ಕಳೆದ ಒಂದು ವಾರಗಳಿಂದ ದೇಶದಲ್ಲಿ ಒಂದು ದೇಶ ಒಂದು ಚುನಾವಣೆ ಎಂಬ ಚರ್ಚೆ ಬಹಳ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ ಅದರಲ್ಲೂ ಪ್ರಮುಖವಾಗಿ ಹಲವು ರಾಜಕೀಯ ಪಂಡಿತರು ಈ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
ಇದೇ ಕಾರಣದಿಂದಾಗಿ ಇದೀಗ ದೇಶದಲ್ಲಿ ಅವಧಿಗೂ ಮುನ್ನವೇ ಚುನಾವಣೆ ನಡೆಯಬಹುದು ಎಂದು ಊಹಿಸಲಾಗಿದೆ ಆದರೆ ಇದಕ್ಕೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಬೇರೆಯದ್ದೇ ಉತ್ತರ ನೀಡಿದ್ದಾರೆ.
ಹೌದು.. ಸಚಿವ ಅನುರಾಗ್ ಠಾಕೂರ್ ಅವರು ಲೋಕಸಭೆಗೆ ಶೀಘ್ರ ಚುನಾವಣೆಯನ್ನು ಕರೆಯುವ ಯಾವುದೇ ಯೋಜನೆ ಹೊಂದಿಲ್ಲ ಎಂದು ಭಾನುವಾರ ಹೇಳಿದ್ದಾರೆ.” ಸರ್ಕಾರಕ್ಕೆ ಅವಧಿಪೂರ್ವ ಚುನಾವಣೆಯ ಉದ್ದೇಶವಿಲ್ಲ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪ್ರಸ್ತುತ ಅವಧಿಯ ಕೊನೆಯ ದಿನದವರೆಗೆ ಭಾರತದ ನಾಗರಿಕರಿಗೆ ಸೇವೆ ಸಲ್ಲಿಸಲು ಬಯಸುತ್ತಾರೆ” ಎಂದು ಸ್ಪಷ್ಟಪಡಿಸಿದರು.
ಈ ಮೂಲಕ ಇದೇ ಮೊದಲ ಬಾರಿಗೆ ಕೇಂದ್ರ ಸಚಿವರೊಬ್ಬರು ಅವಧಿ ಮುನ್ನ ಚುನಾವಣೆ ವಿಚಾರವನ್ನ ನಿರಾಕರಿಸಿದ್ದಾರೆ.