ರಭಾಕರ್ ಮತ್ತು ರಘು ಮುಖರ್ಜಿ ಸಹ ಹಾಜರಿದ್ದರು.

ನಾನು ಈ ಚಿತ್ರ ಒಪ್ಪಿದ್ದು ನಿರ್ದೇಶಕ ಅವಿನಾಶ್ ಹೇಳಿದ ಕಥೆಗಾಗಿ ಎಂದು ಮಾತನಾಡಿದ ಅನು ಪ್ರಭಾಕರ್, ನನಗೆ ಹಾರರ್ ಚಿತ್ರಗಳೆಂದರೆ ಇಷ್ಟವಿಲ್ಲ. ನಾನು ಹಾರರ್ ಚಿತ್ರಗಳನ್ನು ನೋಡುವುದಿಲ್ಲ. ಆದರೂ ನಾನು ಒಪ್ಪಿದ್ದು ಅವರು ಹೇಳಿದ ಕಥೆಗಾಗಿ. ನನಗೆ ಅವರ ಸ್ಪಷ್ಟತೆ ಇಷ್ಟವಾಯಿತು. ಅವರು ಏನು ಹೇಳಿದ್ದರೊ, ಅದನ್ನು ತೆರೆಯ ಮೇಲೆ ತಂದಿದ್ದಾರೆ. ಮೊದಲ ಚಿತ್ರದಲ್ಲೇ ಇಷ್ಟೊಂದು ಚೆನ್ನಾಗಿ ಕೆಲಸ ಮಾಡಿದ್ದು ನೋಡಿ ಖುಷಿಯಾಯಿತು ಹಾಗಂತ ಚಿತ್ರೀಕರಣ ಸುಲಭವಾಗಿರಲಿಲ್ಲ ನನ್ನ ಭಾಗದ ಚಿತ್ರೀಕರಣ ರಾತ್ರಿ 7ಕ್ಕೆ ಶುರುವಾಗಿ ಬೆಳಗ್ಗಿನ ಜಾವಕ್ಕೆ ಮುಗಿಯುತ್ತಿತ್ತು. ಆದರೆ, ನಾನು ಎಲ್ಲ ಹೋದ ಮೇಲೆ ಹೋಗಬೇಕಿತ್ತು. ಏಕೆಂದರೆ, ಮೇಕಪ್‍ ಹಾಕುವುದಕ್ಕೆ, ತೆಗೆಯುವುದಕ್ಕೆ ಎರಡು ತಾಸು ಬೇಕಾಗುತ್ತಿತ್ತು. ನನ್ನ ಜೊತೆಗೆ ತಾಳ್ಮೆಯಿಂದ ಕಾದಿದ್ದ ನನ್ನ ತಂಡಕ್ಕೆ ಧನ್ಯವಾದ ಹೇಳಬೇಕು ಎಂದರು.

ನಮ್ಮ ಟೀಸರ್ ಬಹಳ ಯಶಸ್ವಿಯಾಯಿತು. (succeeded)ಹಲವು ದಿನಗಳ ಕಾಲ ಟ್ರೆಂಡ್‍ ಆಗಿತ್ತು. ಈ ಚಿತ್ರ ಗೆಲ್ಲುತ್ತದೆ ಎಂಬ ವಿಶ್ವಾಸ ಇದೆ ಅದರಲ್ಲೂ ಅನು ಪ್ರಭಾಕರ್ ಅವರು ದ್ವಿತೀಯಾರ್ಧವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ ಮತ್ತು ತಮ್ಮ ಪಾತ್ರವನ್ನು ಬಹಳ ಚೆನ್ನಾಗಿ ನಿಭಾಯಿಸಿದ್ದಾರೆ ಎಂದು ನಿರ್ಮಾಪಕ ರಾಜ್ ಭಾರದ್ವಾಜ್ ತಿಳಿಸಿದರು.

