ಕಾಂಗ್ರೆಸ್ ಮುಖಂಡ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ರಾಷ್ಟ್ರಪತ್ನಿ ಎಂದು ಸಂಬೋಧಿಸಿ ನೀಡಿದ ಹೇಳಿಕೆ ವಿವಾದ ಲೋಕಸಭೆಯಲ್ಲಿ ಕೋಲಾಹಲ ಸೃಷ್ಟಿಸಿತು.
ಕಾಂಗ್ರೆಸ್ ಮುಖಂಡರ ರಾಷ್ಟ್ರಪತ್ನಿ ಹೇಳಿಕೆಗೆ ಬಿಜೆಪಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಲೋಕಸಭೆ ಕಲಾಪದಲ್ಲಿ ಮಾತನಾಡಿದ ಸಚಿವ ಸ್ಮೃತಿ ಇರಾನಿ, ದೇಶದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮಹಿಳೆ ಬಗ್ಗೆ ಈ ರೀತಿ ಕಾಂಗ್ರೆಸ್ ಮುಖಂಡ ಅದಿರ್ ರಂಜನ್ ಚೌಧರಿ ನೀಡಿದ ಲಘು ಹೇಳಿಕೆಯನ್ನು ಸಹಿಸಲು ಆಗುವುದಿಲ್ಲ. ಆದ್ದರಿಂದ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಆಡಳಿತರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ವಾಗ್ವಾದ ಉಂಟಾಗಿದ್ದು, ರಾಷ್ಟ್ರಪತ್ನಿ ಹೇಳಿಕೆ ಕುರಿತು ಈಗಾಗಲೇ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕರು ಕ್ಷಮೆಕೋರಿದ್ದಾರೆ ಎಂದು ಸ್ಪಷ್ಟಪಡಿಸಿದರು.