ಇಂದು ಲೋಕಸಭೆಯಲ್ಲಿ ಬಿಜೆಪಿಯ ಸಂಸದ (BJP) ಅನುರಾಗ್ ಠಾಕೂರ್ (Anurag thakur) ತಮ್ಮ ವಿರುದ್ಧ ಮಾಡಿದ ಆರೋಪದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna kharge) ಗರಂ ಆಗಿದ್ದಾರೆ.

ಬಿಜೆಪಿ ನಾಯಕ ಅನುರಾಗ್ ಠಾಕೂರ್ ತಮ್ಮ ಬಗ್ಗೆ ಮಾಡಿದ ಆರೋಪವನ್ನು ಸಾಬೀತುಪಡಿಸಲಿ.ಇಲ್ಲವೇ ಅವರ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ವಾಗ್ದಾಳಿ ನಡೆಸಿದ್ದಾರೆ.ಅನುರಾಗ್ ಠಾಕೂರ್ ಹೇಳಿಕೆಗೆ ಕ್ಷಮೆ ಕೇಳಬೇಕು ಎಂದು ರಾಜ್ಯಸಭೆಯ ಸಭಾನಾಯಕ ಜೆಪಿ ನಡ್ಡಾ (JP Nadda) ರನ್ನ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ನಿನ್ನೆ ಲೋಕಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅನುರಾಗ್ ಠಾಕೂರ್ ಮಾತನಾಡಿದ್ದರು. ಕಾಂಗ್ರೆಸ್ ಸದಸ್ಯರ ಆಕ್ಷೇಪದ ಬಳಿಕ ಖರ್ಗೆ ಹೆಸರು ಅನ್ನು ಕಡತದಿಂದ ತೆಗೆಯಲಾಗಿತ್ತು.ಈ ವಿಷಯವನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ,ರಾಜ್ಯಸಭೆಯಲ್ಲಿ ನಡೆಯುತ್ತಿರುವ ವಕ್ಛ್ ತಿದ್ದುಪಡಿ ಮಸೂದೆಯ ಮೇಲಿನ ಚರ್ಚೆ ವೇಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.