ಇದಕ್ಕೂ ಮೊದಲು ರಾಜ್ ಭಾರದ್ವಾಜ್ ನಿರ್ಮಾಣದಲ್ಲಿ ಒಂದು ಕಿರುಚಿತ್ರ ನಿರ್ದೇಶಿಸಿದ್ದೆ ಇದು ನನ್ನ ಮೊದಲ ಚಿತ್ರ. ಈ ಚಿತ್ರದಲ್ಲಿ ಹಗ್ಗವನ್ನು ಆಯುಧವನ್ನಾಗಿ ಬಳಸಿಕೊಳ್ಳಲಾಗಿದೆ ಒಳ್ಳೆಯ ವಿಷಯಕ್ಕಾಗಿ ಹಗ್ಗ ಹೋರಾಟ ಮಾಡುತ್ತದೆ. ಇದೊಂದು ಹಾರರ್ ಫ್ಯಾಂಟಸಿ ಆ್ಯಕ್ಷನ್‍ ಥ್ರಿಲ್ಲರ್ (Fantasy action thriller)ಚಿತ್ರ. ಇಲ್ಲಿ ಸಂದೇಶವಿದೆ, ಸಾಕಷ್ಟು ಗ್ರಾಫಿಕ್ಸ್ ಇದೆ ಒಂದು ಪಾತ್ರಕ್ಕಾಗಿ ಅನು ಪ್ರಭಾಕರ್ ಇದ್ದರೇ ಚೆನ್ನ ಎಂದನಿಸಿತು. ಅವರೂ ಒಪ್ಪಿಕೊಂಡರು ಆ ನಂತರ ಆ ಪಾತ್ರವನ್ನು( Accepted ) ಅವರು ಬಿಟ್ಟರೆ ಯಾರಿಂದಲೂ ಸಾಧ್ಯವಿಲ್ಲ ಎಂದನಿಸಿತು ಎಂದರು ನಿರ್ದೇಶಕ ಅವಿನಾಶ್.

ಕಾರ್ಯಕಾರಿ ನಿರ್ಮಾಪಕ ದಯಾಳ್ ಪದ್ಮನಾಭನ್‍ ಮಾತನಾಡಿ, ಇದೊಂದು ಮಹಿಳಾ ಪ್ರಧಾನ ಚಿತ್ರ. ರಾಷ್ಟ್ರೀಯ ಸಮಸ್ಯೆಯ ಕುರಿತಾದ ಕಥೆ ಇದೆ. ಈ ಬಗ್ಗೆ ಯಾರೂ ಚಿತ್ರ ಮಾಡಿರಲಿಲ್ಲ. ದ್ವಿತೀಯಾರ್ಧದಲ್ಲಿ VFX ಸಹಕಾರದೊಂದಿಗೆ ಅದನ್ನು ಚೆನ್ನಾಗಿ ಹೇಳುವ ಪ್ರಯತ್ನ ಮಾಡಿದ್ದಾರೆ. ಚಿತ್ರದ ದ್ವಿತೀಯಾರ್ಧ ಬಹಳ ಚೆನ್ನಾಗಿ ಮೂಡಿಬಂದಿದೆ. ಈ ಚಿತ್ರ ಗೆಲ್ಲುತ್ತದೆ ಎಂಬ ನಂಬಿಕೆ ಇದೆ. ನಿರ್ಮಾಪಕರು ಎಲ್ಲೂ ರಾಜಿ ಆಗಿಲ್ಲ. ಇತ್ತೀಚೆಗೆ ಚಿತ್ರದ ಹಿಂದಿ ಡಬ್ಬಿಂಗ್‍ ಹಕ್ಕುಗಳ ಬೇಡಿಕೆ ಬಂದಿತ್ತು. ಆದರೆ, ನಿರ್ಮಾಪಕರು ಮಾರುವುದಕ್ಕೆ ಒಪ್ಪಲಿಲ್ಲ. ಮುಂದೆ ಇನ್ನೂ ಒಳ್ಳೆಯ ಅವಕಾಶಗಳು ಬರಬಹುದು ಎಂದು ಸುಮ್ಮನಾದರು. ಅವರಿಗೆ ಒಳ್ಳೆಯದಾಗಬೇಕು. ನನಗೆ ಅವರ ಶ್ರದ್ಧೆ ಇಷ್ಟವಾಯಿತು. ಚಂದನ್‍ ಫಿಲಂಸ್‍ ಸಂಸ್ಥೆ ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದೆ ಎಂದು ತಿಳಿಸಿದರು.

ನಮಗೆಲ್ಲ ಸ್ಫೂರ್ತಿ ಅವರು. ಅವರು ನಮ್ಮ ಪಾಲಿಗೆ ‘ಟೈಟಾನಿಕ್‍ ಹೀರೋಯಿನ್‍’. ಅವರ 25ನೇ ವರ್ಷದ ಸಂಭ್ರಮದ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಖುಷಿಯಾಗುತ್ತಿದೆ. ಈ ಚಿತ್ರದಲ್ಲಿ ಅಭಿನಯಿಸಿದ್ದು ಒಂದೊಳ್ಳೆಯ ಅನುಭವ. ನಿರ್ದೇಶಕರಿಗೆ ತಾವೇನು ಮಾಡುತ್ತಿದ್ದೀನಿ ಎಂದು ಚೆನ್ನಾಗಿ ಗೊತ್ತಿತ್ತು. ನಾವು ಕೇಳುವುದಕ್ಕಿಂತ ಮೊದಲೇ ನಿರ್ಮಾಪಕರು ಸಂಭಾವನೆ ಕೊಡುತ್ತಿದ್ದರು. ಇಂಥಾ ನಿರ್ಮಾಪಕರು ಕಡಿಮೆ. ಇಂಥವರನ್ನು ಚಿತ್ರರಂಗ ಉಳಿಸಿಕೊಳ್ಳಬೇಕು ಎಂದರು ನಟಿ ಹರ್ಷಿಕಾ ಪೂಣಚ್ಛ. ಗಾಯತ್ರಿ ಪ್ರಭಾಕರ್, ತಬಲಾ ನಾಣಿ, ರಘು ಮುಖರ್ಜಿ ಮುಂತಾದವರು ಮಾತನಾಡಿದರು.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Actress Priyanka Upendraanu prabhakarfilm 'Hrudaya Hrudaya'Gayatri Prabhakar and Raghu MukherjeeSeemanthashastra
Previous Post

30 ಸೇನಾ ಸಿಬ್ಬಂದಿ ವಿರುದ್ದದ ಆರೋಪದಿಂದ ಬಿಡುಗಡೆಗೊಳಿಸಿದ ಸುಪ್ರೀಂ ಕೋರ್ಟ್‌

Next Post

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಭರಪೂರ ಕೊಡುಗೆ; 11,770 ಕೋಟಿ ರೂ. ಯೋಜನೆಗಳಿಗೆ ಅನುಮತಿ

Related Posts

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
0

ಬೆಂಗಳೂರು: ಕನ್ನಡದ ವಿಚಾರದಲ್ಲಿ ಸದಾ ಧ್ವನಿ ಎತ್ತುತ್ತಾ ಬಂದಿರುವ ಬಿಗ್‌ಬಾಸ್ ಕನ್ನಡ ಸ್ಪರ್ಧಿ ಅಶ್ವಿನಿ ಗೌಡ ಇದೀಗ ಫಿನಾಲೆ ವೀಕ್ ಟಾಸ್ಕ್‌ನಲ್ಲಿ ಮಾಡಿದ ತಪ್ಪಿನಿಂದ ಭಾರೀ ಟ್ರೋಲ್‌ಗೆ...

Read moreDetails
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026
Next Post

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಭರಪೂರ ಕೊಡುಗೆ; 11,770 ಕೋಟಿ ರೂ. ಯೋಜನೆಗಳಿಗೆ ಅನುಮತಿ

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

January 14, 2026
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada