• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

APMC ನಾಶವಾದರೆ ಪೂರ್ಣ ಕೃಷಿಕ್ಷೇತ್ರ ಮಣ್ಣುಪಾಲು- ಸಿದ್ದರಾಮಯ್ಯ

by
September 21, 2020
in ಕರ್ನಾಟಕ
0
APMC ನಾಶವಾದರೆ ಪೂರ್ಣ ಕೃಷಿಕ್ಷೇತ್ರ ಮಣ್ಣುಪಾಲು- ಸಿದ್ದರಾಮಯ್ಯ
Share on WhatsAppShare on FacebookShare on Telegram

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ತರಲು ಉದ್ದೇಶಿಸಿರುವ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಕಾನೂನುಗಳ ವಿರುದ್ಧ ದೇಶದಾದ್ಯಂತ ವ್ಯಾಪಕ ಹೋರಾಟಗಳು ಆರಂಭವಾಗಿದೆ. ಕರ್ನಾಟಕದಲ್ಲಿಯೂ ರೈತ ಹಾಗೂ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಎನ್‌ಡಿಎ ಮೈತ್ರಿಕೂಟದ ಓರ್ವ ಮಂತ್ರಿಯೇ ತನ್ನ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿ ಹೊಸ ಕಾನೂನುಗಳಿಗೆ ತನ್ನ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಇನ್ನು ಕರ್ನಾಟಕ ಹಾಗೂ ಕೇಂದ್ರ ಸರ್ಕಾರಗಳು ತರಹೊರಟಿರುವ ನೂತನ ಕಾನೂನನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಖಂಡಿಸಿದ್ದಾರೆ. ಸರ್ಕಾರ ತರಲು ಹೊರಟಿರುವ ಕೃಷಿ ಸಂಬಂಧಿತ ನೂತನ ಕಾನೂನುಗಳು ರೈತರ ಪಾಲಿಗೆ ಮರಣ ಶಾಸನವಾಗಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತಂತೆ ದೀರ್ಘ ಬರಹವನ್ನು ಸಿದ್ದರಾಮಯ್ಯ ತನ್ನ ಅಧಿಕೃತ ಫೇಸ್‌ಬುಕ್ ಹಾಗೂ ‌ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಸಂಪೂರ್ಣ ಬರಹ ಈ ಕೆಳಗಿನಂತಿದೆ.

Also Read: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನೀತಿಗಳನ್ನು ವಿರೋಧಿಸಿ ಪರ್ಯಾಯ ಜನತಾ ಅಧಿವೇಶನ

“ಸಂಸತ್ ನಲ್ಲಿ ವಿರೋಧಪಕ್ಷಗಳ ಅಭಿವ್ಯಕ್ಕಿ ಸ್ವಾತಂತ್ರ್ಯದ ಕೊರಳನ್ನು ಹಿಚುಕಿ, ರೈತರ ಪಾಲಿಗೆ ಮರಣ ಶಾಸನವಾಗಿರುವ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆಗೆ ಬಲಾತ್ಕಾರದಿಂದ ಅಂಗೀಕಾರ ಪಡೆಯುವ ಮೂಲಕ ಬಿಜೆಪಿ ಸರ್ಕಾರ ಸಂಸದೀಯ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದೆ.

ಕರೋನಾ ರೋಗವನ್ನು ನಿಯಂತ್ರಿಸಲಾಗದೆ ಮಂಡಿ ಊರಿ ದೇಶದ ಜನರನ್ನು ಸಾವು-ನೋವಿನ ದವಡೆಗೆ ನೂಕುತ್ತಿರುವ ಅಸಮರ್ಥ ಸರ್ಕಾರ, ಈ ಅವಕಾಶವನ್ನು ದುರ್ಬಳಕೆ ಮಾಡಿಕೊಂಡು ಕರೋನೋತ್ತರ ಭಾರತದ ಏಕೈಕ ಆಶಾಕಿರಣವಾದ ಕೃಷಿ ಕ್ಷೇತ್ರವನ್ನು ಸರ್ವನಾಶ ಮಾಡಲು ಹೊರಟಿರುವುದು ದುರಂತ.

ವಿರೋಧಪಕ್ಷಗಳ ಅಭಿವ್ಯಕ್ತಿಯನ್ನು ಸ್ವಾತಂತ್ರ್ಯದ ಕೊರಳು ಹಿಚುಕಿ,
ರೈತರ ಪಾಲಿಗೆ ಮರಣಶಾಸನವಾಗಿರುವ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ ( ಉತ್ತೇಜನ ಮತ್ತು ಸೌಲಭ್ಯ) ಮಸೂದೆಗೆ ಅಂಗೀಕಾರ ಪಡೆಯುವ ಮೂಲಕ @BJP4India ಸರ್ಕಾರ ಸಂಸದೀಯ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದೆ.
1/12#APMCAct #WeAgainstFarmBills

— Siddaramaiah (@siddaramaiah) September 21, 2020


ಕೃಷಿಕ್ಷೇತ್ರಕ್ಕೆ ಸಂಬಂಧಿಸಿದ ಮೂರು ಪ್ರಮುಖ ಮಸೂದೆಗಳ ಬಗ್ಗೆ ಉಭಯ ಸದನಗಳಲ್ಲಿ ವಿಸ್ತೃತ ಚರ್ಚೆಗೆ ಅವಕಾಶ ನೀಡಬೇಕು ಮತ್ತು ಮಸೂದೆಗಳನ್ನು ಆಯ್ಕೆ ಸಮಿತಿಯ ಪರಿಶೀಲನೆಗೊಳಪಡಿಸಬೇಕು ಎಂಬ ವಿರೋಧಪಕ್ಷಗಳ ಬೇಡಿಕೆಯನ್ನು ಈಡೇರಿಸಲು ಕೇಂದ್ರ ಸರ್ಕಾರ ಹಿಂದೇಟು ಹಾಕುತ್ತಿರುವುದು ಯಾಕೆ?

ದುರ್ಬಲರು, ಅಸಹಾಯಕರು ಮತ್ತು ಅಸಂಘಟಿತರಾಗಿರುವ ಶೇಕಡಾ 80ರಷ್ಟಿರುವ ಸಣ್ಣ ಮತ್ತು ಮಧ್ಯಮ ರೈತರಿಗೆ ಕೃಷಿಮಾರುಕಟ್ಟೆಯನ್ನು ಸರ್ಕಾರದ ನೆರವಿಲ್ಲದೆ ಸ್ವಯಂನಿಯಂತ್ರಿಸಲಾರರು. ಆ ಕೆಲಸ ಮಾಡುತ್ತಿದ್ದ ಎಪಿಎಂಸಿಯನ್ನು ನಾಶಮಾಡುವುದೆಂದರೆ ಪೂರ್ಣ ಕೃಷಿಕ್ಷೇತ್ರವನ್ನು ಮಣ್ಣುಪಾಲು ಮಾಡುವುದು.

ಕೊರೊನಾ ಸೋಂಕು ನಿಯಂತ್ರಿಸಲಾಗದೆ ಮಂಡಿ ಊರಿ ದೇಶದ ಜನರನ್ನು ಸಾವು-ನೋವಿನ ದವಡೆಗೆ ನೂಕುತ್ತಿರುವ ಅಸಮರ್ಥ @BJP4India ಸರ್ಕಾರ,
ಈ ಅವಕಾಶ ದುರ್ಬಳಕೆ ಮಾಡಿಕೊಂಡು ಕೊರೊನೋತ್ತರ ಭಾರತದ ಏಕೈಕ ಆಶಾಕಿರಣವಾದ ಕೃಷಿ ಕ್ಷೇತ್ರವನ್ನು ಸರ್ವನಾಶ ಮಾಡಲು ಹೊರಟಿರುವುದು ದುರಂತ.
2/12#APMCAct #WeAgainstFarmBills

— Siddaramaiah (@siddaramaiah) September 21, 2020


ಎಪಿಎಂಸಿಗಳ ನಿಯಂತ್ರಣವಿಲ್ಲದೆ ಸ್ವತಂತ್ರವಾಗಿ ವ್ಯಾಪಾರ ನಡೆಸುವ ಅವಕಾಶಕ್ಕಾಗಿ ಪ್ರಯತ್ನಿಸುತ್ತಲೇ ಬಂದಿರುವ ಖಾಸಗಿ ಕಂಪೆನಿಗಳಿಗೆ ಹೆಬ್ಬಾಗಿಲು ತೆರೆಯುವುದೇ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆಯ ದುರುದ್ದೇಶ. ಇದು ನಮ್ಮ ಆರ್ಥಿಕತೆಯ ಬೆನ್ನೆಲುಬಾಗಿರುವ ರೈತರ ಬೆನ್ನು ಮುರಿಯುವ ಮನೆಹಾಳು ಕೆಲಸ.

ಕೃಷಿ ಮಾರುಕಟ್ಟೆಯ ಮೇಲಿನ ಸರ್ಕಾರದ ನಿಯಂತ್ರಣವನ್ನು ಬಿಟ್ಟುಕೊಟ್ಟು ಎಪಿಎಂಸಿಗಳನ್ನು ಖಾಸಗಿ ಧಣಿಗಳ ಪಾದಕ್ಕೊಪ್ಪಿಸಿ, ರೈತರನ್ನು ಅವರ ಜೀತದಾಳುಗಳಾಗಿ ಮಾಡಲು ಹೊರಟಿರುವ ಬಿಜೆಪಿ ಸರ್ಕಾರದ ಹುನ್ನಾರಗಳನ್ನು ರೈತಬಂಧುಗಳು ಅರಿತುಕೊಳ್ಳಬೇಕು.

ಕೃಷಿಗೆ ಸಂಬಂಧಿಸಿದ ಮೂರು ಪ್ರಮುಖ ಮಸೂದೆಗಳ ಬಗ್ಗೆ ಸಂಸತ್‌ನಲ್ಲಿ ವಿಸ್ತೃತ ಚರ್ಚೆಗೆ ಅವಕಾಶ ನೀಡಬೇಕು ಮತ್ತು ಮಸೂದೆಗಳನ್ನು ಆಯ್ಕೆ ಸಮಿತಿಯ ಪರಿಶೀಲನೆಗೊಳಪಡಿಸಬೇಕು ಎಂಬ ವಿರೋಧಪಕ್ಷಗಳ ಬೇಡಿಕೆಯನ್ನು ಈಡೇರಿಸಲು @BJP4India ಸರ್ಕಾರ ಹಿಂದೇಟು ಹಾಕುತ್ತಿರುವುದು ಯಾಕೆ?
3/12#APMCAct #WeAgainstFarmBills

— Siddaramaiah (@siddaramaiah) September 21, 2020


ADVERTISEMENT

ರೈತರ ಬೆಳೆಗೆ ಉತ್ಪಾದನಾ ವೆಚ್ಚಕ್ಕೆ ತಕ್ಕ ಬೆಲೆ ಸಿಗದಿರುವುದೇ ಕೃಷಿಕ್ಷೇತ್ರದ ಮೂಲ ಸಮಸ್ಯೆ. ಇದಕ್ಕಾಗಿಯೇ ಬೆಂಬಲ ಬೆಲೆಯನ್ನು ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ ಹೊಸ ತಿದ್ದುಪಡಿ ಕಾನೂನಿನಲ್ಲಿ ಬೆಂಬಲಬೆಲೆಯ ರಕ್ಷಣೆಯನ್ನು ಕಿತ್ತೊಗೆದು ರೈತರನ್ನು ಅನಾಥರನ್ನಾಗಿ ಮಾಡಲಾಗಿದೆ.

ಎಪಿಎಂಸಿಯ ಹೊಸ ತಿದ್ದುಪಡಿ ಕಾಯ್ದೆ ಜಾರಿಗೆ ಬಂದ ನಂತರ ರಾಜ್ಯ ಸರ್ಕಾರಕ್ಕೆ ಎಂಪಿಎಂಸಿಯಿಂದ ಹೊರಗಿರುವ ವರ್ತಕರ ಮೇಲೆ ಯಾವ ನಿಯಂತ್ರಣವೂ ಇರುವುದಿಲ್ಲ.ಅವರ ವ್ಯವಹಾರದ ಮೇಲೆ ನಿಗಾ ಇಡುವಂತಿಲ್ಲ, ಶುಲ್ಕ, ಸೆಸ್, ಲೆವಿ ಸಂಗ್ರಹಿಸುವಂತಿಲ್ಲ. ಇದು ಸರ್ಕಾರದ ಸಂಪೂರ್ಣ ಶರಣಾಗತಿ.

ಯುಪಿಎ ಸರ್ಕಾರ ಜಾರಿಗೊಳಿಸಿದ್ದ ಆಹಾರ ಭದ್ರತೆ ಮಸೂದೆಯ ಮೂರು ಸ್ತಂಭಗಳಾದ ಬೆಂಬಲ ಬೆಲೆ, ರೈತರಿಂದ ಬೆಳೆ ಖರೀದಿ ಮತ್ತು ಪಡಿತರ ವ್ಯವಸ್ಥೆಯನ್ನು ನಾಶಗೊಳಿಸುವ ಮೂಲಕ ಕೃಷಿ ಕ್ಷೇತ್ರವನ್ನು ಖಾಸಗಿಯವರಿಗೆ ಮಾರಾಟ ಮಾಡಲು ಹೊರಟಿದೆ.

ಪ್ರಸ್ತುತ ರಾಜ್ಯದಲ್ಲಿ ಅನುಷ್ಠಾನದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ ರೈತರ ಹಿತಾಸಕ್ತಿ ರಕ್ಷಣೆಗೆ ಬದ್ಧವಾಗಿದೆ. ಸೆಕ್ಷನ್ 8 ರ ಪ್ರಕಾರ ‘’ಎಪಿಎಂಸಿ ಮಾರುಕಟ್ಟೆ ಯಾರ್ಡ್ ಒಳಗೆ ಇಲ್ಲವೆ ಹೊರಗೆ ಯಾರೂ ಕೂಡಾ ಅಧಿಕೃತ ಲೈಸೆನ್ಸ್ ಇಲ್ಲದೆ ವ್ಯಾಪಾರ ನಡೆಸುವಂತಿಲ್ಲ’’. ಇದಕ್ಕೆ ತಿದ್ದುಪಡಿ ಮಾಡಲಾಗಿದೆ.

Also Read: ದೇಶದ ಈರುಳ್ಳಿ ರಫ್ತು ನಿಷೇಧ; ಉದ್ದೇಶಿತ ಕೃಷಿ ಸುಧಾರಣಾ ಮಸೂದೆ ವಿರುದ್ದವಾಗಿದೆಯೇ?

ಸೆಕ್ಷನ್ 66 ಮತ್ತು 67ರ ಪ್ರಕಾರ ಯಾರ್ಡ್ ನ ಮಾರುಕಟ್ಟೆ ವ್ಯಾಪ್ತಿಯಲ್ಲಿ ಅಕ್ರಮ ವ್ಯಾಪಾರ, ಕಾಳಸಂತೆ ಮತ್ತು ಅಕ್ರಮ ದಾಸ್ತಾನು ನಿಯಂತ್ರಿಸಲು ಅವಕಾಶವಿದೆ. ಈಸೆಕ್ಷನ್ ಗೂ ತಿದ್ದುಪಡಿ ಮಾಡಲಾಗಿದೆ.

ರೈತರಿಗೆ ನ್ಯಾಯಬದ್ಧ ಬೆಲೆ ಸಿಗುವಂತೆ ಮಾಡಲು ಖಾಸಗಿ ಸಂಸ್ಥೆಗಳ ಲೆಕ್ಕಪತ್ರ ಪರಿಶೀಲಿಸಬಹುದು. ಸೆಕ್ಷನ್ 114,116 ಮತ್ತು 117ರಡಿಯಲ್ಲಿ ತಪ್ಪಿತಸ್ಥರಿಗೆ ಆರು ತಿಂಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ ಅವಕಾಶ ಇದೆ. ಈ ಆರೂ ಸೆಕ್ಷನ್ ಗಳನ್ನು ತಿದ್ದುಪಡಿ ಮೂಲಕ ಬದಲಾಯಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಧರಿಸಿವೆ.

Also Read: ಕೃಷಿ ಸುಧಾರಣಾ ಕಾಯ್ದೆಯ ಬಗ್ಗೆ ತಪ್ಪು ಮಾಹಿತಿ ಎಂದ ಮೋದಿ; ವಾಸ್ತವಾಂಶವೇನು?

ಪ್ರಸ್ತುತ 6% ರೈತರು ಮಾತ್ರ ಎಪಿಎಂಸಿಗಳಲ್ಲಿ ಬೆಳೆ ಮಾರಾಟ ಮಾಡುತ್ತಿದ್ದು 94% ರೈತರಿಗೆ ಮಾರುಕಟ್ಟೆ ಸೌಲಭ್ಯಗಳಿಲ್ಲ. ರೈತರಿಗೆ ನೆರವಾಗುವ ಉದ್ದೇಶ ಸರ್ಕಾರಕ್ಕಿದ್ದರೆ ಮಾರುಕಟ್ಟೆಗಳಿಲ್ಲದ ಕಡೆಗಳಲ್ಲಿ ಎಪಿಎಂಸಿಯಿಂದ ಪರವಾನಿಗೆ ಪಡೆದು ಮಾರುಕಟ್ಟೆಗಳನ್ನು ಸ್ಥಾಪಿಸಲು ಸರ್ಕಾರ ಉತ್ತೇಜನ ನೀಡಬಹುದಾಗಿದೆ.

ನಮ್ಮಲ್ಲಿ ಪ್ರತಿ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಪ್ರಜಾಸತ್ತಾತ್ಮಕವಾಗಿ ಚುನಾವಣೆಯಲ್ಲಿ ಆಯ್ಕೆಯಾದ ರೈತ ಪ್ರತಿನಿಧಿಗಳನ್ನೊಳಗೊಂಡ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿವೆ. ಕೇಂದ್ರ ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆಯ ಅನುಷ್ಠಾನದ ಮೂಲಕ ಕೃಷಿ ಉತ್ಪನ್ನಗಳ ಬೆಲೆ ನಿರ್ಧರಿಸಿರುವ ಪ್ರಕ್ರಿಯೆಯಲ್ಲಿ ಎಪಿಎಂಸಿಗಳ ಪಾತ್ರ ನಿರ್ಣಾಯಕ.

Also Read: ವಿವಾದಿತ ಮೂರು ಕೃಷಿ ಮಸೂದೆ: ರಾಜ್ಯಸಭೆಯ ಬಲಾಬಲದ ಲೆಕ್ಕಾಚಾರವೇನು?

ಇಲ್ಲಿ ರೈತರು ಮಧ್ಯವರ್ತಿಗಳ ಕಾಟ ಇಲ್ಲದೆ ನೇರವಾಗಿ ವರ್ತಕರಿಗೆ ತಮ್ಮ ಬೆಳೆಯನ್ನು ಮಾರಾಟ ಮಾಡಲು ಅವಕಾಶ ಇದೆ. ಇದರ ಜೊತೆಗೆ ತಮ್ಮ ಉತ್ಪನ್ನಗಳನ್ನು ಅಡಮಾನ ಇಟ್ಟು ಸಾಲ ಪಡೆಯಬಹುದು, ದಾಸ್ತಾನು ಮಳಿಗೆ, ವಿಶ್ರಾಂತಿ ಗೃಹಗಳ ಸೌಲಭ್ಯಗಳೂ ಇವೆ. ಬಹಳ ಮುಖ್ಯವಾಗಿ ರೈತರು ಸಂಘಟಿತರಾಗಲು ಇದು ವೇದಿಕೆ ಒದಗಿಸಿದೆ.

ಒಮ್ಮೆ ಈ ಬಹುರಾಷ್ಟ್ರೀಯ ಕಂಪೆನಿಗಳು ಕಾಯ್ದೆ ತಿದ್ದುಪಡಿ ಮೂಲಕ ಮೀಸೆ ತುರುಕಿಸಿ ಒಳಪ್ರವೇಶಿಸಿದರೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳನ್ನು ಅಪ್ರಸ್ತುತ ಗೊಳಿಸಿ, ನಾಶ ಮಾಡಲು ಬಹಳ ದಿನಗಳು ಬೇಕಾಗಲಾರದು. ಈ ಮೂಲಕ ಮಾರುಕಟ್ಟೆಯನ್ನು ತಮ್ಮ ನಿಯಂತ್ರಣಕ್ಕೆ ಪಡೆದು ನಿಧಾನವಾಗಿ ಎಪಿಎಂಸಿಗಳನ್ನು ಅಪ್ರಸ್ತುತಗೊಳಿಸುವುದು ಇದರ ಹಿಂದಿನ ನಿಜವಾದ ದುರುದ್ದೇಶ ಎನ್ನವುದನ್ನು ರೈತರು ಅರ್ಥಮಾಡಿಕೊಳ್ಳಬೇಕು.

ಎಪಿಎಂಸಿ ಕಾಯ್ದೆಗೆ ತಿದ್ದುಪಡಿಯನ್ನು ತರಲು ಹೊರಟಿರುವ ವಿಧಾನವೇ ಪ್ರಜಾಪ್ರಭುತ್ವ ವಿರೋಧಿಯಾದುದು. ರೈತರಿಗೆ ನೆರವಾಗುವ ಉದ್ದೇಶದಿಂದಲೇ ಕೇಂದ್ರ ಸರ್ಕಾರ ಈ ತಿದ್ದುಪಡಿಯನ್ನು ತಂದಿದ್ದರೆ ಇದನ್ನು ಮೊದಲು ವಿಸ್ತೃತ ಚರ್ಚೆಗೊಳಪಡಿಸಬೇಕಿತ್ತು. ರೈತ ಪ್ರತಿನಿಧಿಗಳು, ಎಪಿಎಂಸಿ ಪದಾಧಿಕಾರಿಗಳು ಮತ್ತು ವರ್ತಕರ ಅಭಿಪ್ರಾಯ ಪಡೆದು ಈ ತಿದ್ದುಪಡಿಯನ್ನು ರೂಪಿಸಬೇಕಾಗಿತ್ತು.

ಕೇಂದ್ರ ಸರ್ಕಾರದ ತಿದ್ದುಪಡಿ ಕಾಯ್ದೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ ತಿದ್ದುಪಡಿ ಮಸೂದೆಯ ಮೂಲಕ ಅನುಮೋದಿಸಲು ರಾಜ್ಯ ಸರ್ಕಾರ ಹೊರಟಿದೆ. ಇದರೊಳಗೆ ಅಡಕವಾಗಿರುವ ರೈತ ವಿರೋಧಿ ಹುನ್ನಾರಗಳನ್ನು ಕಾಂಗ್ರೆಸ್ ಪಕ್ಷ ವಿಧಾನಮಂಡಲದ ಎರಡೂ ಸದನಗಳಲ್ಲಿ ಎಳೆಎಳೆಯಾಗಿ ಬಿಡಿಸಿ ವಿರೋಧಿಸಲಿದೆ. ಯಾವುದೇ ಕಾರಣಕ್ಕೂ ಈ ಮಸೂದೆಯ ಅಂಗೀಕಾರಕ್ಕೆ ಅವಕಾಶ ನೀಡುವುದಿಲ್ಲ.”

Tags: ಕೃಷಿ ಮಸೂದೆಸಿದ್ದರಾಮಯ್ಯ
Previous Post

ದೇಶದ ಈರುಳ್ಳಿ ರಫ್ತು ನಿಷೇಧ; ಉದ್ದೇಶಿತ ಕೃಷಿ ಸುಧಾರಣಾ ಮಸೂದೆ ವಿರುದ್ದವಾಗಿದೆಯೇ?

Next Post

ರಾಜ್ಯಸಭೆಯಲ್ಲಿ ನೂತನ ಕೃಷಿ ಮಸೂದೆ ಅಂಗೀಕಾರ, ವಿಪಕ್ಷಗಳ ವಿರೋಧ!

Related Posts

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ
Serial

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

by ಪ್ರತಿಧ್ವನಿ
October 13, 2025
0

ಸಾಮಾಜಿಕ  ಅನ್ಯಾಯ ದೌರ್ಜನ್ಯ ತಾರತಮ್ಯಗಳಿಗೆ ಸ್ಪಂದಿಸುವುದು ನಾಗರಿಕತೆಯ ಲಕ್ಷಣ ನಾ ದಿವಾಕರ  ಜಗತ್ತಿನ ಇತಿಹಾಸದಲ್ಲಿ ಸಂಭವಿಸಿರುವ ಬಹುತೇಕ ವಿಪ್ಲವಗಳಲ್ಲಿ ಪ್ರಧಾನ ಪಾತ್ರ ವಹಿಸಿರುವುದು ಆಯಾ ಸಮಾಜಗಳಲ್ಲಿ ಕ್ರಿಯಾಶೀಲವಾಗಿ,...

Read moreDetails

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025
Next Post
ರಾಜ್ಯಸಭೆಯಲ್ಲಿ ನೂತನ ಕೃಷಿ ಮಸೂದೆ ಅಂಗೀಕಾರ

ರಾಜ್ಯಸಭೆಯಲ್ಲಿ ನೂತನ ಕೃಷಿ ಮಸೂದೆ ಅಂಗೀಕಾರ, ವಿಪಕ್ಷಗಳ ವಿರೋಧ!

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada